ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಕ್ಷಿಣಕ್ಕೆ ಶಿಕ್ಷೆ ಬೇಡ: ಡಿಕೆಶಿ ಗುಡುಗು

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠ ವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಽಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯ ಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ ನ್ಯಾಯಯುತ ಪಾಲನ್ನು ನೀಡಿ ಎಂದು ಶಿವಕುಮಾರ್ ಅವರು ಒತ್ತಾಯಿಸಿದರು.

ದಕ್ಷಿಣಕ್ಕೆ ಶಿಕ್ಷೆ ಬೇಡ: ಡಿಕೆಶಿ ಗುಡುಗು

-

Profile
Ashok Nayak Aug 21, 2026 7:30 AM

ಅಮಿತ್ ಶಾ ಎದುರು ಅನುದಾನ, ಕ್ಷೇತ್ರ ಮರುವಿಂಗಡಣೆ ವಿಷಯ ಪ್ರಸ್ತಾಪ

ಮಹಾಬಲಿಪುರಂನಲ್ಲಿ ಶಾ ನೇತೃತ್ವದಲ್ಲಿ 31ನೇ ದಕ್ಷಿಣ ವಲಯ ಮಂಡಳಿ ಸಭೆ

ಬೆಂಗಳೂರು: ತಮಿಳುನಾಡಿನ ಮಹಾಬಲಿಪುರಂ ನಲ್ಲಿ ಗೃಹಸಚಿವ ಅಮಿತ್ ಶಾ ನೇತೃತ್ವದಲ್ಲಿ ಗುರುವಾರ ನಡೆದ 31ನೇ ದಕ್ಷಿಣ ವಲಯ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾನಾ ಯೋಜನೆಗಳಿಗೆ ಅನುಮತಿ ಸೇರಿದಂತೆ ದಕ್ಷಿಣ ಭಾರತಕ್ಕೆ ಸಲ್ಲಬೇಕಾದ ನ್ಯಾಯ ಯುತ ಪಾಲನ್ನು ನೀಡಿ ಎಂದು ಒತ್ತಾಯಿಸಿದರು. ಈ ಸಭೆಯಲ್ಲಿ ಕರ್ನಾಟಕ, ತಮಿಳುನಾಡು, ಕೇರಳ, ಆಂಧ್ರ ಪ್ರದೇಶ, ತೆಲಂಗಾಣ ಮುಖ್ಯ ಮಂತ್ರಿಗಳು ಭಾಗಿಯಾಗಿದ್ದರು. ಈ ವೇಳೆ ಡಿ.ಕೆ ಶಿವಕುಮಾರ್ ಮತ್ತು ತಮಿಳುನಾಡು ಮುಖ್ಯ ಮಂತ್ರಿ ಜೋಸೆಫ್ ವಿಜಯ್ ಅವರು ಲೋಕ ಸಭಾ ಸ್ಥಾನಗಳನ್ನು ಯಥಾಸ್ಥಿತಿಯಲ್ಲಿ ಉಳಿಸಿಕೊಂಡು ಮಹಿಳಾ ಮೀಸಲು ಜಾರಿಗೊಳಿಸುವ ಮತ್ತು ದಕ್ಷಿಣದ ರಾಜ್ಯಗಳಿಗೆ ಹೆಚ್ಚಿನ ಅನುದಾನ ನೀಡುವ ಬೇಡಿಕೆ ಮಂಡಿಸಿದರು.

ಜನಸಂಖ್ಯೆ ನಿಯಂತ್ರಣದಲ್ಲಿ ದಕ್ಷಿಣ ರಾಜ್ಯಗಳು ಸಾಧಿಸಿರುವ ಯಶಸ್ಸು, ಅವುಗಳ ರಾಜಕೀಯ ಧ್ವನಿಯನ್ನು ಕಡಿಮೆ ಮಾಡಲು ಕಾರಣವಾಗಬಾರದು. 1971ರ ಜನಗಣತಿಯನ್ನು ಆಧಾರವಾಗಿಟ್ಟುಕೊಂಡು ಮುಂದಿನ 25 ವರ್ಷಗಳ ಕಾಲ ಲೋಕಸಭೆಯ ಒಟ್ಟು 543 ಸ್ಥಾನಗಳನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಬೇಕು. ಈ ವಿಚಾರದಲ್ಲಿ ತಮಿಳುನಾಡು, ಕೇರಳ, ತೆಲಂಗಾಣ, ಕರ್ನಾಟಕ ರಾಜ್ಯಗಳು ಏಕರೂಪದ ಅಭಿಪ್ರಾಯ ಹೊಂದಿದ್ದೇವೆ ಎಂದು ಸಿಎಂ ಡಿಕೆಶಿ ಹೇಳಿದರು.

