ನವದೆಹಲಿ: ದಿ ನೇಷನ್ ಫಸ್ಟ್ ಪಾಲಿಸಿ ರಿಸರ್ಚ್ ಅಂಡ್ ಚೇಂಜ್ ಫೌಂಡೇಶನ್ ವತಿಯಿಂದ ಸಂಸದರಿಗಾಗಿ ರಾಷ್ಟ್ರಮಟ್ಟದ ಕಾರ್ಯಾಗಾರವನ್ನು ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್‌ನಲ್ಲಿ ಮೇ 25ರಂದು ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಆರೋಗ್ಯ, ಶೈಕ್ಷಣಿಕ ಸುಧಾರಣೆ ಹಾಗೂ ಶಾಸನಬದ್ಧ ಸಂವಹನ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಆರೋಗ್ಯ ಕುರಿತಾದ ವಿಚಾರ ಸಂಕಿರಣವನ್ನು ಸಂಸದ ಹಾಗೂ ಹೃದ್ರೋಗ ತಜ್ಞರಾದ ಡಾ. ಸಿಎನ್ ಮಂಜುನಾಥ್ (Dr C N Manjunath) ಅವರು ನಡೆಸಿಕೊಟ್ಟರು.