ನವದೆಹಲಿ, ಡಿ.27: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ ಜಿ ರಾಮ್ ಜಿ ಎಂದು ಬದಲಾಯಿಸಿದೆ. ಇದನ್ನು ವಿರೋಧಿಸಿ ಜನವರಿ 5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಬಚಾವ್ ಆಂದೋಲನವನ್ನು ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಶನಿವಾರ ಮಾತನಾಡಿದರು.
ಮಾನವೀಯತೆಯಿಂದ ನಿರಾಶ್ರಿತರಿಗೆ ಪರ್ಯಾಯ ವ್ಯವಸ್ಥೆ
ಬೆಂಗಳೂರಿನ ಯಲಹಂಕದ ಫಕೀರ್ ಕಾಲೋನಿ ಮತ್ತು ವಸೀಮ್ ಲೇಔಟ್‌ನ ವಸತಿಗಳನ್ನು ನೆಲಸಮಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಆ ಪ್ರದೇಶ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಪ್ರದೇಶವಾಗಿದ್ದು, ಅದು ಜನವಸತಿಗೆ ಸೂಕ್ತವಾದ ಪ್ರದೇಶವಲ್ಲ. ಆದ್ದರಿಂದ ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ನೆಲೆಸಿದ್ದವರಿಗೆ ನೋಟೀಸ್ ನೀಡಿ ತೆರವುಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ ಸರ್ಕಾರದ ಸೂಚನೆಗೆ ಮಣಿಯದೇ ಇದ್ದ ಕಾರಣ, ಒತ್ತುವರಿಯನ್ನು ತೆರವುಗೊಳಿಸಲಾಗಿದೆ. ಬಹುತೇಕ ಜನರು ವಲಸಿಗರಾಗಿದ್ದು, ಮಾನವೀಯತೆಯ ದೃಷ್ಟಿಯಿಂದ ನಿರಾಶ್ರಿತರಿಗೆ ಉಳಿದುಕೊಳ್ಳಲು ಪರ್ಯಾಯ ವ್ಯವಸ್ಥೆ ಮಾಡಲು ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ. ಅಲ್ಲಿ ಅತಿಕ್ರಮವಾಗಿ ವಾಸವಿದ್ದ ಬಹುತೇಕರು ವಲಸೆ ಕಾರ್ಮಿಕರು, ಸ್ಥಳೀಯ ನಿವಾಸಿಗಳಲ್ಲ, ಆದರೂ ಕೂಡ ಮಾನವೀಯತೆ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ.
ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ. ಪಿಣರಾಯಿ ವಿಜಯನ್ ಅವರು ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.
ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೊಡಲಿಯೇಟು
ನವದೆಹಲಿಯ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೊಡಲಿಯೇಟು ನೀಡಿರುವ ಕೇಂದ್ರ ಸರ್ಕಾರದ ಒಕ್ಕೂಟ ವಿರೋಧಿ, ದೇಶ ವಿರೋಧಿ ಕೃತ್ಯಕ್ಕೆ ಒಕ್ಕೊರಲ ಖಂಡನೆ ವ್ಯಕ್ತಪಡಿಸಿದೆವು.
ಬುಲ್ಡೋಜರ್ ಸಂಸ್ಕೃತಿ ನಮ್ಮಲ್ಲಿ ಇಲ್ಲ; ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿ.ಕೆ.ಶಿವಕುಮಾರ್ ತಿರುಗೇಟು
ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗೆ ತಯಾರಿ, ಮತಗಳ್ಳತನದ ವಿರುದ್ಧ ಹೋರಾಟ ರೂಪಿಸುವುದು, ಪ್ರಸ್ತುತ ಭಾರತ ಎದುರಿಸುತ್ತಿರುವ ಸಮಸ್ಯೆಗಳು, ಅವುಗಳ ಪರಿಹಾರ ಕುರಿತಾಗಿ ಸಭೆಯಲ್ಲಿ ವಿಸ್ತೃತವಾದ ಚರ್ಚೆ ನಡೆಯಲಿದೆ ಎಂದು ಸಿಎಂ ತಿಳಿಸಿದ್ದಾರೆ.