ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Namma Metro Purple Line: ಏಪ್ರಿಲ್‌ 5ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಕಾಲ ನಮ್ಮ ಮೆಟ್ರೋ ಸ್ಥಗಿತ

ಬಿಎಂಆರ್‌ಸಿಎಲ್‌ ಅಗತ್ಯ ಕಾಮಗಾರಿಯನ್ನು ನೆರವೇರಿಸಲು ಏಪ್ರಿಲ್‌ 5ರಂದು ಬೆಳಿಗ್ಗೆ 07:00ರಿಂದ 09:00 ಗಂಟೆಯವರೆಗೆ ನೇರಳೆ ಮಾರ್ಗದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ.

ಏಪ್ರಿಲ್‌ 5ರಂದು ನೇರಳೆ ಮಾರ್ಗದಲ್ಲಿ 2 ಗಂಟೆ ಕಾಲ ನಮ್ಮ ಮೆಟ್ರೋ ಸ್ಥಗಿತ

ನಮ್ಮ ಮೆಟ್ರೋ ನೇರಳೆ ಮಾರ್ಗ -

ಹರೀಶ್‌ ಕೇರ
ಹರೀಶ್‌ ಕೇರ Apr 2, 2026 7:13 PM

ಬೆಂಗಳೂರು, ಏ. 02: ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ (Namma Metro purple line) ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಬೆಳಿಗ್ಗೆ 2 ಗಂಟೆಗಳ ಕಾಲ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಪ್ರಯಾಣಿಕರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವಂತೆ ಬಿಎಂಆರ್‌ಸಿಎಲ್‌ (BMRCL) ಸೂಚಿಸಿದೆ.

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ದಿನಾಂಕ 05ನೇ ಏಪ್ರಿಲ್ 2026 (ಭಾನುವಾರ) ಕೈಗೊಳ್ಳುತ್ತಿದೆ. ಈ ಕಾಮಗಾರಿಯನ್ನು ನೆರವೇರಿಸಲು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07:00 ರಿಂದ 09:00 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ.

ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟದಿಂದ ಮೈಸೂರು ರಸ್ತೆ; ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್ (ಕಾಡುಗೋಡಿ); ಮಾದಾವರದಿಂದ ರೇಷ್ಮೆ ಸಂಸ್ಥೆ ಮತ್ತು ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07:00 ಗಂಟೆಯಿಂದ ವೇಳಾಪಟ್ಟಿಯಂತೆ ಸಂಚರಿಸಲಿವೆ.

ಬೆಳಿಗ್ಗೆ 09:00 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ ಎಂದು ತಿಳಿಸಿದೆ.

Basava Samskruti Abhiyana: ನಮ್ಮ ಮೆಟ್ರೋಗೆ ʼಬಸವ ಮೆಟ್ರೋʼ ಎಂದು ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