ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದೆಹಲಿಯಲ್ಲಿ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರ; ಆರೋಗ್ಯ ಕುರಿತ ವಿಚಾರ ಸಂಕಿರಣದಲ್ಲಿ ಡಾ. ಸಿ.ಎನ್. ಮಂಜುನಾಥ್ ಭಾಗಿ

ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್ ವತಿಯಿಂದ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನಲ್ಲಿ ಆಯೋಜಿಸಲಾಗಿತ್ತು. ಆರೋಗ್ಯ ಕುರಿತಾದ ವಿಚಾರ ಸಂಕಿರಣದಲ್ಲಿ ಸಂಸದ ಹಾಗೂ ಹೃದ್ರೋಗ ತಜ್ಞರಾದ ಡಾ. ಸಿಎನ್ ಮಂಜುನಾಥ್ ಅವರು ಭಾಗಿಯಾಗಿದ್ದರು.

ದೆಹಲಿಯಲ್ಲಿ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರ

ದೆಹಲಿಯಲ್ಲಿ ಸಂಸದರಿಗಾಗಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಕಾರ್ಯಾಗಾರ ಉದ್ಘಾಟಿಸಿದ ಸಂಸದ ಡಾ.ಸಿ.ಎನ್.ಮಂಜುನಾಥ್‌. -

Prabhakara R
Prabhakara R May 27, 2026 2:14 PM

ನವದೆಹಲಿ: ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್ ವತಿಯಿಂದ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನಲ್ಲಿ ಮೇ 25ರಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಆರೋಗ್ಯ, ಶೈಕ್ಷಣಿಕ ಸುಧಾರಣೆ ಹಾಗೂ ಶಾಸನಬದ್ಧ ಸಂವಹನ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಆರೋಗ್ಯ ಕುರಿತಾದ ವಿಚಾರ ಸಂಕಿರಣವನ್ನು ಸಂಸದ ಹಾಗೂ ಹೃದ್ರೋಗ ತಜ್ಞರಾದ ಡಾ. ಸಿಎನ್ ಮಂಜುನಾಥ್ (Dr C N Manjunath) ಅವರು ನಡೆಸಿಕೊಟ್ಟರು.