ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namma Metro: ನಮ್ಮ ಮೆಟ್ರೋ ಟಿಕೆಟ್‌ ದರ ಹೆಚ್ಚಳಕ್ಕೆ ಕೆಂದ್ರದಿಂದ ಬ್ರೇಕ್‌

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಹೊರ ಬಿದ್ದಿದೆ. ಸದ್ಯಕ್ಕೆ ಟಿಕೆಟ್‌ ದರಗಳನ್ನು ಏರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಈ ವರ್ಷ ನಮ್ಮ ಮೆಟ್ರೋ ಟಿಕೆಟ್‌ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

ನಮ್ಮ ಮೆಟ್ರೋ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ (Namma Metro) ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ಹೊರ ಬಿದ್ದಿದೆ. ಸದ್ಯಕ್ಕೆ ಟಿಕೆಟ್‌ ದರಗಳನ್ನು ಏರಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ನಮ್ಮ ಮೆಟ್ರೋದ ಪ್ರಯಾಣ ದರಗಳು ಹೊಸ ವರ್ಷದಿಂದ ಏರಿಕೆಯಾಗಲಿವೆ ಎಂದು ಹೇಳಲಾಗಿತ್ತು. ಟಿಕೆಟ್‌ ದರ (Ticket price hike) ಹೆಚ್ಚಳದ ಕುರಿತು ರಚಿಸಲಾಗಿದ್ದ ಸಮಿತಿ ಈ ಬಗ್ಗೆ ಸೂಚನೆ ನೀಡಿತ್ತು. ಇದೀಗ ಕೇಂದ್ರ ಸರ್ಕಾರ ಟಿಕೆಟ್‌ ಬೆಲೆ ಏರಿಕೆ ನಿರ್ಧಾರಕ್ಕೆ ಬ್ರೇಕ್‌ ಹಾಕಿದೆ. ಹೀಗಾಗಿ ಈ ವರ್ಷ ನಮ್ಮ ಮೆಟ್ರೋ ಟಿಕೆಟ್‌ ಬೆಲೆ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

ಕಳೆದ ವಾರವಷ್ಟೇ ಟಿಕೆಟ್ ದರ ಏರಿಕೆ ಸಂಬಂಧ ಬಿಎಂಆರ್​ಸಿಎಲ್ (Bangalore Metro Rail Corporation Limited) ಸಮಿತಿ ರಚಿಸಿ ಸಭೆ ನಡೆಸಿತ್ತು. ಶೇ. 15ರಷ್ಟು ದರ ಹೆಚ್ಚಳ ಮಾಡಲು ನಿರ್ಧರಿಸಿತ್ತು. ಆದರೆ ಇದಕ್ಕೆ ಇದೀಗ ಕೇಂದ್ರ ಸರ್ಕಾರ ಅನುಮೋದನೆ ನೀಡಿಲ್ಲ ಎನ್ನಲಾಗಿದೆ.



ರಾಜ್ಯದಲ್ಲಿ ಕೆಲವು ದಿನಗಳ ಹಿಂದೆಯಷ್ಟೇ ಬಸ್‌ ಪ್ರಯಾಣ ದರವನ್ನು ಏರಿಕೆ ಮಾಡಲಾಗಿತ್ತು. ಇದೀಗ ಮೆಟ್ರೋ ಟಿಕೆಟ್‌ ಹೆಚ್ಚಳ ಮಾಡಿದರೆ ಸಮಸ್ಯೆಯಾಗಲಿದೆ ಎಂದು ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು. ಜತೆಗೆ ಕೇಂದ್ರವೂ ಇದೇ ಕಾರಣ ನೀಡಿ ಬೆಲೆ ಹೆಚ್ಚಳಕ್ಕೆ ತಡೆ ಒಡ್ಡಿದೆ ಎಂದು ಮೂಲಗಳು ತಿಳಿಸಿವೆ.

ʼʼಬಿಎಂಆರ್​​ಸಿಎಲ್ ಫೆ. 1ರಿಂದ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಲು ಸಿದ್ಧತೆ ನಡೆಸಿತ್ತು. ಇದೀಗ ಬಿಎಂಆರ್​ಸಿಎಲ್ ನಿರ್ಧಾರಕ್ಕೆ ಕೇಂದ್ರದಿಂದ ತಾತ್ಕಾಲಿಕ ತಡೆಯೊಡ್ಡಲಾಗಿದೆʼʼ ಎಂದು ಮೂಲಗಳು ತಿಳಿಸಿವೆ. ನಮ್ಮ ಮೆಟ್ರೋ ಈ ಹಿಂದೆ 2017ರಲ್ಲಿ ಪ್ರಯಾಣ ದರ ಹೆಚ್ಚಳ ಮಾಡಿತ್ತು. ಇದೀಗ ಪ್ರಯಾಣ ದರ ಏರಿಕೆಗೆ ಮುಂದಾಗಿದ್ದ ಬಿಎಂಆರ್​ಸಿಎಲ್​ಗೆ ಹಿನ್ನಡೆಯಾಗಿದೆ.

ಪ್ರಯಾಣಿಕರ ಸಂಖ್ಯೆ ಹೆಚ್ಚಳ

ಬಿಎಂಆರ್‌ಸಿಎಲ್ ಮಾಹಿತಿಯ ಇತ್ತೀಚೆಗೆ ಮೆಟ್ರೋ ಪ್ರಯಾನಿಕರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ವಹಣಾ ವೆಚ್ಚ ಕೂಡ ಹೆಚ್ಚಾಗಿದೆ. ಹೀಗಾಗಿ ಟಿಕೆಟ್ ದರ ಹೆಚ್ಚಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಸುದ್ದಿಯನ್ನೂ ಓದಿ: DK Shivakumar: ಹೊಸಕೋಟೆ, ಬಿಡದಿ, ನೆಲಮಂಗಲಕ್ಕೂ ನಮ್ಮ ಮೆಟ್ರೋ ವಿಸ್ತರಣೆ!

ಮೆಟ್ರೋ ಟಿಕೆಟ್ ದರ ಹೆಚ್ಚಳ ವಿಚಾರವಾಗಿ 2024ರ ಅ. 28ರವರೆಗೆ ಪ್ರಯಾಣಿಕರ ಅಭಿಪ್ರಾಯ ತಿಳಿಸಲು ಅವಕಾಶ ನೀಡಲಾಗಿತ್ತು. ಪ್ರಯಾಣಿಕರ ಅಭಿಪ್ರಾಯವನ್ನು ಸಂಗ್ರಹಿಸಿರುವ ಸಮಿತಿ, ಆ ವರದಿಯನ್ನು ಡಿಸೆಂಬರ್‌ನ 3ನೇ ವಾರದಲ್ಲಿ ಬಿಎಂಆರ್​ಸಿಎಲ್​ಗೆ ಸಲ್ಲಿಸಿತ್ತು. ವರದಿಯನ್ನು ಡಿಸೆಂಬರ್ ಕೊನೆಯ ವಾರದಲ್ಲಿ ಬಿಎಂಆರ್​ಸಿಎಲ್ ಸರ್ಕಾರಕ್ಕೆ ಸಲ್ಲಿಸಿತ್ತು. ಸದ್ಯ ನಮ್ಮ ಮೆಟ್ರೋದಲ್ಲಿ ಕನಿಷ್ಠ 10 ರೂ. ಗರಿಷ್ಠ 60 ರೂ. ಪ್ರಯಾಣ ದರ ಇದೆ.