ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಎಪಿಎಂಸಿ ಭೇಟಿ ಬಳಿಕ ಬೀದಿಗಿಳಿದ ಪೊಲೀಸ್ ಇಲಾಖೆ: 800 ಬಾಲ ಕಾರ್ಮಿಕರ ರಕ್ಷಣೆ

ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ನಿಯಂತ್ರಣ ಕೊಠಡಿಯ ವರದಿ ಪ್ರಕಾರ, ರಾಜ್ಯದ 962 ಪೊಲೀಸ್ ಠಾಣೆಗಳ ವ್ಯಾಪ್ತಿ ಯಲ್ಲಿ ಈ ಬೃಹತ್ ತಪಾಸಣಾ ಕಾರ್ಯ ನಡೆಸಲಾಗಿದೆ. ಕಾರ್ಯಾಚರಣೆ ಯ ಭಾಗವಾಗಿ 16951 ವಾಣಿಜ್ಯ ಮಳಿಗೆಗಳು, ಕಾರ್ಖಾನೆಗಳು ಮತ್ತು ಇತರೆ ಅನುಮಾನಾಸ್ಪದ ಸ್ಥಳಗಳ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

800 ಬಾಲ ಕಾರ್ಮಿಕರ ರಕ್ಷಣೆ

-

Profile
Ashok Nayak Sep 13, 2026 1:42 PM

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಯಶವಂತಪುರದ ಎಪಿಎಂಸಿ ಗೆ ಭೇಟಿ ನೀಡಿದ್ದ ವೇಳೆ ನೀಡಿದ ಸೂಚನೆಯಂತೆ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಬೃಹತ್ ಕಾರ್ಯಾಚರಣೆ ಹಮ್ಮಿಕೊಂಡಿದ್ದು, ಒಟ್ಟು 800 ಬಾಲಕಾರ್ಮಿಕರನ್ನು ರಕ್ಷಿಸಿದೆ.

ಪೊಲೀಸ್ ಮಹಾನಿರ್ದೇಶಕರ (ಡಿಜಿಪಿ) ನಿಯಂತ್ರಣ ಕೊಠಡಿಯ ವರದಿ ಪ್ರಕಾರ, ರಾಜ್ಯದ 962 ಪೊಲೀಸ್ ಠಾಣೆಗಳ ವ್ಯಾಪ್ತಿ ಯಲ್ಲಿ ಈ ಬೃಹತ್ ತಪಾಸಣಾ ಕಾರ್ಯ ನಡೆಸಲಾಗಿದೆ. ಕಾರ್ಯಾ ಚರಣೆಯ ಭಾಗವಾಗಿ 16951 ವಾಣಿಜ್ಯ ಮಳಿಗೆಗಳು, ಕಾರ್ಖಾನೆ ಗಳು ಮತ್ತು ಇತರೆ ಅನುಮಾನಾ ಸ್ಪದ ಸ್ಥಳಗಳ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಮೊದಲು ಬಾಲ ಕಾರ್ಮಿಕರ ರಕ್ಷಣೆ ವಿಷಯದಲ್ಲಿ ಕಾರ್ಮಿಕ ಕಲ್ಯಾಣ ಅಧಿಕಾರಿಗಳಷ್ಟೇ ದಾಳಿ ನಡೆಸುತ್ತಿದ್ದರು.

ಇದನ್ನೂ ಓದಿ: Children’s safety: ಮಕ್ಕಳನ್ನು ಸುರಕ್ಷಿತವಾಗಿ ಮನೆ ತಲುಪಿಸುವುದು ಶಾಲೆಯ ಜವಾಬ್ದಾರಿ: ಹೈಕೋರ್ಟ್‌

