ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namma Metro: ನಾಳೆ ಬೆಂಗಳೂರಿನಲ್ಲಿ ಮಧ್ಯರಾತ್ರಿವರೆಗೆ ಮೆಟ್ರೋ ಸೇವೆ

ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. TATA IPL T-20 ಕ್ರಿಕೆಟ್ ಪಂದ್ಯಗಳು ಮೇ. 17 ಮತ್ತು 23 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸದರಿ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮಧ್ಯರಾತ್ರಿ 01.00ರ ವರೆಗೆ ವಿಸ್ತರಿಸಿದೆ.

IPL ಪಂದ್ಯಾಟ: ನಾಳೆ ಮಧ್ಯರಾತ್ರಿವರೆಗೂ ಸಂಚರಿಸಲಿದೆ ಮೆಟ್ರೋ

Profile Rakshita Karkera May 16, 2025 6:59 AM

ಬೆಂಗಳೂರು: ನಾಳೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯ ನಡೆಯಲಿದೆ. ಈ ನಿಟ್ಟಿನಲ್ಲಿ ಪ್ರೇಕ್ಷಕರಿಗೆ ಅನುಕೂಲ ಮಾಡಿ ಕೊಡುವ ನಿಟ್ಟಿನಲ್ಲಿ ನಮ್ಮ ಮೆಟ್ರೋ ಸೇವೆಯನ್ನೂ(Namma Metro) ನಾಳೆ ಮಧ್ಯರಾತ್ರಿವರೆಗೂ ವಿಸ್ತರಿಸಿದೆ. ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2025 ಪಂದ್ಯಗಳಿಗೆ ಮೆಟ್ರೋ ಸೇವೆ ವಿಸ್ತರಣೆ ಮಾಡಲು ನಿರ್ಧರಿಸಲಾಗಿದೆ. TATA IPL T-20 ಕ್ರಿಕೆಟ್ ಪಂದ್ಯಗಳು ಮೇ. 17 ಮತ್ತು 23 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸದರಿ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್‌ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮಧ್ಯರಾತ್ರಿ 01.00ರ ವರೆಗೆ ವಿಸ್ತರಿಸಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.35 ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ ಎಂದು ನಮ್ಮ ಮೆಟ್ರೋ ಪ್ರಕಟಣೆ ಹೊರಡಿಸಿದೆ.

ಶನಿವಾರ ನಡೆಯುವ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಕೋಲ್ಕತಾ ನೈಟ್‌ ರೈಡರ್ಸ್‌ (RCB vs KKR) ತಂಡಗಳು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾದಾಟ ನಡೆಸಲಿವೆ. ಇದರ ನಡುವೆ ಆರ್‌ಸಿಬಿ ತಂಡದ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಹೊರ ಬಿದ್ದಿದೆ. ಗಾಯದಿಂದ ಸಂಪೂರ್ಣ ಗುಣುಮುಖರಾಗಿರುವ ಆಸ್ಟ್ರೇಲಿಯಾ ಫಾಸ್ಟ್‌ ಬೌಲರ್‌ ಜಾಶ್‌ ಹೇಝಲ್‌ವುಡ್‌ (Josh Hazlewood) ಆಗಮಿಸುತ್ತಿದ್ದಾರೆ. ಆ ಮೂಲಕ ಆರ್‌ಸಿಬಿ ಬೌಲಿಂಗ್‌ ವಿಭಾಗಕ್ಕೆ ಆನೆ ಬಲ ಬಂದಂತಾಗಿದೆ.

ಇದಕ್ಕೂ ಮುನ್ನ ಜೂನ್‌ 11 ರಂದು ಆರಂಭವಾಗುವ ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ ನಿಮಿತ್ತ ಜಾಶ್‌ ಹೇಝಲ್‌ವುಡ್‌ ಭಾರತಕ್ಕೆ ಮರಳುವುದಿಲ್ಲ ಎಂದು ಹೇಳಲಾಗಿತ್ತು. ಆದರೆ, ಹಿಂದೂಸ್ಥಾನ್‌ ಟೈಮ್ಸ್‌ ವರದಿಯ ಪ್ರಕಾರ ಜಾಶ್‌ ಹೇಝಲ್‌ವುಡ್‌ ಬೆಂಗಳೂರಿಗೆ ಪ್ರಯಾಣ ಬಳೆಸುತ್ತಿದ್ದಾರೆಂದು ತಿಳಿದು ಬಂದಿದೆ.