ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Namma Metro Pink Line: ನಮ್ಮ ಮೆಟ್ರೋ ಪಿಂಕ್‌ ಲೈನ್‌ನಲ್ಲಿ ಇಂದಿನಿಂದ ಪರೀಕ್ಷಾರ್ಥ ಸಂಚಾರ

ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎತ್ತರಿಸಿದ ಮಾರ್ಗದ ನಿರ್ಮಾಣ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಈ ಮಾರ್ಗದಲ್ಲಿ ಇದೀಗ ಪರೀಕ್ಷಾರ್ಥ ಸಂಚಾರ ಶುರುವಾಗಿದೆ. ಈ ಮಾರ್ಗದಲ್ಲಿ ಒಟ್ಟು 5 ನಿಲ್ದಾಣಗಳು ಇವೆ. ಪರೀಕ್ಷಾರ್ಥ ಸಂಚಾರ ಮುಗಿದ ಬಳಿಕ ಸುರಕ್ಷತಾ ಪ್ರಮಾಣಪತ್ರ ಲಭಿಸಿದ ಕೂಡಲೇ ಈ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗಲಿದೆ

ನಮ್ಮ ಮೆಟ್ರೋ ಪಿಂಕ್‌ ಲೈನ್

ಬೆಂಗಳೂರು, ಜ.11: ಬನ್ನೇರುಘಟ್ಟ ರಸ್ತೆಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿ.ಮೀ. ಉದ್ದದ ಗುಲಾಬಿ ಮಾರ್ಗದಲ್ಲಿ (Namma Metro Pink Line) ಪರೀಕ್ಷಾರ್ಥ ಮೆಟ್ರೋ ರೈಲು ಸಂಚಾರವು ಭಾನುವಾರದಿಂದ ಆರಂಭವಾಗಲಿದೆ. ವರ್ಷಾಂತ್ಯದೊಳಗೆ ಈ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಶುರು ಮಾಡಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ಸಿದ್ಧತೆ ನಡೆಸಿದೆ.

ಈ ಮಾರ್ಗದಲ್ಲಿ ಏಪ್ರಿಲ್‌ವರೆಗೆ ಪರೀಕ್ಷಾರ್ಥ ರೈಲು ಸಂಚಾರ ನಡೆಯಲಿದೆ. ಈ ಅವಧಿಯಲ್ಲಿ ಟ್ರ್ಯಾಕ್ಷನ್‌, ಬ್ರೇಕ್‌, ಆಸಿಲೇಷನ್‌, ಸಿಗ್ನಲಿಂಗ್‌, ವಿದ್ಯುತ್‌ ಮತ್ತು ದೂರ ಸಂಪರ್ಕ ವ್ಯವಸ್ಥೆ ಸೇರಿದಂತೆ ಇನ್ನಿತರೆ ಹಲವು ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಬಳಿಕ ಆರ್‌ಡಿಎಸ್‌ಒ, ಸಿಎಂಆರ್‌ಎಸ್‌ ತಜ್ಞರ ತಂಡಗಳು ಪರಿಶೀಲನೆ ನಡೆಸಿ ವರದಿ ಸಲ್ಲಿಸಲಿವೆ. ಈ ವರದಿ ಆಧರಿಸಿ ಕೇಂದ್ರ ರೈಲ್ವೆ ಮಂಡಳಿಯು ಸುರಕ್ಷತಾ ಪ್ರಮಾಣಪತ್ರ ನೀಡಲಿದ್ದು, ಆನಂತರವೇ ವಾಣಿಜ್ಯ ಸಂಚಾರ ಆರಂಭಿಸಲಾಗುತ್ತದೆ.

ಕಾಳೇನ ಅಗ್ರಹಾರದಿಂದ ನಾಗವಾರವರೆಗಿನ 21.56 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ನಿರ್ಮಾಣ ಕಾಮಗಾರಿಯನ್ನು ಐದು ಪ್ಯಾಕೇಜ್‌ಗಳಲ್ಲಿ ಕೈಗೊಳ್ಳಲಾಗಿದೆ. ಇದರಲ್ಲಿ 7.5 ಕಿ.ಮೀ. ಎತ್ತರಿಸಿದ ಮಾರ್ಗವಿದ್ದು, ಉಳಿದ 13 ಕಿ.ಮೀ. ಸುರಂಗ ಮಾರ್ಗವಾಗಿದೆ. ಈ ಮಾರ್ಗವು ಒಟ್ಟು 17 ನಿಲ್ದಾಣಗಳನ್ನು ಒಳಗೊಂಡಿದೆ.

