ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Drug Smuggling Case: ಬೆಂಗಳೂರಿನಲ್ಲಿ 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಜಪ್ತಿ; ಏಳು ಆರೋಪಿಗಳು ಅರೆಸ್ಟ್‌

Bengaluru News: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಒಟ್ಟು 3.85 ಕೆಜಿ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್‌ಟಸಿ ಪಿಲ್ಸ್, 1.8 ಕೆಜಿ ಹೈಡ್ರೋಗಾಂಜಾ, 6 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರಿನಲ್ಲಿ 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಜಪ್ತಿ

-

Prabhakara R Prabhakara R Sep 29, 2025 3:47 PM

ಬೆಂಗಳೂರು: ರಾಜಧಾನಿಯಲ್ಲಿ ಬರೋಬ್ಬರಿ 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳನ್ನು ಪೊಲೀಸರು ಜಪ್ತಿ ಮಾಡಿ, ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಏಳು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 3.85 ಕೆಜಿ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್‌ಟಸಿ ಪಿಲ್ಸ್, 1.8 ಕೆಜಿ ಹೈಡ್ರೋಗಾಂಜಾ, 6 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಸಾಫ್ಟ್‌ವೇರ್ ಉದ್ಯೋಗಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೆವಿನ್ ರೋಜರ್ ಬಂಧಿತ ಆರೋಪಿಯಾಗಿದ್ದು, ಮೋಜಿನ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಬೆಂಗಳೂರಿನಲ್ಲಿ ಪರಿಚಯದ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ. ಈತನಿಂದ 500 ಗ್ರಾಂ ಹೈಡ್ರೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಅದೇ ರೀತಿ ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಡೆಂಟಲ್ ಕಾಲೇಜು ವಿದ್ಯಾರ್ಥಿಯನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಆ್ಯಂಟೋನಿ ಬಂಧಿತ ಆರೋಪಿ. ಈತ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಪರಿಚಯದ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಆರೋಪಿಯಿಂದ 300 ಗ್ರಾಂ ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಮತ್ತೊಂದೆಡೆ ವಿದೇಶಿ ಅಂಚೆ ಮೂಲಕ ಪಾರ್ಸೆಲ್ ಮೂಲಕ ಬಂದಿದ್ದ 1 ಕೋಟಿ ರೂ. ಮೌಲ್ಯದ ಮಾದಕ ಪದಾರ್ಥಗಳನ್ನು ಕೆ.ಜಿ.ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. 1 ಕೆ.ಜಿ 22 ಗ್ರಾಂ ಹೈಡ್ರೋ ಗಾಂಜಾ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪಾರ್ಸೆಲ್​​​​ ಬುಕ್ ಮಾಡಿದ್ದ ಆರೋಪಿಯ ವಿರುದ್ಧ ಕೆ.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನೂ ಓದಿ | ಆನೇಕಲ್‌ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಯ ಕೂದಲು ಹಿಡಿದು, ಒದ್ದು ಮನಸೋ ಇಚ್ಛೆ ಹಲ್ಲೆ!

ಇನ್ನು ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನ ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಎನ್‌ಗ್ವು ಕಿಂಗ್‌ಸ್ಲೆ ಹಾಗೂ ಥಾಮಸ್ ನವೀದ್ ಚಿಮೆ ಬಂಧಿತ ಆರೋಪಿಗಳು. ದೆಹಲಿಯಲ್ಲಿ ನೆಲೆಸಿರುವ ಇತರ ವಿದೇಶಿ ಪ್ರಜೆಗಳಿಂದ ಮಾದಕ ಪದಾರ್ಥಗಳನ್ನು ಖರೀದಿಸಿ ತರುತ್ತಿದ್ದ ಆರೋಪಿಗಳು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು. ಆರೋಪಿಗಳ ಪೈಕಿ ಒಬ್ಬ ಆನ್‌ಲೈನ್‌ ವಂಚನೆ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದು, ಗುಜರಾತ್‌ನ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿ ಕಳೆದ 2 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಡ್ರಗ್‌ ಪೆಡ್ಲಿಂಗ್‌ನಲ್ಲಿ ತೊಡಗಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.