ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Women's reservation bill: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವ ವಿರೋಧಿಸಿದಂತೆ: ವಿಪಕ್ಷಗಳ ವಿರುದ್ಧ ಬಿಎಸ್‌ವೈ ಕಿಡಿ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವ ಬಗ್ಗೆ ಮಾಧ್ಯಮಗಳ ಜತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಮಾತನಾಡಿದ್ದು, ಮಹಿಳೆಯರಿಗೆ ರಾಜಕೀಯದಲ್ಲಿ ಪ್ರವೇಶ ಸಿಗುವುದು ಅವರ ಹಕ್ಕು. ವಿಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದ್ದಾರೆ.

ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ.

ಬೆಂಗಳೂರು: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವವನ್ನು ವಿರೋಧಿಸಿದಂತೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (BS Yediyurappa) ಅವರು ತಿಳಿಸಿದ್ದಾರೆ. ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ (Women's reservation bill) ಸೋಲಾಗಿರುವ ಬಗ್ಗೆ ಮಾಧ್ಯಮಗಳ ಜತೆ ಅವರು ಮಾತನಾಡಿದ ಅವರು, ವಿಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದ್ದಾರೆ.

ಬಸವಣ್ಣನವರ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇತ್ತು ಎಂದ ಅವರು, ಮಹಿಳೆಯರಿಗೆ ರಾಜಕೀಯದಲ್ಲಿ ಪ್ರವೇಶ ಸಿಗುವುದೆಂದರೆ ಅದು ಅವರ ಹಕ್ಕು. ಅದನ್ನು ವಿರೋಧಿಸುವುದು ಸಮಾನತೆಯ ವಿರುದ್ಧ ಎಂದು ನುಡಿದರು.

ರಾಜ್ಯ ಉಪಚುನಾವಣೆ ಬಗ್ಗೆ ಪ್ರತಿಕ್ರಿಯಿಸಿ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಅವರು ತಿಳಿಸಿದರು.

ಹಣಕಾಸಿನ ವ್ಯವಹಾರ ಸರಿ ಮಾಡದೇ, ವಿದ್ಯುತ್ ದರವನ್ನು ಹುಚ್ಚಾಬಟ್ಟೆ ಏರಿಸಿದ್ದು ಖಂಡಿತ ಸರಿಯಲ್ಲ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಈ ನಿರ್ಧಾರವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಜನರು ನೆಮ್ಮದಿ, ಸ್ವಾಭಿಮಾನದಿಂದ ಬದುಕಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಸ್ತ್ರೀಕುಲದ ಹಕ್ಕನ್ನುಇಂಡಿ ಕೂಟ ಹಿಂಡಿ ಹಾಕಿದೆ: ವಿಜಯೇಂದ್ರ

ಬೆಂಗಳೂರು: ನಾರಿ ಶಕ್ತಿ ವಂದನಾ ಕಾಯ್ದೆಗೆ ಸೋಲುಂಟಾಗಿರುವುದು ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಕರಾಳ ದಿನವಾಗಿದೆ. ಕಾಂಗ್ರೆಸ್‌ ನಡೆ ಕೇವಲ ಭಾರತೀಯ ನಾರಿ ಕುಲಕ್ಕಷ್ಟೇ ಅಲ್ಲ, ಇಡೀ ವಿಶ್ವ ಮಹಿಳಾ ಕುಲವನ್ನು ಅಪಮಾನಿಸಿದ ನಡೆಯಾಗಿದೆ. ಕಾಂಗ್ರೆಸ್‌ನ ಸ್ತ್ರೀ ಕುಲದ ಬಗೆಗಿನ ಕಳಕಳಿ ಮೊಸಳೆ ಕಣ್ಣೀರು ಎಂಬುದು ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

Women Reservation Bill: ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಸದ್ಯ ದೇಶದ ರಾಜಕೀಯ ಭೂಪಟದಲ್ಲಿ ಅಸ್ತಿತ್ವಕ್ಕಾಗಿ ಹೆಣಗಾಡುತ್ತಿರುವ ಕಾಂಗ್ರೆಸ್‌ ತನ್ನದೇ ಮನಃಸ್ಥಿತಿಯ ಇತರ ಪಕ್ಷಗಳನ್ನು ಕಟ್ಟಿಕೊಂಡು ಇಂಡಿ ಕೂಟದ ಹೆಸರಿನಲ್ಲಿ ಸ್ತ್ರೀಕುಲದ ಹಕ್ಕನ್ನು ಲೋಕಸಭೆಯಲ್ಲಿ ಹಿಂಡಿ ಹಾಕಿದೆ. ಈ ಪಕ್ಷಗಳು ಅಂಬೇಡ್ಕರ್‌ ಅವರ ಆಶಯ ಮತ್ತು ಬಸವಣ್ಣನವರು ಪ್ರತಿಪಾದಿಸಿದ ಲಿಂಗ ಸಮಾನತೆಯನ್ನು ಹತ್ತಿಕ್ಕಿದೆ ಎಂದು ಕಿಡಿಕಾರಿದ್ದಾರೆ.