IPL matches: ಐಪಿಎಲ್ ಪ್ರಿಯರಿಗೆ ಬಿಎಂಟಿಸಿ, ನಮ್ಮ ಮೆಟ್ರೋ ಗುಡ್ ನ್ಯೂಸ್
ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಬಿಎಂಆರ್‌ಸಿಎಲ್ ಘೋಷಿಸಿದೆ. ಐಪಿಎಲ್ ಅಭಿಮಾನಿಗಳಿಗೆ ಸಹಕಾರಿ ಆಗುವ ದೃಷ್ಟಿಯಲ್ಲಿ ಹೆಚ್ಚುವರಿ ಸೇವೆಯನ್ನು ಒದಗಿಸಲಾಗುತ್ತಿದೆ. ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ಮೆಟ್ರೋ ಸಂಚಾರ ಇರಲಿದೆ.
ನಮ್ಮ ಮೆಟ್ರೋ -
ಬೆಂಗಳೂರು, ಏ.14: ಸಿಲಿಕಾನ್ ಸಿಟಿಯಲ್ಲಿ (Bengaluru) ಐಪಿಎಲ್ (IPL) ಕ್ರೇಜ್ ಶುರುವಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy stadium) ನಡೆಯಲಿರುವ ಹೈವೋಲ್ಟೇಜ್ ಪಂದ್ಯಗಳನ್ನು (IPL matches) ನೋಡಲು ಕಾತರರಾಗಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (BMRCL) ಗುಡ್ ನ್ಯೂಸ್ ನೀಡಿದೆ. ಏಪ್ರಿಲ್ 15, 18 ಮತ್ತು 24ರಂದು ನಡೆಯಲಿರುವ ಪಂದ್ಯಗಳ ದಿನದಂದು ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ನಮ್ಮ ಮೆಟ್ರೋ (namma metro) ಸಂಚಾರ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.
ಏಪ್ರಿಲ್ 15, 18 ಮತ್ತು 24ರಂದು ನಡೆಯುವ ಐಪಿಎಲ್ ಪಂದ್ಯಗಳಿಗೆ ಹೆಚ್ಚುವರಿ ಮೆಟ್ರೋ ಸೇವೆಯನ್ನು ಬಿಎಂಆರ್‌ಸಿಎಲ್ ಘೋಷಿಸಿದೆ. ಐಪಿಎಲ್ ಅಭಿಮಾನಿಗಳಿಗೆ ಸಹಕಾರಿ ಆಗುವ ದೃಷ್ಟಿಯಲ್ಲಿ ಹೆಚ್ಚುವರಿ ಸೇವೆಯನ್ನು ಒದಗಿಸಲಾಗುತ್ತಿದೆ. ರಾತ್ರಿ 11ರಿಂದ ತಡರಾತ್ರಿ 2 ಗಂಟೆವರೆಗೆ ಮೆಟ್ರೋ ಸಂಚಾರ ಇರಲಿದೆ.
ಕೊನೆಯ ರೈಲುಗಳ ಸಮಯ
ವೈಟ್‌ಫೀಲ್ಡ್: ರಾತ್ರಿ 12:30 ಗಂಟೆಗೆ
ಚಲ್ಲಘಟ್ಟ: ರಾತ್ರಿ 12:45 ಗಂಟೆಗೆ
ಸಿಲ್ಕ್ ಇನ್‌ಸ್ಟಿಟ್ಯೂಟ್ ಮತ್ತು ಮಾದವಾರ: ರಾತ್ರಿ 12:45 ಗಂಟೆಗೆ
ಬೊಮ್ಮಸಂದ್ರ: ರಾತ್ರಿ 1 ಗಂಟೆಗೆ
ಆರ್.ವಿ. ರಸ್ತೆ: ರಾತ್ರಿ 2 ಗಂಟೆಗೆ
ಮೆಜೆಸ್ಟಿಕ್‌ನಿಂದ ನಾಲ್ಕೂ ದಿಕ್ಕುಗಳಿಗೆ ತಡರಾತ್ರಿ 1:30ಕ್ಕೆ ಕೊನೆಯ ರೈಲು ಹೊರಡಲಿದೆ.
ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆ
ಇನ್ನು ಐಪಿಎಲ್ ಟಿಕೆಟ್‌ನಲ್ಲೇ ಮೆಟ್ರೋ ಕ್ಯೂಆರ್ (QR) ಕೋಡ್ ಲಭ್ಯವಿದ್ದು, ಎರಡು ಮಾರ್ಗಗಳ ಪ್ರಯಾಣಕ್ಕೆ ಇದನ್ನು ಬಳಸಬಹುದಾಗಿದೆ. ಸ್ಟೇಡಿಯಂಗೆ ಹತ್ತಿರವಿರುವ ಕಬ್ಬನ್ ಪಾರ್ಕ್ ಮತ್ತು ಎಂ.ಜಿ. ರಸ್ತೆ ನಿಲ್ದಾಣಗಳನ್ನು ಬಳಸಲು ಸೂಚಿಸಲಾಗಿದೆ. ಅದೇ ರೀತಿಯಾಗಿ ನಿಲ್ದಾಣಗಳಲ್ಲಿ ಹೆಚ್ಚಿನ ಪಾರ್ಕಿಂಗ್ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ. ದ್ವಿಚಕ್ರ ವಾಹನಗಳಿಗೆ 30 ರೂ, ಕಾರುಗಳಿಗೆ 60 ರೂ ಪಾರ್ಕಿಂಗ್ ಶುಲ್ಕ ನಿಗದಿ ಮಾಡಲಾಗಿದೆ. ಆ ಮೂಲಕ ಟ್ರಾಫಿಕ್ ಜಾಮ್ ತಪ್ಪಿಸಲು ಮೆಟ್ರೋ ಬಳಸುವಂತೆ ಬಿಎಂಆರ್‌ಸಿಎಲ್ ಮನವಿ ಮಾಡಿದೆ.
ಕೊಹ್ಲಿ, ರೋಹಿತ್‌ಗೆ ಗಾಯ; ಮುಂದಿನ ಐಪಿಎಲ್ ಪಂದ್ಯಗಳಿಗೆ ಅನುಮಾನ!
ಇನ್ನು ಕ್ರಿಕೆಟ್ ಪ್ರೇಮಿಗಳಿಗೆ ಅನುಕೂಲ ದೃಷ್ಟಿಯಿಂದ ಬಿಎಂಟಿಸಿ ಬಸ್ಗಳು ವಿಶೇಷ ಕಾರ್ಯಾಚರಣೆ ನಡೆಸಲಿವೆ. ಪಂದ್ಯ ನಡೆಯುವ ದಿನದಂದು ಬಿಎಂಟಿಸಿ ಬಸ್‌ಗಳ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಪ್ರಯಾಣಿಕರ ಬೇಡಿಕೆಗೆ ಅನುಸಾರವಾಗಿ ಬಿಎಂಟಿಸಿ ಬಸ್ಗಳನ್ನು ನಿಯೋಜಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶ ನಡುವೆ ಸಂಚರಿಸುವ ಬಸ್‌ಗಳ ವಿವರ
ಸರ್ಜಾಪುರ ಮತ್ತು ಕಾಡುಗೋಡಿ ಬಸ್ ನಿಲ್ದಾಣ
ಎಲೆಕ್ಟ್ರಾನಿಕ್ ಸಿಟಿ (ಹೊಸೂರು ರಸ್ತೆ)
ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್
ಆರ್.ಕೆ. ಹೆಗಡೆ ನಗರ – ಯಲಹಂಕ (ನಾಗವಾರ, ಟ್ಯಾನರಿ ರಸ್ತೆ ಮೂಲಕ)
ಹೊಸಕೋಟೆ
ಬನಶಂಕರಿ