ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪರಿಷತ್:‌ ಎನ್‌ʼಡಿಎ ತೆಕ್ಕೆಗೆ ನಾಲ್ಕೂ ಕ್ಷೇತ್ರ ?

ರಂಗನಾಥ್ 10810 ಮತಗಳನ್ನು ಪಡೆದಿದ್ದು, 908 ಮತಗಳಿಂದ ಪುಟ್ಟಣ್ಣ ವಿರುದ್ಧ ಗೆಲುವಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾ ವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ಗೆಲುವಿಗೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯ ಕರ್ತರು ಸಂಭ್ರಮಿಸಿದ್ದಾರೆ. ಬೆಂಗಳೂರು ಹಾಗೂ ರಾಮನಗರದ ಸೇರಿದಂತೆ ಹಲವು ಕಡೆ ಎನ್‌ಡಿಎ ಮೈತ್ರಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಪರಿಷತ್:‌ ಎನ್‌ʼಡಿಎ ತೆಕ್ಕೆಗೆ ನಾಲ್ಕೂ ಕ್ಷೇತ್ರ ?

-

Profile
Ashok Nayak Oct 28, 2026 8:07 AM

ಬೆಂಗಳೂರು: ವಿಧಾನ ಪರಿಷತ್‌ನ 4 ಕ್ಷೇತ್ರಗಳ ಚುನಾವಣಾ ಮತ ಎಣಿಕೆ ಮಂಗಳವಾರ ಮುಗಿದಿದೆ. ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದಾರೆ ಎಂದು ಮೂಲಗಳು ಹೇಳಿವೆ.

ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ.ರಂಗನಾಥ್ ಜಯಭೇರಿ ಬಾರಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಸೋಲಾಗಿದೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ಜಿ.ನಮೋಶಿ ಗೆದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಸೋತಿ ದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ.ಸಂಕನೂರ, ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಕೆ.ಎಂ.ಸುರೇಶ್ ಮುನ್ನಡೆ ಸಾಧಿಸಿದ್ದರು.

ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಆಗ್ನೇಯ ಪದವೀಧರರ ಕ್ಷೇತ್ರದ ಮತ ಎಣಿಕೆ ಬೆಂಗಳೂರಿನಲ್ಲಿ ನಡೆಯಿತು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ- ಜೆಡಿಎಸ್ (ಎನ್‌ಡಿಎ) ಮೈತ್ರಿ ಅಭ್ಯರ್ಥಿಯಾಗಿ ಎ.ಪಿ. ರಂಗನಾಥ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಯಾಗಿ ಪುಟ್ಟಣ್ಣ ಕಣಕ್ಕಿಳಿದಿದ್ದರು. ಆದರೆ ಈ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಎ.ಪಿ.ರಂಗ ನಾಥ್ ಗೆದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣಗೆ ಸೋಲಾಗಿದೆ.

ಇದನ್ನೂ ಓದಿ: MLC Election 2026: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ. ರಂಗನಾಥ್ ಜಯಭೇರಿ, ಕಾಂಗ್ರೆಸ್‌ನ ಪುಟ್ಟಣ್ಣಗೆ ಮುಖಭಂಗ

ರಂಗನಾಥ್ 10810 ಮತಗಳನ್ನು ಪಡೆದಿದ್ದು, 908 ಮತಗಳಿಂದ ಪುಟ್ಟಣ್ಣ ವಿರುದ್ಧ ಗೆಲುವಾಗಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾ ವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಎ.ಪಿ.ರಂಗನಾಥ್ ಗೆಲುವಿಗೆ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯ ಕರ್ತರು ಸಂಭ್ರಮಿಸಿದ್ದಾರೆ. ಬೆಂಗಳೂರು ಹಾಗೂ ರಾಮನಗರದ ಸೇರಿದಂತೆ ಹಲವು ಕಡೆ ಎನ್‌ಡಿಎ ಮೈತ್ರಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗೆ ಗೆಲುವಾಗಿದೆ. ಕಾಂಗ್ರೆಸ್ ಅಭ್ಯರ್ಥಿಗೆ ಸೋಲಾಗಿದೆ. ಬಿಜೆಪಿಯ ಶಶೀಲ್ ಜಿ.ನಮೋಶಿ ಗೆದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರಿಗೆ ಭಾರೀ ಮುಖಭಂಗವಾಗಿದೆ. ಆಗ್ನೇಯ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿಯಿಂದ ಕೆ.ಎಂ.ಸುರೇಶ್, ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಸ್ಪರ್ಧಿಸಿದ್ದರು.

ಪಶ್ಚಿಮ ಪದವೀಧರರ ಕ್ಷೇತ್ರದಲ್ಲಿ ಬಿಜೆಪಿ ಯಿಂದ ಎಸ್.ವಿ.ಸಂಕನೂರ, ಕಾಂಗ್ರೆಸ್‌ನಿಂದ ಮೋಹನ್ ಲಿಂಬಿಕಾಯಿ ಕಣಕ್ಕಿಳಿದಿದ್ದರು. ವಿರೋಧ ಪಕ್ಷವಾಗಿದ್ದರೂ ಇಡೀ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟ ಗೆದ್ದಿರುವುದು ಆಡಳಿತ ಪಕ್ಷ ಕಾಂಗ್ರೆಸ್‌ಗೆ ಬಿಸಿ ಮುಟ್ಟಿಸಿದೆ.