ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Abuse: ದೇಶವೇ ತಲೆ ತಗ್ಗಿಸುವ ಘಟನೆ; ಬೆಂಗಳೂರಿನ ನಡುರಸ್ತೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಗುರುವಾರ (ಏ. 4) ಅಪರಿಚಿತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ ಪರಾರಿಯಾಗಿದ್ದಾನೆ. ಬಿಟಿಎಂ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬೆಂಗಳೂರಿನ ನಡುರಸ್ತೆಯಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ಸಾಂದರ್ಭಿಕ ಚಿತ್ರ.

Profile Ramesh B Apr 6, 2025 7:38 PM

ಬೆಂಗಳೂರು: ದೇಶದಲ್ಲಿ ಇಂದಿಗೂ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ಕಡಿಮೆಯಾಗಿಲ್ಲ. ಕಚೇರಿ, ಮನೆ ಅಷ್ಟೇ ಏಕೆ ಸಾರ್ವಜನಿಕ ಸ್ಥಳಗಳಲ್ಲಿಯೂ ಮಹಿಳೆಯರ ಮೇಲೆ ಅವ್ಯಾಹತವಾಗಿ ಲೈಂಗಿಕ ದರ್ಜನ್ಯ ನಡೆಯುತ್ತವೆ. ಅದಕ್ಕೆ ತಾಜಾ ಉದಾಹರಣೆ ಬೆಂಗಳೂರಿನಲ್ಲಿ ನಡೆದ ಈ ಘಟನೆ (Physical Abuse). ಗುರುವಾರ (ಏ. 4) ಅಪರಿಚಿತ ವ್ಯಕ್ತಿಯೊಬ್ಬ ರಸ್ತೆಯಲ್ಲಿ ನಡೆದುಹೋಗುತ್ತಿದ್ದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ ಪರಾರಿಯಾಗಿದ್ದಾನೆ. ಬಿಟಿಎಂ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ರಾಜ್ಯವೇ ತಲೆ ತಗ್ಗಿಸುವಂತಾಗಿದೆ. ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅಪರಿಚಿತ ವ್ಯಕ್ತಿಯ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ.

ಘಟನೆ ವಿವರ

ಕಿರಿದಾದ ನಿರ್ಜನ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಮಹಿಳೆಯರಿಬ್ಬರನ್ನು ವ್ಯಕ್ತಿಯೊಬ್ಬ ಹಿಂಬಾಲಿಕೊಂಡು ಬರುತ್ತಾನೆ. ಬಳಿಕ ಮಹಿಳೆಯನ್ನು ಗೋಡೆಗೆ ಒತ್ತಿ ಹಿಡಿದು ದೌರ್ಜನ್ಯ ಎಸಗಿ ಪರಾರಿಯಾಗಿದ್ದಾನೆ. ಬಳಿಕ ಮಹಿಳೆಯರಿಬ್ಬರು ಸ್ಥಳದಿಂದ ತೆರಳಿದ್ದಾರೆ. ರಸ್ತೆಯ ಎರಡೂ ಬದಿ ದ್ವಿಚಕ್ರ ವಾಹನಗಳನ್ನು ಪಾರ್ಕಿಂಗ್‌ ಮಾಡಿರುವುದೂ ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡು ಬಂದಿದೆ.

ಪೊಲೀಸರು ಹೇಳಿದ್ದೇನು?

ಘಟನೆ ಬಗ್ಗೆ ಮಾತನಾಡಿದ ಪೊಲೀಸರು, ʼʼಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದುವರೆಗೆ ಯಾವುದೇ ದೂರು ದಾಖಲಾಗಿಲ್ಲ. ಅಪರಿಚಿತ ವ್ಯಕ್ತಿಯ ವಿರುದ್ಧ ಸಂತ್ರಸ್ತೆ ಎಫ್ಐಆರ್ ದಾಖಲಿಸದಿದ್ದರೆ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳುತ್ತೇವೆ. ಆ ಪ್ರದೇಶದಲ್ಲಿನ ವಿವಿಧ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿರುವ ದೃಶ್ಯಗಳನ್ನು ಪರಿಶೀಲಿಸುತ್ತಿದ್ದೇವೆ. ಶೀಘ್ರದಲ್ಲಿಯೇ ಆರೋಪಿಯನ್ನು ಪತ್ತೆ ಹಚ್ಚಾಗುತ್ತದೆʼʼ ಎಂದು ತಿಳಿಸಿದ್ದಾರೆ.

