ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Bomb Threat: ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್‌ ಬೆದರಿಕೆ; ಸ್ಥಳದಲ್ಲಿ ಆತಂಕ

ಬೆಂಗಳೂರಿನ ಹೆಬ್ಬಾಳದ ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್‌ ಬಂದಿದೆ. ಈ ಬಗ್ಗೆ​ಪ್ರಾಂಶುಪಾಲರು ಬೆಂಗಳೂರಿನ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇತ್ತೀಚೆಗೆ ರಾಜ್ಯದ ಹಲವು ಸರ್ಕಾರಿ ಕಚೇರಿಗಳು, ಕೋರ್ಟ್‌ಗಳಿಗೂ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿದ್ದವು.

ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್‌ ಬೆದರಿಕೆ; ಪೊಲೀಸರಿಂದ ತಪಾಸಣೆ

ಬೆಂಗಳೂರಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯ. -

Prabhakara R
Prabhakara R Jan 9, 2026 6:01 PM

ಬೆಂಗಳೂರು, ಜ. 9: ಬೆಂಗಳೂರು, ಮೈಸೂರು, ಹಾಸನ ಸೇರಿ ವಿವಿಧ ಜಿಲ್ಲೆಗಳ ಸರ್ಕಾರಿ ಕಚೇರಿಗಳು, ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ (Bomb Threat) ಬಂದ ಬೆನ್ನಲ್ಲೇ ಇದೀಗ ನಗರದ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ( Hebbal Kendriya Vidyalaya) ಬಾಂಬ್ ಬೆದರಿಕೆ ಬಂದಿದ್ದು, 3 ಆರ್​​ಡಿಎಕ್ಸ್​ ಬಾಂಬ್‌ ಇಟ್ಟಿರುವುದಾಗಿ ಶಾಲೆಯ ಇ-ಮೇಲ್‌ಗೆ ಕಿಡಿಗೇಡಿಗಳು ಸಂದೇಶ ರವಾನಿಸಿದ್ದಾರೆ.

ಕೇಂದ್ರಿಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್​​ ಬರುತ್ತಿದ್ದಂತೆ ಸ್ಥಳದಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಬಗ್ಗೆ ಪ್ರಾಂಶುಪಾಲ ಪಿ.ಎಂ.ಪ್ರಕಾಶ್ ಅವರು ಬೆಂಗಳೂರಿನ ಸದಾಶಿವನಗರ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ, ಈ ವೇಳೆ ಯಾವುದೇ ಆರ್​ಡಿಎಕ್ಸ್ ಬಾಂಬ್​ ಪತ್ತೆಯಾಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್​ ಬೆದರಿಕೆ ಎನ್ನುವುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇದಕ್ಕೆ ಸಂಬಂಧಿಸಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೆಕ್ಚರರ್‌ ಕಿರುಕುಳ; ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಬೆಂಗಳೂರು: ಡೆಂಟಲ್‌ ಕಾಲೇಜಿನ ಲೆಕ್ಚರರ್‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ. ಪರಿಮಳ ಹಾಗೂ ಭೂದೇವಯ್ಯ ದಂಪತಿಯ ಪುತ್ರಿ ಯಶಸ್ವಿನಿ (23) ನೇಣಿಗೆ ಶರಣಾದ ವಿದ್ಯಾರ್ಥಿನಿ. ಕಾಲೇಜಿನಲ್ಲಿ ಲೆಕ್ಚರರ್‌ ಕಿರುಕುಳದಿಂದ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಬೊಮ್ಮನಹಳ್ಳಿಯ ಆಕ್ಸ್‌ಫರ್ಡ್ ಡೆಂಟಲ್ ಕಾಲೇಜಿನ ವಿದ್ಯಾರ್ಥಿಯಾಗಿರುವ ಯಶಸ್ವಿನಿ, ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿ ವಿಭಾಗದಲ್ಲಿ ಮೂರನೇ ವರ್ಷದ ವಿದ್ಯಾರ್ಥಿನಿಯಾಗಿ ಓದುತ್ತಿದ್ದಳು.

ಕೆಲಸದ ಒತ್ತಡ ತಾಳಲಾರದೆ ಕೋರ್ಟ್‌ನಿಂದ ಹಾರಿ ವಿಶೇಷ ಚೇತನ ಸಿಬ್ಬಂದಿ ಆತ್ಮಹತ್ಯೆ

ಕಣ್ಣು ನೋವಾಗಿದ್ದರಿಂದ ಯಶಸ್ವಿನಿ ಬುಧವಾರ ಕಾಲೇಜಿಗೆ ರಜೆ ಹಾಕಿದ್ದಳು. ಗುರುವಾರ ಕಾಲೇಜಿಗೆ ಹೋದಾಗ ವಿದ್ಯಾರ್ಥಿಗಳ ಮುಂದೆ ಆಕೆಗೆ ಅವಮಾನ ಮಾಡಲಾಗಿದೆ. ಕಣ್ಣಿಗೆ ಯಾವ ಡ್ರಾಪ್ಸ್ ಬಳಸಿದೆ, ಎಷ್ಟು ಹನಿ ಹಾಕಿಕೊಂಡೆ ಎಂದು ಪ್ರಶ್ನಿಸಿದ್ದಾರೆ. ಇಡೀ ಬಾಟಲಿ ಸುರಿದುಕೊಂಡಾ ಎಂದು ಉಪನ್ಯಾಸಕ ಅವಮಾನಿಸಿದ್ದಾರೆ. ಅಲ್ಲದೇ ಸೆಮಿನಾರ್‌ಗೆ ಅವಕಾಶ ನೀಡಿಲ್ಲ ಎನ್ನಲಾಗಿದೆ. ಹೀಗಾಗಿ ಮನನೊಂದು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಪರಿಮಳ ಆರೋಪಿಸಿದ್ದಾರೆ.