Suspected Terrorist: ಭಯೋತ್ಪಾದಕ ಸಂಘಟನೆ ಜತೆ ಸಂಪರ್ಕ; ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ!
Bengaluru News: ಪಶ್ಚಿಮ ಬಂಗಾಳದ ಉತ್ತರ ಪರಗಣ ಮೂಲದ ಶಂಕಿತ ಉಗ್ರನನ್ನು ಖಚಿತ ಮಾಹಿತಿ ಆಧರಿಸಿ ಡಿಸಿಪಿ ನಾರಾಯಣ್ ನೇತೃತ್ವದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
-
Prabhakara R
Aug 14, 2026 11:27 PM
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಡೆ ಭದ್ರತೆ ಹೆಚ್ಚಿಸಲಾಗಿದೆ. ಈ ನಡುವೆ ನಗರದ ಹೊರಭಾಗದ ಜಿಗಣಿಯಲ್ಲಿ ವಾಸವಿದ್ದ ಶಂಕಿತ ಉಗ್ರನೊಬ್ಬನನ್ನು (Suspected Terrorist) ಪೊಲೀಸರು ಬಂಧಿಸಿದ್ದಾರೆ. ಈತ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆ ಮೂಲದ ಅಸಾಫುಲ್ ಮಲ್ಲಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಆಧರಿಸಿ ಡಿಸಿಪಿ ನಾರಾಯಣ್ ನೇತೃತ್ವದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರಿಂದ ಕಾರ್ಯಾಚರಣೆ ನಡೆಸಲಾಗಿದೆ. ಆರೋಪಿಯು ತೆಹ್ರಿಕ್-ಇ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಉಗ್ರ ಸಂಘಟನೆ ಜತೆ ಸಂಪರ್ಕ ಹೊಂದಿದ್ದ ಎನ್ನಲಾಗಿದೆ. ಈ ಸಂಬಂಧ ಹೆಬ್ಬಗೋಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.