ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namma Metro: ನಾಳೆ ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಸಂಚಾರ ಸ್ಥಗಿತ: ವಿವರ ಇಲ್ಲಿದೆ

ನಮ್ಮ ಮೆಟ್ರೋ ನಿಗಮವು ಮಾರ್ಚ್‌ 9 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು ಬೆಳಿಗ್ಗೆ 07 ರಿಂದ 10 ಗಂಟೆಯವರೆಗೆ, (ಮೂರು ಗಂಟೆಗಳ ಕಾಲ) ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಭಾಗಶಃ ರದ್ದು ಪಡಿಸಲಾಗುತ್ತದೆ.

ನಮ್ಮ ಮೆಟ್ರೋ ನೇರಳೆ ಮಾರ್ಗ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಕಾಮಗಾರಿ ಹಿನ್ನೆಲೆಯಲ್ಲಿ ಭಾನುವಾರ ನೇರಳೆ ಮಾರ್ಗದಲ್ಲಿ (purple line) ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ರೈಲುಗಳ ಸಂಚಾರ ಸೇವೆಯು (Train service) ಭಾಗಶಃ ಸ್ಥಗಿತವಾಗಲಿದೆ. ಬೆಳಿಗ್ಗೆ 07ರಿಂದ 10 ಗಂಟೆಯವರೆಗೆ, (ಮೂರು ಗಂಟೆಗಳ ಕಾಲ) ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಭಾಗಶಃ ರದ್ದು ಪಡಿಸಲಾಗುತ್ತದೆ ಎಂದು ಬಿಎಂಆರ್‌ಸಿಎಲ್‌ (BMRCL) ತಿಳಿಸಿದೆ.

ಈ ಬಗ್ಗೆ ಬಿಎಂಆರ್‌ಸಿಎಲ್‌ನಿಂದ ಮಾಹಿತಿ ನೀಡಿದ್ದು, "ನಮ್ಮ ಮೆಟ್ರೋ ನಿಗಮವು ಮಾರ್ಚ್‌ 9 (ಭಾನುವಾರ) ರಂದು ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹಳಿ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿದ್ದು ಬೆಳಿಗ್ಗೆ 07 ರಿಂದ 10 ಗಂಟೆಯವರೆಗೆ, (ಮೂರು ಗಂಟೆಗಳ ಕಾಲ) ಮಾಗಡಿ ರಸ್ತೆ ಮತ್ತು ಎಂಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳನ್ನು ಭಾಗಶಃ ರದ್ದು ಪಡಿಸಲಾಗುತ್ತದೆ" ಎಂದು ತಿಳಿಸಿದೆ.

"ಈ ರದ್ದತಿ ಅವಧಿಯಲ್ಲಿ ಕಬ್ಬನ್ ಪಾರ್ಕ್, ಡಾ. ಬಿ ಆರ್ ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಸರ್ ಎಂ ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ (ನೇರಳೆ ಮಾರ್ಗ) ಮತ್ತು ಕ್ರಾಂತಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣಗಳನ್ನು ಮುಚ್ಚಲಾಗಿರುತ್ತದೆ" ಎಂದು ಮೆಟ್ರೋ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 10.00 ಗಂಟೆಯವರೆಗೆ ಈ ರದ್ದತಿಯ ಕಾರಣದಿಂದಾಗಿ, ಕ್ಯೂಆರ್ ಟಿಕೆಟ್‌ಗಳ ಖರೀದಿಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ. ನೇರಳೆ ಮಾರ್ಗದಲ್ಲಿನ ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಲ್ಲಿ ರೈಲು ಲಭ್ಯವಿರುವುದಿಲ್ಲವಾದ್ದರಿಂದ, ನೇರಳೆ ಮಾರ್ಗದಿಂದ ಹಸಿರು ಮಾರ್ಗಕ್ಕೆ ಮತ್ತು ಹಸಿರು ಮಾರ್ಗದಿಂದ ನೇರಳೆ ಮಾರ್ಗಕ್ಕೆ ಪ್ರಯಾಣಿಸಲು ಸಾರ್ವಜನಿಕರು ಕ್ಯೂಆರ್ ಟಿಕೆಟ್‌ ಹಾಗೂ ಟೋಕನ್‌ಗಳನ್ನು ಖರೀದಿಸದಂತೆ ಸೂಚಿಸಲಾಗಿದೆ.

ಇತರೆಡೆ ಎಂದಿನಂತೆ ರೈಲು ಸೇವೆ

ನೇರಳೆ ಮಾರ್ಗದ ಇತರ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ಮತ್ತು ಮಾಗಡಿ ರಸ್ತೆ ನಡುವೆ, ಹಾಗೂ ಎಂಜಿ ರಸ್ತೆ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ನಡುವೆ, ರೈಲು ಸೇವೆಗಳು ಎಂದಿನಂತೆ ಬೆಳಿಗ್ಗೆ 07 ಗಂಟೆಗೆ ಪ್ರಾರಂಭವಾಗುತ್ತವೆ ಮತ್ತು ಮೇಲಿನ ಅವಧಿಯಲ್ಲಿ ವೇಳಾಪಟ್ಟಿಯ ಪ್ರಕಾರ ಲಭ್ಯವಿರುತ್ತವೆ. ಇನ್ನು ಹಸಿರು ಮಾರ್ಗದಲ್ಲಿ, ರೇಷ್ಮೆಸಂಸ್ಥೆ ಮತ್ತು ಮಾದಾವರ ಮೆಟ್ರೋ ನಿಲ್ದಾಣಗಳಿಂದ ರೈಲುಗಳ ಸೇವೆಗಳು ನಿಗದಿತ ಸಮಯ ಬೆಳಿಗ್ಗೆ 7:00 ಗಂಟೆಗೆ ಪ್ರಾರಂಭವಾಗಿ ಮುಂದುವರಿಯಲಿವೆ.

ಇದನ್ನೂ ಓದಿ: Namma Metro: ಮೆಟ್ರೋ ಪ್ರಯಾಣಿಕರ ಸಂಖ್ಯೆ ಗಣನೀಯ ಕುಸಿತ, ಮತ್ತೆ ದರ ಇಳಿಕೆ ಪರಿಶೀಲನೆ

ಹರೀಶ್‌ ಕೇರ

View all posts by this author