Karnataka Police: ಅ. 28 ರಂದು ರಾಜ್ಯ ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್ ವಿತರಣೆ
P-Cap: ಕರ್ನಾಟಕ ಪೊಲೀಸ್ ಸಿಬ್ಬಂದಿ ತಲೆ ಮೇಲೆ ಕಾಣುವ ಬ್ರಿಟಿಷರ ಕಾಲದ ಟೋಪಿ ಮಾಯವಾಗಿ ʼಸ್ಮಾರ್ಟ್ ಪೀಕ್ ಹ್ಯಾಟ್ʼ ಅಲಂಕರಿಸುವ ಕಾಲ ಸನ್ನಿಹಿತವಾಗಿದೆ. ಈಗಿರುವ ಸ್ಲೋಚ್ ಹ್ಯಾಟ್ ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದೀಗ ಪೊಲೀಸರ ಬಹುವರ್ಷಗಳ ಬೇಡಿಕೆ ಈಡೇರುವ ಸಮಯ ಸಮೀಪಿಸಿದೆ.

-

ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗೆ ಅಕ್ಟೋಬರ್ 28 ರಂದು ಪಿ-ಕ್ಯಾಪ್ (P-cap) ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka Police) ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪಿ-ಕ್ಯಾಪ್ ಘೋಷಣೆ ಹಾಗೂ ವಿತರಣಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಲ್ಲಾ ಕಮೀಷನರೇಟ್ ಹಾಗೂ ಜಿಲ್ಲೆಗಳಿಂದ ತಲಾ ಒಬ್ಬರು ಪಿಸಿ ಅಥವಾ ಹೆಚ್ಸಿ ಗಳನ್ನು ಸದರಿ ಕಾರ್ಯಕ್ರಮಕ್ಕೆ ನಿಯೋಜಿಸಿ ಅ.27 ಬೆಳಗ್ಗೆ 9ಗಂಟೆಗೆ ವಿಧಾನ ಸೌಧ ಭದ್ರತೆ ಡಿಸಿಪಿ ಅವರ ಮುಂದೆ ವರದಿ ಮಾಡಿಕೊಳ್ಳಲು ನಿರ್ದೇಶನ ನೀಡಲಾಗಿದೆ.
ಸದರಿ ಕಾರ್ಯಕ್ರಮಕ್ಕೆ ನಿಯೋಜಿಸುವ ಪಿಸಿ ಅಥವಾ ಎಚ್‌ಸಿಗಳ ಪಿ-ಕ್ಯಾಪ್ ಅಳತೆಯ ವಿವರವನ್ನು ಅ.23ಸಂಜೆಯೊಳಗೆ ಐ.ಜಿ.ಪಿ., ಕೇಂದ್ರಸ್ಥಾನ, ಪೊಲೀಸ್ ಪ್ರಧಾನ ಕಛೇರಿ, ಬೆಂಗಳೂರು ಇವರಿಗೆ ಕಡ್ಡಾಯವಾಗಿ ಕಳುಹಿಸಿಕೊಡುವಂತೆ ಡಿಜಿ-ಐಜಿಪಿ ಕಚೇರಿ ಸೂಚಿಸಿದೆ.
ಬ್ರಿಟಿಷರ ಕಾಲದ ಟೋಪಿಗೆ ಗುಡ್‌ಬೈ
ಕರ್ನಾಟಕ ಪೊಲೀಸರ ತಲೆ ಮೇಲೆ ಕಾಣುವ ಬ್ರಿಟಿಷರ ಕಾಲದ ಟೋಪಿ ಮಾಯವಾಗಿ ʼಸ್ಮಾರ್ಟ್ ಪೀಕ್ ಹ್ಯಾಟ್ʼ (Smart peak hat) ಅಲಂಕರಿಸುವ ಕಾಲ ಸನ್ನಿಹಿತವಾಗಿದೆ. ಈಗಿರುವ ಸ್ಲೋಚ್ ಹ್ಯಾಟ್ (Slouch hat) ಬದಲಿಸುವ ಕೂಗು ಮೊದಲಿನಿಂದಲೂ ಕೇಳಿಬರುತ್ತಿತ್ತು. ಇದೀಗ ಪೊಲೀಸರ (Karnataka Police) ಬಹುವರ್ಷಗಳ ಬೇಡಿಕೆ ಈಡೇರುವ ಸಮಯ ಸಮೀಪಿಸಿದೆ.
ಪ್ರಸ್ತುತ ಬಳಸುತ್ತಿರುವ ಸ್ಲೋಚ್ ಕ್ಯಾಪ್‌ನಿಂದ ಪೊಲೀಸ್ ಸಿಬ್ಬಂದಿಗೆ ಉಪಯೋಗಕ್ಕಿಂತ ಸಮಸ್ಯೆ ಜಾಸ್ತಿ ಆಗಿದೆ. ಪ್ರತಿಭಟನೆ ಅಥವಾ ಲಾಠಿ ಚಾರ್ಜ್ ಸಂದರ್ಭಗಳಲ್ಲಿ ಸ್ವಲ್ಪ ಜೋರಾಗಿ ಓಡಿದರೂ ಈ ಟೋಪಿಗಳು ತಲೆಯ ಮೇಲೆ ನಿಲ್ಲಲ್ಲ. ಇನ್ನು ಅಪರಾಧಿಗಳನ್ನು ಬೆನ್ನಟ್ಟುವ ಸಮಯದಲ್ಲಿ ಈ ಟೋಪಿಗಳನ್ನು ಹಾಕಿಕೊಂಡು ಸಾಗುವುದು ಕಷ್ಟ. ಹೀಗಾಗಿ ಸ್ಲೋಚ್ ಕ್ಯಾಪ್‌ಗಳನ್ನು ಬದಲಿಸಬೇಕೆಂಬ ಬೇಡಿಕೆ ಹಲವು ವರ್ಷಗಳ ಹಿಂದೆಯೇ ಕೇಳಿಬಂದಿತ್ತು.
ಈ ಸುದ್ದಿಯನ್ನೂ ಓದಿ | Police Firing: ಗೋಪೂಜೆ ದಿನವೇ ಅಕ್ರಮ ಗೋ ಸಾಗಾಟಗಾರನ ಕಾಲಿಗೆ ಗುಂಡು
ಇನ್ನು ಪ್ರಸ್ತುತ ಪೊಲೀಸ್ ಕಾನ್‌ಸ್ಟೆಬಲ್‌ಗಳು ಧರಿಸುತ್ತಿರುವ ಸ್ಲೋಚ್ ಟೋಪಿಯಿಂದಾಗಿ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಗಳ ಬಗ್ಗೆ ಇತ್ತೀಚೆಗೆ ಕೇಂದ್ರ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿತ್ತು. ಕೇರಳ, ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಅಲ್ಲಿನ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹಾಗೂ ಕಾನ್‌ಸ್ಟೇಬಲ್‌ಗಳಿಗೆ ಸ್ಮಾರ್ಟ್ ಪೀಕ್ ಕ್ಯಾಪ್‌ಗಳನ್ನು ನೀಡಲಾಗಿದೆ. ಹೀಗಾಗಿ ರಾಜ್ಯದಲ್ಲೂ ಪೊಲೀಸ್ ಸಿಬ್ಬಂದಿಗೆ ಪಿ-ಕ್ಯಾಪ್ ನೀಡಲು ಕರ್ನಾಟಕ ಸರ್ಕಾರ ಮುಂದಾಗಿದೆ.