Rama Navami 2025: ನಾಳೆ ರಾಮನವಮಿ; ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆ ನಿಷೇಧ
ಈ ಬಗ್ಗೆ ಬಿಬಿಎಂಪಿಯ ಪಶುಪಾಲನಾ ವಿಭಾಗದಿಂದ ಆದೇಶ ಹೊರಡಿಸಿದ್ದು. ”ಇದೇ ಏಪ್ರಿಲ್ 06) ರಾಮನವಮಿ ಹಬ್ಬದಂದು ಕುರಿ, ಕೋಳಿ, ಮೀನು, ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.


ಬೆಂಗಳೂರು: ರಾಮನವಮಿ (Ram Navami 2025) ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ಏಪ್ರಿಲ್ 06ರಂದು ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (bruhat bengaluru mahanagara palike) ವ್ಯಾಪ್ತಿಯಲ್ಲಿ ಮಾಂಸ ಮಾರಾಟ (no meat) ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಈ ಕುರಿತು ಬಿಬಿಎಂಪಿಯ (BBMP) ಪಶುಪಾಲನಾ ವಿಭಾಗ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.
ಭಾನುವಾರ ರಾಮನವಮಿ ಆಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿವಧೆ (animal slaughter and meat sale) ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಬಗ್ಗೆ ಬಿಬಿಎಂಪಿಯ ಪಶುಪಾಲನಾ ವಿಭಾಗದಿಂದ ಆದೇಶ ಹೊರಡಿಸಿದ್ದು. ”ಇದೇ ಏಪ್ರಿಲ್ 06) ರಾಮನವಮಿ ಹಬ್ಬದಂದು ಕುರಿ, ಕೋಳಿ, ಮೀನು, ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆ ಮಾಡಿದರೆ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ.
ಭಾನುವಾರ ರಜೆ ಇರುವುದರಿಂದ ಸಾಮಾನ್ಯವಾಗಿ ಮಾಂಸಾಹಾರ ಪ್ರಿಯರು ಬಾಡೂಟ ಸವಿಯುತ್ತಾರೆ. ಅಂದು ಮಾಂಸದಂಗಡಿಗಳಿಗೂ ಹೆಚ್ಚಿನ ವ್ಯಾಪಾರ ನಡೆಯುವುದು ರೂಢಿಯಾಗಿದೆ. ಆದರೆ ಈ ಏಪ್ರಿಲ್ 6ರಂದು ಮಾಂಸ ಮಾರಾಟ ಇರುವುದಿಲ್ಲವಾದ್ದರಿಂದ ಮಾಂಸದಂಗಡಿಗಳೂ ತೆರೆಯುವುದಿಲ್ಲ.
ನಕಲಿ ಪನೀರ್ ಮಾರಾಟ, ಕಠಿಣ ಕ್ರಮಕ್ಕೆ ಜೋಶಿ ಆಗ್ರಹ
ನವದೆಹಲಿ: ದೇಶಾದ್ಯಂತ ಮಾರುಕಟ್ಟೆಯಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟವಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Prahlad Joshi) ಅವರು ಬೆಳಕು ಚೆಲ್ಲಿದ್ದಾರೆ. ದೇಶಾದ್ಯಂತ ನಕಲಿ ಮತ್ತು ಕಲಬೆರಕೆ ಪನೀರ್ (Paneer) ಮಾರಾಟ ಮತ್ತು ಬಳಕೆ ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿಗೆ (NCH) ವ್ಯಾಪಕ ದೂರುಗಳು ಬರುತ್ತಿವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.ಪಿ.ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ದೇಶದ ಮಾರುಕಟ್ಟೆಗಳಲ್ಲಿ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟದ ಬಗ್ಗೆ ಕಳೆದ ಕೆಲವು ದಿನಗಳಿಂದ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಅನೇಕ ದೂರುಗಳನ್ನು ಸ್ವೀಕರಿಸಿದೆ. ಹೀಗಾಗಿ ಇದರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಿ ಎಂದು ಸಚಿವ ಪ್ರಲ್ಹಾದ್ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ದೇಶಾದ್ಯಂತ ಫಾಸ್ಟ್ ಫುಡ್ ಕೇಂದ್ರಗಳು, ರೆಸ್ಟೋರೆಂಟ್‌ಗಳು ಮತ್ತಿತರೆಡೆ ನಕಲಿ ಮತ್ತು ಕಲಬೆರಕೆ ಪನೀರ್ ಮಾರಾಟ ಮಾಡಲಾಗುತ್ತಿದೆ. ವಿಶೇಷವಾಗಿ ಪನೀರ್ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥವಾಗಿದ್ದರಿಂದ ಇದನ್ನು ಗಮನಿಸಿರುವ ಸಾರ್ವಜನಿಕರನೇಕರು ಗ್ರಾಹಕ ಸಹಾಯವಾಣಿ ಮೂಲಕ ವ್ಯಾಪಕವಾಗಿ ದೂರು ಸಲ್ಲಿಸಿ ಗಮನ ಸೆಳೆದಿದ್ದಾರೆ.
ಕಲಬೆರಕೆ ಪನೀರ್ ಸೇವನೆಯಿಂದ ಜನರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಗ್ರಾಹಕರು ನೀಡಿದ ದೂರಿನಲ್ಲಿ ತೀವ್ರ ಕಳವಳ ಸಹ ವ್ಯಕ್ತಪಡಿಸಿದ್ದಾರೆ. ಅಲ್ಲದೇ, ಆಹಾರ ಗುಣಮಟ್ಟ ಮತ್ತು ಸುರಕ್ಷತೆಗಾಗಿ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ದುಗುಡವನ್ನು ತಮ್ಮ ಗಮನಕ್ಕೆ ತರಬಯಸಿದ್ದೇನೆ ಎಂದು ಸಚಿವ ಜೋಶಿ ಅವರು ಕೇಂದ್ರ ಆರೋಗ್ಯ ಸಚಿವರ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ: Greater Bengaluru: ರಾಜ್ಯ ಸರ್ಕಾರಕ್ಕೆ ಹಿನ್ನಡೆ; ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಕಳುಹಿಸಿದ ಗವರ್ನರ್