Namma Metro Pink Line: ನಮ್ಮ ಮೆಟ್ರೋ ಗುಡ್‌ ನ್ಯೂಸ್‌, ಗುಲಾಬಿ ಮಾರ್ಗದಲ್ಲಿ ಮೊದಲ ಚಾಲಕರಹಿತ ರೈಲು ಅನಾವರಣ

ಸದ್ಯ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಎತ್ತರಿಸಿದ ಮಾರ್ಗದ ನಿರ್ಮಾಣ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಈ ಮಾರ್ಗದಲ್ಲಿ ಇದೀಗ ಪರೀಕ್ಷಾರ್ಥ ಸಂಚಾರ ಶುರುವಾಗಿದೆ. ಈ ಮಾರ್ಗದಲ್ಲಿ ಒಟ್ಟು 5 ನಿಲ್ದಾಣಗಳು ಇವೆ. ಪರೀಕ್ಷಾರ್ಥ ಸಂಚಾರ ಮುಗಿದ ಬಳಿಕ ಸುರಕ್ಷತಾ ಪ್ರಮಾಣಪತ್ರ ಲಭಿಸಿದ ಕೂಡಲೇ ಈ ಮಾರ್ಗದಲ್ಲಿ ವಾಣಿಜ್ಯ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಅಧಿಕಾರಿಗಳು ತಿಳಿಸಿದ್ದಾರೆ.

ತಾವರೆಕೆರೆಯಿಂದ ನಾಗವಾರವರೆಗಿನ 13 ಕಿ.ಮೀ. ಉದ್ದದ ಸುರಂಗ ಮಾರ್ಗದಲ್ಲಿ 12 ನಿಲ್ದಾಣಗಳು ನಿರ್ಮಾಣವಾಗಲಿವೆ. ಈ ಮಾರ್ಗದಲ್ಲಿ ಸುರಂಗ ಮಾರ್ಗ ಪೂರ್ಣಗೊಂಡ ನಂತರವೇ ಪರೀಕ್ಷಾರ್ಥ ಸಂಚಾರ ಕೈಗೊಳ್ಳಲಾಗುತ್ತದೆ.

Namma Metro Oranage Line: ನಮ್ಮ ಮೆಟ್ರೋ ಆರೆಂಜ್‌ ಲೈನ್‌ ಇನ್ನೂ ತಡ, ವಿಳಂಬದಿಂದಾಗಿ ದಿನಕ್ಕೆ 2 ಕೋಟಿ ರೂಪಾಯಿ ವೆಚ್ಚ ಹೆಚ್ಚಳ!

ಮೆಟ್ರೋ ಎತ್ತರಿಸಿದ ನಿಲ್ದಾಣಗಳು: ಕಾಳೇನ ಅಗ್ರಹಾರ, ಹುಳಿಮಾವು, ಐಐಎಂಬಿ, ಜೆ.ಪಿ. ನಗರ 4ನೇ ಹಂತ, ತಾವರೆಕೆರೆ

ಮೆಟ್ರೋ ಸುರಂಗ ಮಾರ್ಗದಲ್ಲಿ ಬರುವ ನಿಲ್ದಾಣಗಳು: ಡೇರಿ ಸರ್ಕಲ್‌, ಲಕ್ಕಸಂದ್ರ, ಲ್ಯಾಂಗ್‌ಫೋರ್ಡ್‌, ರಾಷ್ಟ್ರೀಯ ಮಿಲಿಟರಿ ಶಾಲೆ, ಎಂ.ಜಿ. ರಸ್ತೆ, ಶಿವಾಜಿನಗರ, ಕಂಟೋನ್ಮೆಂಟ್‌ ನಿಲ್ದಾಣ, ಪಾಟರಿ ಟೌನ್‌, ಟ್ಯಾನರಿ ರಸ್ತೆ, ವೆಂಕಟೇಶಪುರ, ಕಾಡುಗೊಂಡನಹಳ್ಳಿ, ನಾಗವಾರ

ಹರೀಶ್‌ ಕೇರ

View all posts by this author