ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜಿಮ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರ: ತನಿಖೆಗೆ ಆಗ್ರಹಿಸಿ ರಣರಾಗಿಣಿ ಮಹಿಳಾ ವಿಭಾಗದಿಂದ ಮನವಿ

ಜಿಮ್‌ಗಳಲ್ಲಿ ಮಹಿಳೆಯರ ಮೇಲಿನ ಶೋಷಣೆ, ಲೈಂಗಿಕ ದೌರ್ಜನ್ಯ ಹಾಗೂ ಮತಾಂತರ ಕುರಿತು ತನಿಖೆಗೆ ಅಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಮಹಿಳಾ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು. ಈ ಕುರಿತ ವಿವರ ಇಲ್ಲಿದೆ.

ಜಿಮ್‌ಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ಮತಾಂತರ: ತನಿಖೆಗೆ ಆಗ್ರಹ

ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಮಹಿಳಾ ವಿಭಾಗದ ವತಿಯಿಂದ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ. -

Profile
Siddalinga Swamy Apr 8, 2026 10:13 PM

ಬೆಂಗಳೂರು, ಏ.8: ಜಿಮ್‌ಗಳಲ್ಲಿ ಮಹಿಳೆಯರ ಮೇಲಿನ ಶೋಷಣೆ, ಲೈಂಗಿಕ ದೌರ್ಜನ್ಯ ಹಾಗೂ ಮತಾಂತರ ಕುರಿತು ತನಿಖೆಗೆ ಅಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿಯ ರಣರಾಗಿಣಿ ಮಹಿಳಾ ವಿಭಾಗದ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಲಾಯಿತು.

ಬೇಡಿಕೆಗಳು

ಸಮೀರ್ ಮುಲ್ಲಾ, ತೈಸೀಮ್ ಮುಲ್ಲಾ ಮತ್ತು ಸಂಬಂಧಿತ ಜಿಮ್ ಜಾಲದ ಕುರಿತು ಸಮಗ್ರ ತನಿಖೆ ನಡೆಸಿ, ಎಲ್ಲಾ ಮೊಬೈಲ್/ ಡಿಜಿಟಲ್ ಸಾಧನಗಳನ್ನು ಪರಿಶೀಲಿಸಿ, ಇತರ ಪೀಡಿತರ ಹಾಗೂ ಶಾಹಿನ್ ಗ್ಯಾಂಗ್ ಸಂಪರ್ಕಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು.

ಪ್ರಕರಣಕ್ಕೆ ವಿಶೇಷ ತನಿಖಾ ದಳವನ್ನು ರಚನೆ ಮಾಡಿ, ಕೋಕಾ ಕಾಯ್ದೆ, ಪೋಸ್ಕೋ ಕಾಯ್ದೆ ಅತ್ಯಾಚಾರ, ವಸೂಲಿ, ಐಟಿ ಕಾಯ್ದೆ ಮತ್ತು ಕರ್ನಾಟಕದ ಮತಾಂತರ ವಿರೋಧಿ ಕಾಯ್ದೆಗಳಡಿ FIR ದಾಖಲಿಸಿ, ಆರೋಪಿಗಳನ್ನು ಕಸ್ಟಡಿಗೆ ಪಡೆದು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಬೇಕು.

ಸಂಬಂಧಿತ ಜಿಮ್ ಅನ್ನು ಸೀಲ್ ಮಾಡಿ, ಹುಬ್ಬಳ್ಳಿ-ಧಾರವಾಡದ ಸೇರಿದಂತೆ ರಾಜ್ಯದ ಎಲ್ಲಾ ಜಿಮ್‌ಗಳಲ್ಲಿ ಟ್ರೈನರ್‌ಗಳ ಪರಿಶೀಲನೆ, ಸಿಸಿಟಿವಿ ವ್ಯವಸ್ಥೆ ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ವ್ಯವಸ್ಥೆಗಳಿರುವುದನ್ನು ಖಚಿತಪಡಿಸಬೇಕು.

ಎಲ್ಲಾ ಜಿಮ್ ಸಿಬ್ಬಂದಿಗೆ ಪೊಲೀಸ್ ಪರಿಶೀಲನೆ ಕಡ್ಡಾಯಗೊಳಿಸಿ, ಮಹಿಳಾ ವಿಭಾಗಗಳಿಗೆ ಮಹಿಳಾ ತರಬೇತುದಾರರನ್ನು ನೇಮಕ ಮಾಡಬೇಕು ಹಾಗೂ ಸಾರ್ವಜನಿಕ ಜಾಗೃತಿ ಅಭಿಯಾನಗಳನ್ನು ನಡೆಸಬೇಕು. ಉತ್ತರ ಪ್ರದೇಶದಲ್ಲಿ ಕೈಗೊಂಡಿರುವಂತೆ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಬೇಕು.

ಶೋಷಣೆಗೆ ಒಳಗಾದ ಹಿಂದೂ ಯುವತಿಯ ಗೌಪ್ಯತೆಯನ್ನು ಕಾಪಾಡಬೇಕು. ಆಕೆಗೆ ಸಂಬಂದಿತ ವಿಡಿಯೋ ಎಲ್ಲಿಯೂ ಪ್ರಚಾರವಾಗಬಾರದು. ಪ್ರಚಾರ ಮಾಡಿದವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.‌

Hubballi Love Jihad case: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣದ ಸಮಗ್ರ ತನಿಖೆಗೆ ಪ್ರಲ್ಹಾದ್‌ ಜೋಶಿ ಆಗ್ರಹ

ಈ ಸಂಧರ್ಭದಲ್ಲಿ ರಣರಾಗಿಣಿ ಮಹಿಳಾ ವಿಭಾಗದ ಸಂಯೋಜಕಿ ಭವ್ಯ ಗೌಡ, ಅಡ್ವೋಕೇಟ್ ವೀಣಾ ಅರುಣ್, ಜ್ಯೋತಿ ಟಿ ನರಸೀಪುರ, ಶ್ರೀರಾಮ ಸೇನೆ ಮಹಿಳಾ ಶಾಖೆಯ ಅನುಪಮ, ದುರ್ಗಾ ವಾಹಿನಿಯ ಜ್ಯೋತಿ, ನಿವೇದಿತಾ ಪ್ರತಿಷ್ಠಾನದ ಸದಸ್ಯರು, ಅಡ್ವೋಕೇಟ್ ಶಕುಂತಲಾ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.