image

ಏ. 4ರ ಮುಂಜಾನೆ 1.55ರ ಸುಮಾರಿಗೆ ಈ ಘಟನೆ ನಡೆದಿದೆ. ಸ್ಥಳೀಯ ನಿವಾಸಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 354 (ಬಿ) ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದೇವೆ. -ಸುದ್ದಗುಂಟೆಪಾಳ್ಯ ಪೊಲೀಸರು.

ಈ ಸುದ್ದಿಯನ್ನೂ ಓದಿ: Belagavi Murder: ಗಂಡನ ಹತ್ಯೆಯನ್ನು ವಿಡಿಯೊ ಕಾಲ್‌ನಲ್ಲಿ ನೋಡಿ ಖುಷಿಪಟ್ಟ ಹೆಂಡತಿ!

ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್‌ ಲೈಂಗಿಕ ದೌರ್ಜನ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೀನ ಕೃತ್ಯವೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಬ್ಯಾಡ್ಮಿಂಟನ್ ತರಬೇತುದಾರನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರದ ಹೊರವಲಯದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಮಿಳುನಾಡು ಮೂಲದ ಸುರೇಶ್ ಬಾಲಾಜಿ (26) ಬ್ಯಾಡ್ಮಿಂಟನ್ ಕೋಚ್ ಆಗಿದ್ದು, ಕೋಚಿಂಗ್ ನೀಡುವ ನೆಪದಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ (Physical abuse) ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ಬ್ಯಾಡ್ಮಿಂಟನ್ ಕೋಚಿಂಗ್‌ಗೆ ಸೇರಿದ್ದ ಬಾಲಕಿಯನ್ನು ಕೋಚ್‌ ಆಗಾಗ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಯಾರ ಬಳಿಯೂ ಹೇಳದಂತೆ ಬೆದರಿಕೆ ಹಾಕಿದ್ದ. ಇತ್ತೀಚೆಗೆ ಬಾಲಕಿ ರಜೆಗೆ ಅಜ್ಜಿಯ ಮನೆಗೆ ಬಂದಾಗ ಮೊಬೈಲ್‌ನಿಂದ ತನ್ನ ನಗ್ನ ಪೋಟೊವನ್ನು ಸುರೇಶ್​ಗೆ ಶೇರ್ ಮಾಡಿದ್ದಾಳೆ. ಬಳಿಕ ಮೊಬೈಲ್​ ನೋಡಿದಾಗ ಕೋಚ್‌ಗೆ ನಗ್ನ ಫೋಟೊ ಕಳುಹಿಸಿರುವುದು ಪತ್ತೆಯಾಗಿದೆ. ಇದನ್ನು ನೋಡಿ ಅಜ್ಜಿ ಆಘಾತಗೊಂಡಿದ್ದು, ಈ ಬಗ್ಗೆ ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಆಗ ಬಾಲಕಿಯನ್ನು ವಿಚಾರಿಸಿದಾಗ ಕೋಚ್​ ಸುರೇಶನ ನಿಜ ಸ್ವರೂಪ ಬಯಲಾಗಿದೆ.

ಬಳಿಕ ಪೋಷಕರು ಕೋಚ್ ಸುರೇಶ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಮೊಬೈಲ್​ ಪರಿಶೀಲನೆ ಮಾಡಿದಾಗ ಕ್ರೀಡಾ ತರಬೇತಿ ಕೇಂದ್ರದಲ್ಲಿ ಹಲವು ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿರುವುದು ಕಂಡುಬಂದಿದೆ.