ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

POCSO Act: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ ಪೋಕ್ಸೋ ಕೇಸ್

ಕಳೆದ ಐದು ವರ್ಷಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 16,206 ಪ್ರಕರಣಗಳು ದಾಖಲಾಗಿವೆ. 2021ರಲ್ಲಿ 2884 ಪ್ರಕರಣಗಳು ದಾಖಲಾಗಿದ್ದರೆ, 2022ರಲ್ಲಿ ಅದು 3209ಕ್ಕೆ ಏರಿಕೆಯಾಗಿದೆ. 2023ರಲ್ಲಿ 3902 ಪ್ರಕರಣಗಳು ದಾಖಲಾಗಿದ್ದು, 2024ರಲ್ಲಿ ಈ ಸಂಖ್ಯೆ 4064ಕ್ಕೆ ತಲುಪಿದೆ. ಇನ್ನು 2025ರ ಜೂನ್ 30ರವರೆಗೆ ಮಾತ್ರವೇ 2147 ಪ್ರಕರಣಗಳು ದಾಖಲಾಗಿರುವುದು ಮಕ್ಕಳ ಸುರಕ್ಷತೆ ಕುರಿತು ಮತ್ತಷ್ಟು ಆತಂಕ ಹುಟ್ಟಿಸಿದೆ.

POCSO Act: ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿವೆ ಪೋಕ್ಸೋ ಕೇಸ್

-

Ashok Nayak
Ashok Nayak Mar 15, 2026 8:51 AM

ವೈಭವ್.ಸಿ. ಕೊಳ್ಳಿ ಬೆಂಗಳೂರು

5 ವರ್ಷಗಳಲ್ಲಿ ಶೇ.51ರಷ್ಟು ಹೆಚ್ಚಳ, 16,206 ಪ್ರಕರಣ ದಾಖಲು

ರಾಜ್ಯದಲ್ಲಿ ಪ್ರತಿದಿನ ಸರಾಸರಿ 12 ದೂರುಗಳು

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟಲು ಕಾನೂನುಗಳಿದ್ದರೂ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುವ ಬದಲು, ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣ ವಾಗಿದೆ. ಮಕ್ಕಳ ರಕ್ಷಣೆಗೆ ಜಾರಿಗೆ ತಂದಿರುವ ಲೈಂಗಿಕ ಅಪರಾಧ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) 2012, ಇದ್ದರೂ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗು ತ್ತಿರುವುದು ಗಂಭೀರ ಕಾರಣವಾಗಿದೆ.

ಕಳೆದ ಐದು ವರ್ಷಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 16,206 ಪ್ರಕರಣಗಳು ದಾಖಲಾಗಿವೆ. 2021ರಲ್ಲಿ 2884 ಪ್ರಕರಣಗಳು ದಾಖಲಾಗಿದ್ದರೆ, 2022ರಲ್ಲಿ ಅದು 3209ಕ್ಕೆ ಏರಿಕೆಯಾಗಿದೆ. 2023ರಲ್ಲಿ 3902 ಪ್ರಕರಣಗಳು ದಾಖಲಾಗಿದ್ದು, 2024 ರಲ್ಲಿ ಈ ಸಂೆಖ್ಯೆ 4064ಕ್ಕೆ ತಲುಪಿದೆ. ಇನ್ನು 2025ರ ಜೂನ್ 30ರವರೆಗೆ ಮಾತ್ರವೇ 2147 ಪ್ರಕರಣಗಳು ದಾಖಲಾಗಿರುವುದು ಮಕ್ಕಳ ಸುರಕ್ಷತೆ ಕುರಿತು ಮತ್ತಷ್ಟು ಆತಂಕ ಹುಟ್ಟಿಸಿದೆ.

2025ರಲ್ಲಿ ದಾಖಲಾಗಿರುವ ಒಟ್ಟು 2147 ಪ್ರಕರಣಗಳಲ್ಲಿ 1207 ಪ್ರಕರಣಗಳು ವಿವಿಧ ಹಂತಗಳಲ್ಲಿ ವಿಲೆವಾರಿಯಾಗಿದ್ದು, 312 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗಿ ದ್ದಾರೆ. ಇನ್ನೂ 587 ಪ್ರಕರಣಗಳು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇದ್ದು, ಕೆಲವು ಪ್ರಕರಣಗಳು ವರ್ಗಾವಣೆ ಅಥವಾ ಇತರ ಕಾರಣಗಳಿಂದ ಮುಕ್ತಾಯಗೊಂಡಿವೆ.