ಇದನ್ನೂ ಓದಿ: CM DK Shivakumar: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಕರ್ನಾಟಕ ಬಲಿಷ್ಠವಾದಾಗ, ದಕ್ಷಿಣ ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ದಕ್ಷಿಣ ಭಾರತ ಬಲಿಷ್ಠವಾದಾಗ, ಭಾರತ ಮತ್ತಷ್ಟು ಬಲಿಷ್ಠವಾಗುತ್ತದೆ. ನಾವು ಭಾರತದ ಅಭಿವೃದ್ಧಿಯ ಪಾಲುದಾರರು. ನಮಗೆ ನಮ್ಮ ನಿಽಗಳಲ್ಲಿ, ನಮ್ಮ ಧ್ವನಿಯಲ್ಲಿ ನ್ಯಾಯ ಬೇಕು. ನಮಗೆ ನ್ಯಾಯ ಯುತವಾಗಿ ಅನುದಾನ ನೀಡಿ. ದಕ್ಷಿಣ ಭಾರತಕ್ಕೆ ಸಲ್ಲಬೇಕಾದ ನ್ಯಾಯಯುತ ಪಾಲನ್ನು ನೀಡಿ ಎಂದು ಶಿವಕುಮಾರ್ ಅವರು ಒತ್ತಾಯಿಸಿದರು. 15ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ರೂ.5495 ಕೋಟಿ ವಿಶೇಷ ಅನುದಾನ ಮತ್ತು 6000 ಕೋಟಿ ರು. ಅನುದಾನವನ್ನು ಶಿಫಾರಸು ಮಾಡಿತ್ತು. ಆದರೆ, ಅನುದಾನಗಳು ಬಿಡುಗಡೆಯಾಗಿಲ್ಲ. ಈ ಬಗ್ಗೆ ಕ್ರಮವಹಿಸುವಂತೆ ಡಿಕೆಶಿ ಒತ್ತಾಯಿಸಿದರು.

ಯೋಜನೆಗಳಿಗೆ ಆಗ್ರಹ: ಬೆಂಗಳೂರು- ಮುಂಬೈ ಹೈಸ್ಪೀಡ್ ರೈಲು ಯೋಜನೆ, ಬೆಂಗಳೂರು ಉಪನಗರ ವರ್ತುಲ ರಸ್ತೆ, ರಾಯಚೂರಿಗೆ ಏಮ್ಸ್ ಆಸ್ಪತ್ರೆ ಹಾಗೂ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್‌ನಂತಹ ಹೆಚ್ಚುವರಿ ಕೇಂದ್ರ ಯೋಜನೆಗಳ ಮೂಲಕ ಕರ್ನಾಟಕಕ್ಕೆ ನ್ಯಾಯ ಒದಗಿಸ ಬೇಕು ಎಂದವರು ತ್ತಾಯಿಸಿದರು. ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಪಕ್ಕದ ಕುಳಿತಿದ್ದ ತಮಿಳುನಾಡು ಮುಖ್ಯ ಮಂತ್ರಿ ಸಿ. ಜೋಸೆಫ್ ವಿಜಯ್ ಅವರು, ಕಾವೇರಿ ಹಾಗೂ ಮೇಕೆದಾಟು ವಿಚಾರಗಳ ಕುರಿತು ಡಿಕೆಶಿ ಜತೆ ಮಾತುಕತೆ ನಡೆಸಿದರು. ‌

11 DK

ಇದೇ ಸಂದರ್ಭದಲ್ಲಿ ವಿಜಯ್ ಅವರು ಅಮಿತ್ ಶಾ ಅವರನ್ನು ಸನ್ಮಾನಿಸಿದರು. ಸಭೆಗೂ ಮುನ್ನ ಡಿ.ಕೆ. ಶಿವಕುಮಾರ್ ಅವರು, ಕೇರಳ ಮುಖ್ಯ ಮಂತ್ರಿ, ತೆಲಂಗಾಣದ ಉಪಮುಖ್ಯ ಮಂತ್ರಿಯವ ರೊಂದಿಗೂ ಮಾತುಕತೆ ನಡೆಸಿದರು. ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ತೆಲಂಗಾಣ ಕೃಷಿ ಸಚಿವ ತುಮ್ಮಲ ನಾಗೇಶ್ವರ ರಾವ್ ಜತೆ ಮಾತುಕತೆ ನಡೆಸಿದರು. ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಗಳೂ ಮಂಡಳಿಯ ಭಾಗವಾಗಿವೆ. ಈ ಸಭೆಯಲ್ಲಿ ದಕ್ಷಿಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸಂಬಂಧಿಸಿದ ಪ್ರಮುಖ ಅಂತರ್ ರಾಜ್ಯ ಮತ್ತು ರಾಷ್ಟ್ರೀಯ ಸಮಸ್ಯೆಗಳನ್ನು ಚರ್ಚಿಸಲಾಗುತ್ತದೆ. ಮೇಕೆದಾಟು, ಕಾವೇರಿ ವಿವಾದ ಪ್ರಸ್ತಾಪ: ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು, ಮೇಕೆದಾಟು ಯೋಜನೆ ಮತ್ತು ಕರ್ನಾಟಕ- ತಮಿಳುನಾಡು ನಡುವಿನ ಕಾವೇರಿ ನೀರು ವಿವಾದವನ್ನೂ ಪ್ರಸ್ತಾಪಿಸಿದರು.

