ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಸಿಎಂ ಎಚ್ಚರಿಕೆ ಬೆನ್ನಲ್ಲೇ ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಮನೆಗಳ ಮೇಲೆ ಪೊಲೀಸರ ದಾಳಿ

ರಾಜ್ಯ ರಾಜಧಾನಿಯಲ್ಲಿ ಅಪರಾಧ ಕೃತ್ಯ ಹಾಗೂ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ನಗರದ ವಿವಿಧೆಡೆ ರೌಡಿಶೀಟರ್‌ಗಳ ಮನೆಗಳ ಮೇಲೆ ಸಿಸಿಬಿ ರೌಡಿ ಸ್ಕ್ವಾಡ್ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಅಪರಾಧ ಕೃತ್ಯ ಹಾಗೂ ರೌಡಿ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ನಗರದ ವಿವಿಧೆಡೆ (Bengaluru Police) ರೌಡಿಶೀಟರ್‌ಗಳ ಮನೆಗಳ ಮೇಲೆ ಸಿಸಿಬಿ ರೌಡಿ ಸ್ಕ್ವಾಡ್ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಇತ್ತೀಚೆಗೆ ರೌಡಿಗಳ ನಿಯಂತ್ರಣ ಕುರಿತು ಸಿಎಂ ಡಿಕೆ ಶಿವಕುಮಾರ್‌ (CM Dk Shivakumar) ಮಹತ್ವದ ಹೇಳಿಕೆ ನೀಡಿದ ಬೆನ್ನಲ್ಲೇ ಈ ಕಾರ್ಯಾಚರಣೆ ನಡೆದಿದೆ.

ಬೆಂಗಳೂರಿನಾದ್ಯಂತ ರೌಡಿ ಸ್ಕ್ವಾಡ್ ತಂಡಗಳು ಕಾರ್ಯಾಚರಣೆ ನಡೆಸಿವೆ. ಬೆಳಗಿನ ಜಾವವೇ ರೌಡಿಗಳ ಮನೆಗಳಿಗೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ರೌಡಿಗಳ ಚಲನವಲನ, ಅಪರಾಧ ಹಿನ್ನೆಲೆ ಹಾಗೂ ಪ್ರಸ್ತುತ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ನಗರದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ವ್ಯಕ್ತಿಗಳ ಮೇಲೆ ನಿಗಾ ಇಡುವ ಉದ್ದೇಶದಿಂದ ಈ ದಾಳಿ ನಡೆಸಲಾಗಿದೆ.

ರೌಡಿ ಸ್ಕ್ವಾಡ್ ಮುಖ್ಯಸ್ಥ ಹೇಮಂತ್ ನಿಂಬಾಳ್ಕರ್ ಹಾಗೂ ಪೊಲೀಸ್ ಆಯುಕ್ತ ಆರ್. ಹಿತೇಂದ್ರ ಅವರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಾರ್ಯಾಚರಣೆಯ ಪ್ರಗತಿಯನ್ನು ಪರಿಶೀಲಿಸಿದ್ದಾರೆ. ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯೋತಿ ನಗರದಲ್ಲಿರುವ ರೌಡಿಶೀಟರ್ ಕಿಶೋರ್ ಅಲಿಯಾಸ್ ಗುಡ್ಡೆ ಮನೆಗೂ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ನಗರದಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸರು ಈ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ರೌಡಿಶೀಟರ್‌ಗಳ ಚಲನವಲನ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದಾರೆ.

ಸಿಎಂ ಹೇಳಿದ್ದೇನು?

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದರು. ಈ ವೇಳೆ ಮಾತನಾಡಿದ್ದ ಸಿಎಂ, ರೌಡಿಗಳಿಗೆ ಪೊಲೀಸರ ಭಯ ಇರಬೇಕು, ಖಾಕಿ ಸಮವಸ್ತ್ರಕ್ಕೆ ಗೌರವ ಸಿಗುವಂತೆ ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಸೂಚಿಸಿದ್ದರು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು, ಅಗತ್ಯವಿರುವವರಿಗೆ ರಕ್ಷಣೆ ನೀಡಬೇಕು ಮತ್ತು ಪೊಲೀಸರು ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದರು. ರೌಡಿಸಂ ಸಂಪೂರ್ಣ ನಿಯಂತ್ರಣಕ್ಕೆ ಪ್ರತ್ಯೇಕ ರೌಡಿ ಸ್ಕ್ವಾಡ್ ಹಾಗೂ ಎಡಿಜಿಪಿ ಶ್ರೇಣಿಯ ಹಿರಿಯ ಅಧಿಕಾರಿಯ ನೇತೃತ್ವದಲ್ಲಿ ಪ್ರತ್ಯೇಕ ಕಮಿಷನರೇಟ್ ವ್ಯವಸ್ಥೆ ರೂಪಿಸಿರುವುದಾಗಿಯೂ ತಿಳಿಸಿದ್ದರು

Vishakha Bhat Heggar

View all posts by this author