ಬೆಂಗಳೂರು ಹೊರತುಪಡಿಸಿದರೆ ವಿಜಯಪುರ ಜಿಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಾಲ ಕಾರ್ಮಿಕ‌ ರನ್ನು ರಕ್ಷಿಸಲಾಗಿದೆ. ವಿಜಯಪುರ ಜಿಲ್ಲೆಯಾದ್ಯಂತ 1156 ಸ್ಥಳಗಳಲ್ಲಿ ತಪಾಸಣೆ ನಡೆಸಲಾಗಿದ್ದು, ಒಟ್ಟು 72 ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಈ ಸಂಬಂಧ 25 ಪ್ರಕರಣ ಗಳಲ್ಲಿ ಸಂಬಂಧ ಪಟ್ಟ ಮಾಲೀಕರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅದೇ ರೀತಿ ತುಮಕೂರು ಜಿಲ್ಲೆಯಲ್ಲಿ 33, ಕೊಪ್ಪಳದಲ್ಲಿ 27, ಕಲಬುರಗಿ ನಗರದಲ್ಲಿ 22, ಚಿಕ್ಕಬಳ್ಳಾ ಪುರದಲ್ಲಿ 16 ಹಾಗೂ ಬಳ್ಳಾರಿಯಲ್ಲಿ 15 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಮೈಸೂರು ಜಿಲ್ಲೆ, ಹಾಸನ, ಮಂಡ್ಯ, ದಾವಣಗೆರೆ, ಶಿವಮೊಗ್ಗ, ಕಾರವಾರ, ಚಿಕ್ಕಮಗಳೂರು, ಗದಗ, ರಾಯಚೂರು ಹಾಗೂ ರೈಲ್ವೆ ಪೊಲೀಸ್ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆ ವೇಳೆ ಬಾಲಕಾರ್ಮಿಕರು ಪತ್ತೆಯಾಗಿಲ್ಲ. ರಕ್ಷಿಸಲ್ಪಟ್ಟ ಎಲ್ಲ ಮಕ್ಕಳಿಗೂ ಸೂಕ್ತ ಪುನರ್ವಸತಿ ಕಲ್ಪಿಸಲು ಇಲಾಖೆ ಕ್ರಮ ಕೈಗೊಂಡಿದೆ.

ರಕ್ಷಣೆಗೊಳಗಾದ ಬಹು ಪಾಲು ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದ್ದು, ಸಮಿತಿಯ ಮೂಲಕ ಮುಂದಿನ ಪುನರ್ವಸತಿ ಪ್ರಕ್ರಿಯೆ ನಡೆಯಲಿವೆ. ಚಿಕ್ಕಬಳ್ಳಾಪುರ ಜಿಯಲ್ಲಿ ರಕ್ಷಿಸಲ್ಪಟ್ಟ ಮಕ್ಕಳನ್ನು ಅವರ ಪೋಷಕರಿಗೆ ಸುರಕ್ಷಿತವಾಗಿ ಒಪ್ಪಿಸಲಾಗಿದೆ. ಉಡುಪಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ನಿಯಮಾನುಸಾರ ಮಕ್ಕಳನ್ನು ಹಸ್ತಾಂತರಿಸಲಾಗಿದೆ. ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಮಾಲೀಕರಿಗೆ ಬಹುತೇಕ ಕಡೆ ಎಚ್ಚರಿಕೆ ನೋಟಿಸ್ ಜಾರಿ ಮಾಡಲಾಗಿದೆ.

ಗಂಭೀರ ಸ್ವರೂಪದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ 2 ಮತ್ತು ವಿಜಯಪುರ ದಲ್ಲಿ 3 ಸೇರಿದಂತೆ ಒಟ್ಟು 5 ಎಫ್ಐಆರ್ ದಾಖಲಿಸಲಾಗಿದೆ. ‌

ರಾಜಧಾನಿಯಲ್ಲಿ 503 ಬಾಲ ಕಾರ್ಮಿಕರ ಪತ್ತೆ: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ನಡೆಸಿದ ಜಂಟಿ ವಿಶೇಷ ಕಾರ್ಯಾಚರಣೆ ಯಲ್ಲಿ ಒಟ್ಟು 503 ಬಾಲ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಒಟ್ಟು 5857 ಸ್ಥಳಗಳಲ್ಲಿ ಅನಿರೀಕ್ಷಿತ ಕಾರ್ಯಾಚರಣೆ ನಡೆಸಿ, ಕೆಲಸ ಮಾಡುತ್ತಿದ್ದ 503 ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿರುತ್ತದೆ. ಈ ಕಾರ್ಯಾಚರಣೆಯ ವೇಳೆ ನಿಯಮ ಉಲ್ಲಂಘಿಸಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಅಂಗಡಿ ಮಾಲೀಕರು ಮತ್ತು ಸಂಸ್ಥೆಗಳ ವಿರುದ್ಧ ಬಾಲ ಕಾರ್ಮಿಕರ ನಿಷೇಧ ಕಾಯ್ದೆ ಹಾಗೂ ಬಾಲ ನ್ಯಾಯ ಕಾಯ್ದೆಯ ಅಡಿಯಲ್ಲಿ ಒಟ್ಟು 18 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಅತ್ಯಧಿಕವಾಗಿ ಪಶ್ಚಿಮ ವಿಭಾಗದಲ್ಲಿ 84 ಹಾಗೂ ಪೂರ್ವ ವಿಭಾಗದಲ್ಲಿ 71 ಬಾಲ ಕಾರ್ಮಿಕರು ರಕ್ಷಣೆಯಾಗಿದ್ದರೆ, ಸಿಸಿಬಿ ತಂಡವು ಒಂದೇ ದಿನ 9 ಪ್ರಕರಣ ದಾಖಲಿಸಿದೆ.