ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಾಹನ ಸವಾರರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚರಿಸುವ ಮುನ್ನ ಸಂಚಾರ ಪೊಲೀಸರ ಮಾಹಿತಿ ಗಮನಿಸಿ

ಬಿಸಿಲಿನಿಂದ ಬೆಂದು ಹೋಗಿದ್ದ ಬೆಂಗಳೂರು ಜನತೆಗೆ ಕಳೆದ ರಾತ್ರಿ ವರುಣ ತಂಪೆರೆದಿದ್ದಾನೆ. ಆದರೆ ಭಾರೀ ಮಳೆಗೆ ಹಲವು ಅನಾಹುತಗಳು ಸಂಭವಿಸಿದೆ. ಭಾರೀ ಗಾಳಿ ಮತ್ತು ಗುಡುಗಿನ ಸಹಿತ ಸುರಿದ ಆಲಿಕಲ್ಲು ಮಳೆಗೆ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 10 ಜನರು ಬಲಿಯಾಗಿದ್ದಾರೆ.

ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚರಿಸುವ ಮುನ್ನ ಪೊಲೀಸರ ಮಾಹಿತಿ ಗಮನಿಸಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 30, 2026 10:41 AM

ಬೆಂಗಳೂರು: ಬಿಸಿಲಿನಿಂದ ಬೆಂದು ಹೋಗಿದ್ದ ಬೆಂಗಳೂರು ಜನತೆಗೆ ಕಳೆದ ರಾತ್ರಿ ವರುಣ ತಂಪೆರೆದಿದ್ದಾನೆ. ಆದರೆ ಭಾರೀ ಮಳೆಗೆ ಹಲವು ಅನಾಹುತಗಳು ಸಂಭವಿಸಿದೆ. ಭಾರೀ ಗಾಳಿ ಮತ್ತು ಗುಡುಗಿನ ಸಹಿತ ಸುರಿದ ಆಲಿಕಲ್ಲು ಮಳೆಗೆ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 10 ಜನರು ಬಲಿಯಾಗಿದ್ದಾರೆ. ನಗರದ ಹಲವೆಡೆ ಮರಗಳು ಧರೆಗುರುಳಿದ್ದರೆ, ಅಂಡರ್​​ ಪಾಸ್​​ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಂಚಾರ ಸಮಸ್ಯೆ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.



ಲೌರಿ ಅಂಡರ್‌ಪಾಸ್‌ನಲ್ಲಿ ಮಳೆ ನೀರು ನಿಂತಿರುವುದರಿಂದ ಸುಗಮ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಮಹದೇವಪುರ ಕಡೆಗೆ ನಿಧಾನಗತಿಯ ಸಂಚಾರವಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆ.ಆರ್.ಸರ್ಕಲ್ ಅಂಡರ್ ಪಾಸ್​​​​ ಕೂಡ ಜಲಾವೃತವಾಗಿದ್ದು, ಬ್ಯಾರಿಕೇಡ್ ಹಾಕಿ ಪೊಲೀಸರು ಅಂಡರ್ ಪಾಸ್ ಬಂದ್ ಮಾಡಿದ್ದಾರೆ. ಗಾಳಿ ಮಳೆಯ ಅಬ್ಬರಕ್ಕೆ ನಗರದ ವಿವಿಧೆಡೆ ಹಲವು ಮರಗಳು ಮತ್ತು ರೆಂಬೆಗಳು ಧರೆಗೆ ಉರುಳಿವೆ. ರಾತ್ರಿಯಿಂದಲೇ ಕ್ಷಿಪ್ರ ನಡೆಸಲಾಗುತ್ತಿದ್ದು, ಇನ್ನೂ ಮುಂದುವರಿದಿದೆ.



ಭಾಷ್ಯಂ ವೃತ್ತದ ಬಳಿ ಮರ ಬಿದ್ದಿರುವುದರಿಂದ ಕಾವೇರಿ ಥಿಯೇಟರ್ ಜಂಕ್ಷನ್‌ ಕಡೆಗೆ ನಿಧಾನಗತಿಯ ಸಂಚಾರ ಕಂಡುಬಂದಿದೆ. ಬಸವನಗುಡಿಯಲ್ಲಿಯೂ ಬೃಹತ್​​ ಮರ ಬಿದ್ದು ಅವಾಂತರ ಸೃಷ್ಟಿಯಾಗಿದೆ. ವಿದ್ಯಾಪೀಠ ಸರ್ಕಲ್-ಬಸವನಗುಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಅಡ್ಡಲಾಗಿ ಬೃಹತ್ ಮರ ಬಿದ್ದಿದ್ದು, ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್​​ ಆಗಿದೆ. ಬೊಮ್ಮನಹಳ್ಳಿ ಜಂಕ್ಷನ್ ಬಳಿ ರಸ್ತೆಯಲ್ಲಿವೇ ವಾಹನ ಕೆಟ್ಟು ನಿಂತಿರುವುದರಿಂದ ರೂಪೇನ ಅಗ್ರಹಾರ ಕಡೆಗೆ ನಿಧಾನಗತಿಯ ಸಂಚಾರವಿರುವುದಾಗಿ ಎಕ್ಸ್​​ ಪೋಸ್ಟ್​​ ಮೂಲಕ ಬೆಂಗಳೂರು ಟ್ರಾಫಿಕ್​​ ಪೊಲೀಸರು ಮಾಹಿತಿ ನೀಡಿದ್ದಾರೆ.

ಶಿವಾನಂದ ಸರ್ಕಲ್, ಕ್ರೆಸೆಂಟ್ ರಸ್ತೆ, ಜಯನಗರ ಹಾಗೂ ಇತರೆ ಪ್ರದೇಶಗಳಲ್ಲಿ ಮರ ಬಿದ್ದು ಕಾರು, ಬೈಕ್‌ಗಳು ಜಖಂಗೊಂಡಿವೆ. ಮೆಜೆಸ್ಟಿಕ್ ಕಾರ್ ಪಾರ್ಕಿಂಗ್ ಪ್ರದೇಶದಲ್ಲೂ ಬೃಹತ್ ಮರ ಬಿದ್ದು ಮೂರು ಕಾರುಗಳು ಹಾನಿಗೊಳಗಾಗಿವೆ.