ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ವತಿಯಿಂದ ನ.16ರಿಂದ ಮೂರು ದಿನಗಳವರೆಗೆ ಜಿ.ಕೆ.ವಿ.ಕೆ. ಆವರಣದಲ್ಲಿ ಮೂರು ದಿನಗಳವರೆಗೆ ಕೃಷಿಮೇಳ ಆಯೋಜಿಸಲಾಗಿದೆ. ಕೃಷಿಮೇಳದಲ್ಲಿ ಬರ ನಿರ್ವಹಣಾ ತಂತ್ರಜ್ಞಾನಗಳು, ಬರಕ್ಕೆ ಸೂಕ್ತವಾದ ಬೆಳೆಗಳು ಮತ್ತು ತಳಿಗಳು, ಕೃಷಿ ನಾವೀನ್ಯತೆಗಳ ಪ್ರದರ್ಶನ ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಲಾಗಿದೆ.
ಎಲ್ ನಿನೋ ಪರಿಣಾಮ, ಹವಾಮಾನ ವೈಪರೀತ್ಯಕ್ಕೆ ಚತುರ ಕೃಷಿ ಪದ್ಧತಿ ಮತ್ತು ಮಣ್ಣು-ನೀರು ಸಂರಕ್ಷಣೆ ಕುರಿತು ವಿಚಾರ ಸಂಕಿರಣಗಳು ನಡೆಯಲಿವೆ.
ರೈತರ ಸಮಸ್ಯೆಗಳಿಗೆ ಪರಿಹಾರ ನೀಡಲು ಸಲಹಾ ಕೇಂದ್ರ ತೆರೆಯಲಾಗುವುದು. ಪ್ರಗತಿಪರ ರೈತರು ಹಾಗೂ ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಈ ಮೇಳವನ್ನು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಕೃಷಿಮೇಳ ಉದ್ಘಾಟಿಸಲಿದ್ದು, ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ರೈತರು, ಕೃಷಿ ಆಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