ಮೇಕೆದಾಟು ಜಲಾಶಯ ನಿರ್ಮಾಣದಿಂದ ತಮಿಳುನಾಡು ಮತ್ತು ಪುದುಚೇರಿಯ ರೈತರಿಗೂ ಪ್ರಯೋಜ ನವಾಗಲಿದೆ ಎಂದು ಹೇಳಿದರು. ಕಾವೇರಿ(ಮೇಕೆದಾಟು), ಕೃಷ್ಣಾ, ತುಂಗ ಭದ್ರಾ, ಪೆನ್ನಾರ್ ಮತ್ತು ಪಾಲಾರ್ ನದಿಗಳು ಇಡೀ ದಕ್ಷಿಣ ರಾಜ್ಯಗಳ ಜೀವನಾಡಿಗಳಾಗಿವೆ. ನೀರು ನಮ್ಮನ್ನು ಒಗ್ಗೂಡಿಸಬೇಕು, ವಿಭಜಿಸಬಾರದು. ನೀರಿನ ಹಂಚಿಕೆಯಿಂದ ನೀರಿನ ಸಹಕಾರದತ್ತ ಸಾಗುವ ಸಮಯ ಈಗ ಬಂದಿದೆ. ಅದಕ್ಕೆ ಅವಕಾಶ ಮಾಡಿಕೊಡಿ ಎಂದವರು ಸಿಎಂ ಮನವಿ ಮಾಡಿದರು.

“ಸಭೆಗೆ ನಡೆದುಕೊಂಡು ಬರುವಾಗ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕರ್ನಾಟಕ ಮತ್ತು ತಮಿಳುನಾಡಿನ ನಡುವಿನ ಕಾವೇರಿ ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಹೇಳಿದರು. ಮೇಕೆದಾಟು ಯೋಜನೆಯ ಪ್ರತಿಯೊಂದು ಹನಿ ನೀರೂ ತಮಿಳುನಾಡು ಮತ್ತು ಪುದುಚೇರಿಯ ರೈತರಿಗೆ ನೆರವಾಗಲಿದೆ. ಇಲ್ಲಿ ಸಂಗ್ರಹವಾಗುವ ಒಂದೇ ಒಂದು ಹನಿ ನೀರನ್ನು ನೀರಾವರಿಗೆ ಬಳಸುವುದಿಲ್ಲ. ಈ ಅಣೆಕಟ್ಟು ನಿರ್ಮಾಣವಾಗುತ್ತಿರುವುದೇ ನಿಮಗಾಗಿ. ನಮಗೆ ಸಹಾಯ ಮಾಡಿ, ನಾವು ನಿಮಗೆ ಸಹಾಯ ಮಾಡುತ್ತೇವೆ" ಎಂದು ಸ್ಪಷ್ಟಪಡಿಸಿ ದರು.

ದೇಶದ ಪ್ರಗತಿಗೆ ದಕ್ಷಿಣವೇ ಆಧಾರ ಮಹಾಬಲಿಪುರಂ: ದೇಶದ ಸಮಗ್ರ ಆರ್ಥಿಕ ಪ್ರಗತಿಯಲ್ಲಿ ದಕ್ಷಿಣ ಭಾರತದ ರಾಜ್ಯಗಳ ಕೊಡುಗೆ ಅಪಾರ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ಲಾಘಿಸಿದರು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ, ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಕರೆ ನೀಡಿದರು.

ಅಂತಾರಾಜ್ಯ ಜಲ ವಿವಾದಗಳು, ಗಡಿ ಸಮಸ್ಯೆಗಳು ಹಾಗೂ ಆಡಳಿತಾತ್ಮಕ ಬಿಕ್ಕಟ್ಟುಗಳನ್ನು ರಾಜಕೀಯೇತರವಾಗಿ, ಪರಸ್ಪರ ಸಮಾಲೋಚನೆ ಹಾಗೂ ಸೌಹಾರ್ದಯುತ ಒಮ್ಮತದ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ರಾಜ್ಯಗಳಿಗೆ ಕಿವಿಮಾತು ಹೇಳಿದರು. ಕರಾವಳಿ ತೀರದ ಭದ್ರತೆಯನ್ನು ಬಿಗಿಗೊಳಿಸುವುದು, ಸೈಬರ್ ಅಪರಾಧಗಳ ನಿಯಂತ್ರಣ ಹಾಗೂ ಮಾದಕವಸ್ತು ಜಾಲಗಳ ಸಂಪೂರ್ಣ ನಿರ್ಮೂಲನೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೆ, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ, ಅಪೌಷ್ಟಿಕತೆ ನಿವಾರಣೆ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಬಲೀಕರಣಕ್ಕೆ ಆದ್ಯತೆ ನೀಡಿ, ಜನಕಲ್ಯಾಣ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುವಂತೆ ಶ್ರಮಿಸಬೇಕೆಂದು ಅವರು ಪ್ರತಿಪಾದಿಸಿದರು.