ಕರ್ನಾಟಕ ಬಜೆಟ್​ ಮಹಿಳಾ ದಿನಾಚರಣೆ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Electronic City Fly Over: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ವಾಹನ ಸಂಚಾರ ಬಂದ್

ಮುಂದಿನ ಆದೇಶದ ತನಕ ಈ ವಾಹನ ಸಂಚಾರ ನಿರ್ಬಂಧ ಆದೇಶ ಜಾರಿಯಲ್ಲಿರುತ್ತದೆ. ಎನ್‌ಹೆಚ್‌ಎಐ ಈ ಕುರಿತು ಮಾಹಿತಿ ನೀಡಿದ್ದು, ಬೆಳಗ್ಗೆ 6 ರಿಂದ ರಾತ್ರಿ 11ರ ತನಕ ಮಾತ್ರ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ನಡೆಸಬಹುದು. ರಾತ್ರಿ 11ರ ಬಳಿಕ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ

ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ವಾಹನ ಸಂಚಾರ ಬಂದ್

ಎಲೆಕ್ಟ್ರಾನಿಕ್‌ ಸಿಟಿ ಫ್ಲೈ ಓವರ್

ಹರೀಶ್‌ ಕೇರ ಹರೀಶ್‌ ಕೇರ Mar 6, 2025 7:05 AM

ಬೆಂಗಳೂರು: ಬೆಂಗಳೂರಿನ ಪ್ರಮುಖ ಫ್ಲೈ ಓವರ್‌ಗಳಲ್ಲಿ ಒಂದಾಗಿರುವ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ (electronic city fly over) ಅನ್ನು ನಿನ್ನೆ ರಾತ್ರಿಯಿಂದಲೇ ವಾಹನಗಳ ಸಂಚಾರಕ್ಕೆ (Traffic alert) ಬಂದ್ ಮಾಡಲಾಗಿದೆ. ಈ ಕುರಿತು ಬೆಂಗಳೂರು (Bengaluru news) ನಗರ ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರ್ಚ್‌ 5ರ ಬುಧವಾರ ರಾತ್ರಿಯಿಂದಲೇ ಅನ್ವಯವಾಗುವಂತೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ರಾತ್ರಿ ವಾಹನಗಳ ಸಂಚಾರ ಬಂದ್ ಮಾಡಲಾಗುತ್ತದೆ. ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಕಾರಣ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ರಾತ್ರಿ 11 ರಿಂದ ಬೆಳಗ್ಗೆ 6 ಗಂಟೆಯ ತನಕ ಬಂದ್ ಮಾಡಲಾಗಿದೆ. ಮುಂದಿನ ಆದೇಶದ ತನಕ ಈ ವಾಹನ ಸಂಚಾರ ನಿರ್ಬಂಧ ಆದೇಶ ಜಾರಿಯಲ್ಲಿರುತ್ತದೆ. ಎನ್‌ಹೆಚ್‌ಎಐ ಈ ಕುರಿತು ಮಾಹಿತಿ ನೀಡಿದ್ದು, ಬೆಳಗ್ಗೆ 6 ರಿಂದ ರಾತ್ರಿ 11ರ ತನಕ ಮಾತ್ರ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನ ಸಂಚಾರ ನಡೆಸಬಹುದು. ರಾತ್ರಿ 11ರ ಬಳಿಕ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದೆ.

ಸಂಚಾರಿ ಪೊಲೀಸರು ತಮ್ಮ ಪ್ರಕಟಣೆಯಲ್ಲಿ ಹೊಸೂರು ಮುಖ್ಯ ರಸ್ತೆ ಎಲಿವೇಟೆಡ್ ಫ್ಲೈ ಓವರ್‌ನಲ್ಲಿ ಎನ್‌ಹೆಚ್‌ಎಐ ವತಿಯಿಂದ ಪ್ರಮುಖ ನಿರ್ವಹಣೆ ಕಾಮಗಾರಿ ಕೈಗೊಳ್ಳಲಿದ್ದು, ಈ ಸಂಬಂಧ ಬುಧವಾರ ರಾತ್ರಿಯಿಂದ ಮುಂದಿನ ಸೂಚನೆವರೆಗೂ ಸಿಲ್ಕ್ ಬೋರ್ಡ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಕಡೆಗೆ & ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಕಡೆಗೆ ಎಲಿವೇಟೆಡ್ ಫ್ಲೈ ಓವರ್‌ನ ಎರಡೂ ಕಡೆಗಳಲ್ಲಿ ರಾತ್ರಿ 11 ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ವಾಹನ ಸಂಚಾರ ನಿರ್ಬಂಧಿಸಲಾಗುವುದು. ಹಗಲಿನ ವೇಳೆಯಲ್ಲಿ ಬೆಳಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಇದು ಎಲ್ಲಾ ರೀತಿಯ ವಾಹನಗಳಿಗೆ ಸಂಚಾರಕ್ಕೆ ತೆರೆದಿರುತ್ತದೆ. ಸಾರ್ವಜನಿಕರು ಸಹಕರಿಸಲು ಕೋರಿದೆ ಎಂದು ಹೇಳಿದ್ದಾರೆ.

ಸರಣಿ ಅಪಘಾತ, ಸಂಚಾರ ದಟ್ಟಣೆ, ಬೈಕ್ ವೀಲಿಂಗ್‌ ಹೀಗೆ ವಿವಿಧ ಕಾರಣಕ್ಕೆ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಸದಾ ಸುದ್ದಿಯಲ್ಲಿರುತ್ತದೆ. ಕೆಲವು ತಿಂಗಳ ಹಿಂದೆ ರಾತ್ರಿ ವೇಳೆ ಸುಮಾರು 2 ತಾಸು ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ವಾಹನಗಳು ಸಂಚಾರ ದಟ್ಟಣೆಯಲ್ಲಿ ಸಿಕ್ಕಿ ಬಿದ್ದಿದ್ದವು. ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಬೈಕ್‌ಗಳ ಸಂಚಾರ ರದ್ದುಗೊಳಿಸಬೇಕು ಎಂಬ ಬೇಡಿಕೆಯೂ ಇದೆ. ಆದರೆ ಈ ಕುರಿತು ಇನ್ನೂ ಸಂಚಾರಿ ಪೊಲೀಸರು ತೀರ್ಮಾನ ಕೈಗೊಂಡಿಲ್ಲ. 2019ರಲ್ಲಿಯೂ ನಿರ್ವಹಣೆ ಕಾರಣಕ್ಕೆ ಹಲವು ದಿನಗಳ ಕಾಲ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಬಸ್ ಹಾಗೂ ಬೃಹತ್ ವಾಹನಗಳ ಓಡಾಟ ನಿಷೇಧಿಸಲಾಗಿತ್ತು.

ಇದನ್ನೂ ಓದಿ: Bengaluru Traffic Police: ವಾಹನ ಸವಾರರ ಗಮನಕ್ಕೆ; ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದ್ರೆ ಡಿಎಲ್‌ ಅಮಾನತು!