ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಇಂದಿನಿಂದ ನಾಲ್ಕು ದಿನ ಪೀಣ್ಯ ಫ್ಲೈಓವರ್ ಬಂದ್‌ ; ಬದಲಿ ಮಾರ್ಗ ಏನು?

ಇಂದಿನಿಂದ ನಾಲ್ಕು ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್‌ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ ಮೇ 8ರ ಬೆಳಗ್ಗೆ 11ರವರೆಗೆ ಪ್ಲೈಓವರ್​​ ಕ್ಲೋಸ್​​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಹೀಗಾಗಿ ಫ್ಲೈಓವರ್​ನ 2 ಬದಿಯಲ್ಲಿ ವಾಹನ ಸಂಚಾರಗಳಿಗೆ ನಿರ್ಬಂಧ ವಿಧಿಸಲಾಗಿದ್ದು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಇಂದಿನಿಂದ ನಾಲ್ಕು ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ (Peenya flyover) ಬಂದ್‌ ಆಗಲಿದೆ. ಮೇ 5ರ ಬೆಳಗ್ಗೆ 5ರಿಂದ ಮೇ 8ರ ಬೆಳಗ್ಗೆ 11ರವರೆಗೆ ಪ್ಲೈಓವರ್​​ ಕ್ಲೋಸ್​​ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಹೀಗಾಗಿ ಫ್ಲೈಓವರ್​ನ 2 ಬದಿಯಲ್ಲಿ ವಾಹನ ಸಂಚಾರಗಳಿಗೆ ನಿರ್ಬಂಧ ವಿಧಿಸಲಾಗಿದ್ದು ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಕೆ ಮಾಡುವಂತೆ ಬೆಂಗಳೂರು ಟ್ರಾಫಿಕ್​​ ಪೊಲೀಸರು ತಿಳಿಸಿದ್ದಾರೆ. ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆಯಲ್ಲಿ ಬಂದ್‌ ಮಾಡಲಾಗಿದೆ.

ಕಾಮಗಾರಿ ಕೆಲಸದ ಹಿನ್ನೆಲೆ ಸಂಚಾರ ಪೊಲೀಸರು ಫ್ಲೈವರ್​ ಬಂದ್ ಮಾಡಲಿದ್ದು, ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ ಎಂದು ನಗರ ಸಂಚಾರ ಪೊಲೀಸರು ಆದೇಶ ಹೊರಡಿಸಿದ್ದಾರೆ. ಪರ್ಯಾಯ ಮಾರ್ಗವಾಗಿ ನೆಲಮಂಗಲದಿಂದ ಬೆಂಗಳೂರಿಗೆ ಬರುವ ವಾಹನಗಳು ಫ್ಲೈಓವರ್ ಕೆಳಭಾಗದ ಸರ್ವೀಸ್ ರಸ್ತೆ ಮೂಲಕ ಸಂಚಾರಿಸಬೇಕಿದೆ. 8ನೇ ಮೈಲಿ, ದಾಸರಹಳ್ಳಿ, ಜಾಲಹಳ್ಳಿ, ಪೀಣ್ಯ, ಗೊರಗುಂಟೆಪಾಳ್ಯ ಮೂಲಕ ಸಂಚರಿಸಬಹುದು.

ನಗರದಿಂದ ನೆಲಮಂಗಲ ಕಡೆಗೆ ಹೋಗುವ ವಾಹನಗಳು ಸರ್ವೀಸ್ ರಸ್ತೆಯಲ್ಲಿ ಎಸ್ಆರ್ ಎಸ್ ಜಂಕ್ಷನ್, ಪೀಣ್ಯ, ಜಾಲಹಳ್ಳಿ, ದಾಸರಹಳ್ಳಿ ಮೂಲಕ ನೆಲಮಂಗಲ ಕಡೆಗೆ ಸಂಚರಿಸಬಹುದಾಗಿದೆ. ಸುಗಮ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ. ಈ ಮೊದಲು ಫ್ಲೈಓವರ್ ಕೇಬಲ್ ಅಳವಡಿಕೆ ದುರಸ್ತಿ ಕಾಮಗಾರಿ ಹಾಗೂ ಅಂತಿಮ ಲೋಡ್ ಟೆಸ್ಟಿಂಗ್ ಹಿನ್ನೆಲೆ ಪೀಣ್ಯ ಎಲಿವೇಟೆಡ್ ಫ್ಲೈಓವರ್​ ಏಪ್ರಿಲ್​ 13ರಿಂದ 5 ದಿನ ಬಂದ್​ ಆಗಲಿದೆ ಎಂದು ತಿಳಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ಪ್ರಕ್ರಿಯೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದೂಡಿದ ಪರಿಣಾಮ ಪ್ಲೈಓವರ್​​ ಮೇಲೆ ವಾಹನಗಳ ಸಂಚಾರಕ್ಕೆ ಎಂದಿನಂತೆ ಅನವುಮಾಡಿಕೊಡಲಾಗಿತ್ತು.

Bengaluru Rains: ಬೆಂಗಳೂರಿನಲ್ಲಿ ಮಳೆ ಅವಾಂತರ; ಧರೆಗುರುಳಿದ 50ಕ್ಕೂ ಹೆಚ್ಚು ಮರ, ರಸ್ತೆಗಳು ಜಲಾವೃತವಾಗಿ ಹಲವೆಡೆ ಟ್ರಾಫಿಕ್‌ ಜಾಮ್‌!

ವೀಕೆಂಡ್‌- ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌

ಸರಣಿ ರಜೆಗಳ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ನಗರದ ಬಹುತೇಕ ಸಂಪರ್ಕ ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾಗಿದೆ. ಮೈಸೂರು ರಸ್ತೆ, ತುಮಕೂರು ರಸ್ತೆ, ಹೊಸೂರು ರಸ್ತೆ ಹಾಗೂ ಬಳ್ಳಾರಿ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿ ಸಂಚಾರ ಅಸ್ತವ್ಯಸ್ತವಾಯಿತು. ನೈಸ್‌ ರೋಡ್‌ ಜಂಕ್ಷನ್‌ನಲ್ಲಿ ವಾಹನ ದಟ್ಟಣೆ ಹೆಚ್ಚಾದ ಕಾರಣಕ್ಕೆ, ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್‌ ಸಂಗ್ರಹದ ಬಳಿಯೂ ಭಾರೀ ವಾಹನ ದಟ್ಟಣೆ ಕಂಡುಬಂದಿತು. ಈ ಬಗ್ಗೆ ಬೆಂಗಳೂರು ಟ್ರಾಫಿಕ್‌ ಪೊಲೀಸರ ತಮ್ಮ ಅಧಿಕೃತ ಎಕ್ಸ್‌ ಅಕೌಂಟ್‌ನಲ್ಲಿ ಮಾಹಿತಿ ನೀಡಿದ್ದಾರೆ.

Vishakha Bhat Heggar

View all posts by this author