ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ

PM Modi In Bengaluru: ಜಿಗಣಿ ಬಳಿಯಿರುವ ಎಸ್-ವ್ಯಾಸ (S-VYASA) ವಿಶ್ವವಿದ್ಯಾಲಯದ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ (50ನೇ ವಾರ್ಷಿಕೋತ್ಸವ) ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಭಾಗಿಯಾಗಿದ್ದಾರೆ. ಸಮಾರಂಭದಲ್ಲಿ ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್, ಹಾಗೂ ಮುಖ್ಯಮಂತ್ರಿ ಭಾಗವಹಿಸಿದ್ದಾರೆ.

ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ

ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಪ್ರಧಾನಿ ಮೋದಿ ಭಾಗಿ -

Vishakha Bhat Heggar
Vishakha Bhat Heggar Nov 13, 2026 11:33 AM

ಬೆಂಗಳೂರು: ಜಿಗಣಿ ಬಳಿಯಿರುವ ಎಸ್-ವ್ಯಾಸ (S-VYASA) ವಿಶ್ವವಿದ್ಯಾಲಯದ ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರು ಇಂದು ಭಾಗಿಯಾಗಿದ್ದಾರೆ. ಪ್ರಶಾಂತಿ ಕುಟೀರದ 50 ವರ್ಷಗಳ ಸೇವೆಯ ಸುವರ್ಣ ಮಹೋತ್ಸವದೊಂದಿಗೆ, ಲೇಖಕ ಹೆಚ್.ವಿ. ಶೇಷಾದ್ರಿ ಅವರ ಜನ್ಮ ಶತಮಾನೋತ್ಸವ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಮಾರಂಭದಲ್ಲಿ ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಕರ್ನಾಟಕದ ರಾಜ್ಯಪಾಲರಾದ ಡಾ. ಸುಧಾ ಯಾದವ್, ಹಾಗೂ ಮುಖ್ಯಮಂತ್ರಿ ಭಾಗವಹಿಸಿದ್ದಾರೆ. ಪ್ರಧಾನಿ ಮೋದಿ ಅವರು ಪ್ರಶಾಂತಿ ಕುಟೀರದ ಸುವರ್ಣ ಮಹೋತ್ಸವ ಆಡಳಿತ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದು, ತಿರುವನಂತಪುರಂನಲ್ಲಿರುವ ಎಸ್-ವ್ಯಾಸ ಆಫ್-ಕ್ಯಾಂಪಸ್ (Off-Campus) ಕೇಂದ್ರವನ್ನೂ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ ಮೋದಿ ಅವರಿಗೆ ಚಿನ್ನದ ಬಣ್ಣದ ಸಾಂಪ್ರದಾಯಿಕ ಶಾಲು ಹೊದಿಸಿ, ಪೇಟವನ್ನು ತೊಡಿಸಿ, ವಿವೇಕಾನಂದ ಪ್ರತಿಮೆ ನೀಡಿ ಗೌರವಿಸಲಾಯಿತು.

ಭದ್ರತಾ ದೃಷ್ಟಿಯಿಂದ ಈ ಕಾರ್ಯಕ್ರಮಕ್ಕೆ ಕೇವಲ 500 ಜನರಿಗೆ ಮಾತ್ರ ಸೀಮಿತ ಅವಕಾಶ ಕಲ್ಪಿಸಲಾಗಿದ್ದು, ಕುಟೀರದ ಸಿಬ್ಬಂದಿಯಿಂದ ಅಧಿಕೃತ ಪಾಸ್ ಪಡೆದವರಿಗೆ ಮಾತ್ರ ಸಭಾಂಗಣದ ಒಳಗೆ ಪ್ರವೇಶ ನೀಡಲಾಗಿದೆ. ಇನ್ನು, ಒಳಗೆ ಪ್ರವೇಶವಿಲ್ಲದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಸಮಾರಂಭವನ್ನು ನೇರವಾಗಿ ವೀಕ್ಷಿಸಲು ಅನುಕೂಲವಾಗುವಂತೆ ಆವರಣದ ಹೊರಭಾಗದಲ್ಲಿ ಬೃಹತ್ ಎಲ್‌ಇಡಿ (LED) ಪರದೆಗಳ ವ್ಯವಸ್ಥೆಯನ್ನು ಮಾಡಲಾಗಿದೆ.

HAL ನಲ್ಲಿ ಸ್ವಾಗತ

Modi (8)

ಬೆಳಿಗ್ಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿಯನ್ನು ಡಾ. ಸುಧಾ ಯಾದವ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹಾಗೂ ಕೇಂದ್ರ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.