ಬೆಂಗಳೂರು, ಡಿ.29: ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕುಂದಲಹಳ್ಳಿ ಕಾಲೋನಿಯಲ್ಲಿ ನಡೆದಿದೆ. ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ ಅವಘಡ ಸಂಭವಿಸಿದ್ದು, ಅರವಿಂದ್(23) ಎಂಬುವರು ದುರ್ಮರಣ ಹೊಂದಿದ್ದಾರೆ. ದುರ್ಘಟನೆಯಲ್ಲಿ ವೆಂಕಟೇಶ್, ದೇವಿ, ವಿಶಾಲ್ ಎಂಬುವವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಎಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ; ಪಾನ್ ಶಾಪ್ ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪುಡಿ ರೌಡಿಗಳ ಗುಂಪೊಂದು ಪಾನ್ ಶಾಪ್ ಮೇಲೆ ದಾಳಿ ನಡೆಸಿ, ಮಾಲೀಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ (Assault Case) ನಡೆಸಿರುವ ಘಟನೆ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಬಷೀರ್ ಎಂಬವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ.
ಈ ವೇಳೆ ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದರ ಜೊತೆಗೆ, ಕಾರೊಂದರ ಮೇಲೂ ರೌಡಿಗಳು ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ.
ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿ; ಅವಮಾನಕ್ಕೆ ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ಸಿಸಿಟಿವಿಯಲ್ಲಿ ದಾಳಿಗಳ ದೃಶ್ಯ ಸೆರೆಯಾಗಿದೆ. ಬನಶಂಕರಿ ಮೂರನೇ ಹಂತ ಕತ್ರಿಗುಪ್ಪೆ ಮುಖ್ಯ ರಸ್ತೆಯಲ್ಲಿ ಘಟನೆ ನಡೆದಿದ್ದು, ಮಚ್ಚು, ಲಾಂಗು ಹಿಡಿದು ಹಲ್ಲೆ ನಡೆಸಿದ್ದು ಕಂಡುಬಂದಿದೆ. ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಗಳೂರಿನಲ್ಲಿ ಮತ್ತೆ ರೌಡಿಗಳ ಅಟ್ಟಹಾಸ ತೀವ್ರತೆ ಪಡೆದುಕೊಂಡಿರುವುದಕ್ಕೆ ಇದು ಸಾಕ್ಷಿಯಾಗಿದೆ.