5 ವರ್ಷಗಳಲ್ಲಿ ಶೇ.51 ರಷ್ಟು ಪ್ರಕರಣಗಳು ಹೆಚ್ಚಳವಾಗಿವೆ. ಒಟ್ಟಾರೆ ಐದು ವರ್ಷಗಳ ಅವಧಿಯಲ್ಲಿ 8367 ಪ್ರಕರಣಗಳು ಇನ್ನೂ ನ್ಯಾಯಾಲಯಗಳಲ್ಲಿ ವಿಚಾರಣೆಯ ಬಾಕಿ ಉಳಿದಿರುವುದು ಗಮನಾರ್ಹವಾಗಿದೆ. ಇದೇ ವೇಳೆ ಕೇವಲ 579 ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಇದನ್ನೂ ಓದಿ: POCSO case: ದಲಿತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿ ಮಾಡಿದ್ದ ಆರೋಪಿ ಸಫ್ವಾನ್ ಪೋಕ್ಸೋ ಕಾಯ್ದೆಯಡಿ ಆರೆಸ್ಟ್

ಪ್ರತಿ ಗುರುವಾರ ತೆರದ ಮನೆ ಕಾರ್ಯಕ್ರಮ ಆಯೋಜನೆ: ಬೆಂಗಳೂರು ನಗರದಲ್ಲಿ ಪೋಕ್ಸೋ ಪ್ರಕರಣಗಳ ಸಂಖೆ ಹೆಚ್ಚಾಗುತ್ತಿರುವ ಹಿನ್ನೆಲೆ, ಶಾಲೆ ಮತ್ತು ಕಾಲೇಜುಗಳಲ್ಲಿ ಮಕ್ಕಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಮಕ್ಕಳ ರಕ್ಷಣಾ ಆಯೋಗ ಕೈಗೊಂಡಿದೆ. ವಿದ್ಯಾರ್ಥಿಗಳು ತಮ್ಮ ಸುರಕ್ಷತೆ ಬಗ್ಗೆ ಅರಿವು ಹೊಂದುವಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಪ್ರತಿ ಗುರುವಾರ ಪೊಲೀಸ್ ಠಾಣೆಗಳ ವ್ಯಾಪ್ತಿ ಯಲ್ಲಿರುವ ಶಾಲೆ- ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆ ರೂಪಿಸಲಾಗಿದೆ. ಈ ಕಾರ್ಯಕ್ರಮಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಸಮಸ್ಯೆ ಗಳು ಮತ್ತು ಅನುಭವಗಳನ್ನು ನೇರವಾಗಿ ಪೊಲೀಸರೊಂದಿಗೆ ಹಂಚಿಕೊಳ್ಳಲು ಅವಕಾಶ ಸಿಗಲಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಶಶಿಧರ್ ಕೋಸಂಬೆ ತಿಳಿಸಿದರು.

image

ರಾಜ್ಯದಲ್ಲಿ ಪ್ರತಿದಿನ ಸರಾಸರಿ 12 ಪೋಕ್ಸೋ ಪ್ರಕರಣಗಳು ದಾಖಲಾಗುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಈ ರೀತಿಯ ಪ್ರಕರಣಗಳು ಕಡಿಮೆ ಯಾಗಬೇಕಾದರೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಪ್ರಮಾಣ ಹೆಚ್ಚಾಗುವುದು ಅತ್ಯಂತ ಅಗತ್ಯ. ಪೋಕ್ಸೋ ಪ್ರಕರಣಗಳಲ್ಲಿ ಸಂತ್ರಸ್ತ ಮಕ್ಕಳಿಗೆ ರಕ್ಷಣೆ ಒದಗಿಸುವುದು ಮತ್ತು ಆರೋಪಿ ಗಳಿಗೆ ಕಾನೂನುಬದ್ಧವಾಗಿ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳುವುದು ಸರಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಹೊಣೆಗಾರಿಕೆಯಾಗಿದೆ. ಈ ದಿಸೆಯಲ್ಲಿ ಪ್ರತಿಯೊಬ್ಬ ನಾಗರಿಕರೂ ಸಹ ಜಾಗೃತಿಯಿಂದ ಸಹಕರಿಸಬೇಕು.

-ಶಶಿಧರ್ ಕೋಸಂಬೆ ಅಧ್ಯಕ್ಷ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