ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Peenya Elevated Flyover: ಪೀಣ್ಯ ಎಲಿವೇಟೆಡ್ ಫ್ಲೈಓವರ್‌ ಐದು ದಿನ ಬಂದ್, ಪರ್ಯಾಯ ಮಾರ್ಗ ಬಳಸಲು ಸೂಚನೆ

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ‌ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ.

ಪೀಣ್ಯ ಎಲಿವೇಟೆಡ್‌ ಫ್ಲೈಓವರ್

ಬೆಂಗಳೂರು, ಏ.11: ಪೀಣ್ಯ ಎಲಿವೇಟೆಡ್ ಫ್ಲೈಓವರ್‌ನ (Peenya Elevated Flyover) ಕೇಬಲ್ ದುರಸ್ತಿ ಕಾರ್ಯ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಈಗ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಈ ಐದು ದಿನಗಳ ಕಾಲ ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚನೆ ನೀಡಿದ್ದಾರೆ.

ಪೀಣ್ಯ ಫ್ಲೈಓವರ್‌ ಬಂದ್ ಆಗುವ ಅವಧಿ‌

ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ವಾಹನ ಸವಾರರಿಗೆ ತೊಂದರೆಯಾಗದಂತೆ ಪೊಲೀಸರು ಬದಲಿ ಮಾರ್ಗಗಳನ್ನು ಸೂಚಿಸಿದ್ದಾರೆ. ಅವುಗಳು ಹೀಗಿವೆ;

ನೆಲಮಂಗಲದಿಂದ ಬೆಂಗಳೂರು ಕಡೆಗೆ ಬರುವ ವಾಹನಗಳು ಕೆನ್ನಮೆಟಲ್ ವಿಡಿಯಾ ಹತ್ತಿರ ಫ್ಲೈಓವರ್ ಕೆಳಭಾಗದ ಎನ್‌ಹೆಚ್-4 ಮತ್ತು ಸರ್ವಿಸ್ ರಸ್ತೆ ಮೂಲಕ 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ ಕ್ರಾಸ್, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್, ಎಸ್‌ಆರ್‌ಎಸ್ (SRS) ಜಂಕ್ಷನ್ ಮತ್ತು ಗೊರಗುಂಟೆಪಾಳ್ಯ ಮೂಲಕ ಸಂಚರಿಸಬೇಕು.

ಸಿಎಂಟಿಐನಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು ಫ್ಲೈಓವರ್ ಕೆಳಭಾಗದ ಎನ್‌ಹೆಚ್‌-4 ಮತ್ತು ಸರ್ವಿಸ್ ರಸ್ತೆ ಮೂಲಕ ಎಸ್‌ಆರ್‌ಎಸ್ ಜಂಕ್ಷನ್, ಪೀಣ್ಯ ಠಾಣೆ ಜಂಕ್ಷನ್, ಜಾಲಹಳ್ಳಿ ಕ್ರಾಸ್, ದಾಸರಹಳ್ಳಿ, 8ನೇ ಮೈಲಿ ಮತ್ತು ಪಾರ್ಲೆ ಜಿ ಟೋಲ್ ಮೂಲಕ ಸಾಗಬೇಕು.

ರಸ್ತೆ ಸುರಕ್ಷತೆ ಮತ್ತು ಸುಗಮ ಸಂಚಾರದ ಹಿತದೃಷ್ಟಿಯಿಂದ ಸಾರ್ವಜನಿಕರು ಈ ಬದಲಾವಣೆಗಳನ್ನು ಗಮನಿಸಿ ಪೊಲೀಸರೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಲಾಗಿದೆ.

Namma Metro: ನಮ್ಮ ಮೆಟ್ರೋ ಕಿತ್ತಳೆ ಮಾರ್ಗ; ಪೀಣ್ಯ ನಿಲ್ದಾಣ ಸ್ಥಳಾಂತರಕ್ಕೆ ಬಿಎಂಆರ್​ಸಿಎಲ್ ಚಿಂತನೆ

ಹರೀಶ್‌ ಕೇರ

View all posts by this author