ಊಟ ಮಾಡುವಾಗಲೇ ಹೃದಯಾಘಾತ; ಮಗಳ ಮುಂದೆಯೇ ಪ್ರಾಣಬಿಟ್ಟ ತಂದೆ, ಆಘಾತಕಾರಿ ವಿಡಿಯೊ ಇಲ್ಲಿದೆ!
Ramanagara News: ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿವಲಿಂಗಯ್ಯ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಗಳ ಕಣ್ಣೆದುರೇ ತಂದೆಗೆ ಹೃದಯಾಘಾತ ಸಂಭವಿಸಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದ ಹಿನ್ನೆಲೆಯಲ್ಲಿ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
-
ರಾಮನಗರ: ಇತ್ತೀಚೆಗೆ ಹೃದಯಾಘಾತದಿಂದ (Heart Attack) ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ರಾಮನಗರದಲ್ಲಿ (Ramanagara) ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಆಘಾತಕಾರಿ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಗಳು ಹಾಗೂ ಅಳಿಯನ ಜತೆ ಸೋಫಾ ಮೇಲೆ ಕುಳಿತು ಊಟ ಮಾಡುತ್ತಿದ್ದ ವೇಳೆಯೇ ತಂದೆಗೆ ಹೃದಯಾಘಾತವಾಗಿದೆ. ಮಗಳು ಹಾಗೂ ಅಳಿಯನ ಕಣ್ಣೆದುರೇ ವ್ಯಕ್ತಿ ಜೀವ ಹೋಗಿದೆ. ರಾಮನಗರ ತಾಲೂಕಿನ ಮಂಚಶೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಶಿವಲಿಂಗಯ್ಯ ಹೃದಯಾಘಾತದಿಂದ ಮೃತಪಟ್ಟವರು.
ಊಟ ಮಾಡುವಾಗ ಹೃದಯಾಘಾತವಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳೆದ ಆಗಸ್ಟ್ 22ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಹೃದಯಾಘಾತವಾದ ಶಿವಲಿಂಗಯ್ಯ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಕರ್ತವ್ಯದ ವೇಳೆಯೇ ಹೃದಯಾಘಾತದಿಂದ ಮುಖ್ಯ ಶಿಕ್ಷಕ ಸಾವು
ಧಾರವಾಡ: ಕರ್ತವ್ಯದ ಮೇಲಿದ್ದಾಗಲೇ ಹೃದಯಾಘಾತದಿಂದ ಶಾಲಾ ಮುಖ್ಯ ಶಿಕ್ಷಕ ಮೃತಪಟ್ಟಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಐಐ ಮುಲ್ಲಾನವರ್ (59) ಮೃತರು.
ಬೆಂಗಳೂರಿನಲ್ಲಿ ಸ್ಕೂಟರ್ ಗುಂಡಿಗೆ ಬಿದ್ದು ಮಹಿಳೆಗೆ ಗಂಭೀರ ಗಾಯ; ಚಿಕಿತ್ಸೆಗೆ 2 ಲಕ್ಷ ರೂಪಾಯಿ ಖರ್ಚು
ಕಳೆದ ಎರಡು ದಿನಗಳ ಹಿಂದೆ ಶುಕ್ರವಾರ ಶಾಲೆಯಲ್ಲಿ ಇದ್ದಾಗಲೇ ಹೃದಯಾಘಾತವಾಗಿತ್ತು. ಈ ವೇಳೆ ಶಾಲೆಯಲ್ಲಿ ಇದ್ದ ಶಿಕ್ಷಕರು ಮುಖ್ಯ ಶಿಕ್ಷಕ ಮುಲ್ಲಾನವರನ್ನು ಆಸ್ಪತ್ರೆಗೆ ರವಾನೆ ಮಾಡಿದ್ದರು. ಆದರೆ ಚಿಕಿತ್ಸೆ ಫಲಿಸದೇ ಮುಖ್ಯ ಶಿಕ್ಷಕ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ ಮುಖ್ಯ ಶಿಕ್ಷಕ ಸಾವನ್ನಪ್ಪಿದ ಹಿನ್ನೆಲೆ ಶಿಕ್ಷಕರ ದಿನಾಚರಣೆ ದಿನವೇ ಮುಲ್ಲಾನವರ ಕುಟುಂಬದವರು ಅವರ ಅಂತ್ಯಕ್ರಿಯೆ ಮಾಡಿದ್ದಾರೆ.