ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪೊಲೀಸ್ ಸುಪರ್ದಿಯಲ್ಲಿದ್ದ ನಮ್ಮ ಮೇಲೆ ಹಲ್ಲೆ, ಇದು ಪೂರ್ವಯೋಜಿತ ಗೂಂಡಾಗಿರಿ: ಆರ್. ಅಶೋಕ್

R Ashok: ಪೊಲೀಸ್ ಸುಪರ್ದಿಯಲ್ಲಿದ್ದ ನಮ್ಮ ಮೇಲೆ ಹಲ್ಲೆ ಆಗಿದೆ. ಇದು ಪೂರ್ವಯೋಜಿತ ಕೃತ್ಯ ಎಂದು ಆರೋಪಿಸಿರುವ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ಹರೀಶ್, ಅಶ್ವತ್ಥನಾರಾಯಣ್, ರಾಮಮೂರ್ತಿ ಮಾತ್ರವಲ್ಲದೇ ಕಾರ್ಯಕರ್ತರ ಮೇಲೆ ಪೂರ್ವನಿಯೋಜಿತ ಗೂಂಡಾಗಿರಿ ಮಾಡಿದ್ದಾರೆ ಎಂದು ದೂರಿದ್ದಾರೆ.

ಇದು ಪೂರ್ವಯೋಜಿತ ಗೂಂಡಾಗಿರಿ: ಆರ್. ಅಶೋಕ್ ಆರೋಪ

-

Profile
Siddalinga Swamy Jul 23, 2026 7:02 PM

ಬೆಂಗಳೂರು, ಜು.23: ಪೊಲೀಸ್ ಸುಪರ್ದಿಯಲ್ಲಿದ್ದ ನಮ್ಮ ಮೇಲೆ ಹಲ್ಲೆ ಆಗಿದೆ. ಇದು ಪೂರ್ವಯೋಜಿತ ಕೃತ್ಯ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಿಜೆಪಿ ಶಾಸಕರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ಗುರುವಾರ ಪಕ್ಷದ ವತಿಯಿಂದ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಸುಪರ್ದಿಯಲ್ಲಿದ್ದ ಬಸ್ ನಮ್ಮದು. ನಮಗೆ ರಕ್ಷಣೆ ಕೊಡಬೇಕು ಎಂದು ಇವರಿಗೆ ಗೊತ್ತಿಲ್ಲವೇ ಎಂದು ಕೇಳಿದರು.

ನಮ್ಮ ಬಸ್ಸಿನಲ್ಲಿ ಮೊಟ್ಟೆ ಬರಲು ಹೇಗೆ ಸಾಧ್ಯ? ಪೊಲೀಸರಿಗೆ ನೀವು ಮೊಟ್ಟೆ ಕೊಟ್ಟಿದ್ದೀರಾ ಎಂದು ಕೇಳಿದರು. ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡಲು ಇವರಿಗೆ ಯೋಗ್ಯತೆ ಇಲ್ಲ ಎಂದು ಟೀಕಿಸಿದರು. ಹರೀಶ್, ಅಶ್ವತ್ಥನಾರಾಯಣ್, ರಾಮಮೂರ್ತಿ ಮಾತ್ರವಲ್ಲದೇ ಕಾರ್ಯಕರ್ತರ ಮೇಲೆ ಪೂರ್ವನಿಯೋಜಿತ ಗೂಂಡಾಗಿರಿ ಮಾಡಿದ್ದಾರೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದರು. ‌

BY Vijayendra: ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಪಕ್ಷ ಹುನ್ನಾರ: ವಿಜಯೇಂದ್ರ ಆರೋಪ

ನೀಟ್ ವಿಚಾರದಲ್ಲಿ ಚರ್ಚೆಗೆ ಸಿದ್ಧವೆಂದು ಕೇಂದ್ರ ಸಚಿವ ನಡ್ಡಾ ಅವರು ತಿಳಿಸಿದ್ದರೂ ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಬೇಳೆ ಬೇಯಿಸಲು ಹೊರಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾಗಿದ್ದ ಬಿಜೆಪಿ ಶಾಸಕರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ ಪಕ್ಷದ ವತಿಯಿಂದ ಗುರುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆಯ ವೇಳೆ ಮಾತನಾಡಿದ ಅವರು, ನಿನ್ನೆ ಶಾಸಕರ ಮೇಲೆ ಹಲ್ಲೆ ನಡೆದಿದೆ. ಶಾಸಕರ ಮೇಲೆ ಹಲ್ಲೆ ಮಾಡಿಸಿದ ನಾಲಾಯಕ್ ಕಾಂಗ್ರೆಸ್ ಸರ್ಕಾರ ಇದು ಎಂದು ಟೀಕಿಸಿದರು.

ನೀಟ್ ವಿಚಾರದಲ್ಲಿ ಯುವಕರನ್ನು ಬೀದಿಗೆ ತರುವುದನ್ನು ಬಿಟ್ಟು ಷಡ್ಯಂತ್ರ ಮಾಡದೇ ಸಂಸತ್ತಿನಲ್ಲಿ ಚರ್ಚೆಗೆ ಬರಬೇಕು ಎಂದು ಅವರು ಒತ್ತಾಯಿಸಿದರು. ದೇಶದಲ್ಲಿ ಅರಾಜಕತೆ ಸೃಷ್ಟಿ ಮಾಡಲು ಕಾಂಗ್ರೆಸ್ ಪಕ್ಷ ಹುನ್ನಾರ ನಡೆಸುತ್ತಿದೆ; ಇದು ಖಂಡಿತ ಸಾಧ್ಯವಿಲ್ಲ ಎಂದು ಹೇಳಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ: ಸಂಸತ್ತಿನಲ್ಲಿ 18 ಗಂಟೆಗಳ ಚರ್ಚೆಗೂ ಸಿದ್ಧ ಎಂದ ಕೇಂದ್ರ ಸರ್ಕಾರ

ಹಿಂಬಾಗಿಲಿನಿಂದ ಅಧಿಕಾರಕ್ಕೆ ಬರಲು ಪ್ರಯತ್ನಿಸುವ ಕಾಂಗ್ರೆಸ್ ಪಕ್ಷವು ಈ ರೀತಿ ಅರಾಜಕತೆ ಸೃಷ್ಟಿಸಿ ಹೇಗಾದರೂ ಆಡಳಿತಕ್ಕೆ ಬರಬೇಕೆಂಬ ಕಪಟ ನಾಟಕವನ್ನು ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದರು.