BBMP News: ಈ ಪ್ರಮಾಣ ಪತ್ರ ಇದ್ದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ- BBMP ಆದೇಶ
Possession certificates:ರಾಷ್ಟ್ರ ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, ನೀರು ಸರಬರಾಜು / ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ಬೆಂಗಳೂರು: ಇನ್ನು ಮುಂದೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ(BBMP) ಒಂದು ಪ್ರಮಾಣ ಪತ್ರ ಪಡೆದರೆ ಮಾತ್ರ ಕಟ್ಟಡಗಳಿಗೆ ವಿದ್ಯುತ್, ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಈ ನಿಟ್ಟಿನಲ್ಲಿ ಬಿಬಿಎಂಪಿ ಒಂದು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಇದರ ಪ್ರಕಾರ ಇನ್ಮುಂದೆ ಸ್ವಾಧೀನಾನುಭವ ಪ್ರಮಾಣ ಪತ್ರ(Possession certificates) ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, ನೀರು ಸರಬರಾಜು & ಒಳಚರಂಡಿ ಸಂಪರ್ಕ ಸಿಗಲಿದೆ. ಇದ್ದಕ್ಕಿದ್ದಂತೆ ಈ ಮಹತ್ವದ ನಿರ್ಧಾರಕ್ಕೆ ಕಾರಣ ಇದೆ.
ರಾಷ್ಟ್ರ ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ಸಂಪರ್ಕಕ್ಕೆ ಕೋರಿ ಸುಮಾರು 66,400 ಅರ್ಜಿಗಳು ಬಂದಿವೆ. ಸುಪ್ರೀಂ ಕೋರ್ಟ್ ಕಳೆದ ವರ್ಷ ಡಿಸೆಂಬರ್‌ನಲ್ಲಿ ನೀಡಿರುವ ಆದೇಶದಲ್ಲಿ ಸ್ಥಳೀಯ ಸಂಸ್ಥೆಗಳಿಂದ ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರ ಪಡೆದಿರುವ ಕಟ್ಟಡಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, ನೀರು ಸರಬರಾಜು / ಒಳಚರಂಡಿ ಸಂಪರ್ಕ ನೀಡುವಂತೆ ಆದೇಶಿಸಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ: Greater Bengaluru Authority: ಇನ್ಮುಂದೆ BBMP ಇರಲ್ಲ.. ಇನ್ನೇನಿದ್ದರೂ ಗ್ರೇಟರ್ ಬೆಂಗಳೂರು- ಆಡಳಿತದಲ್ಲೂ ಬದಲಾವಣೆ!
ಪ್ರಮಾಣ ಪತ್ರ ಪಡೆಯುವುದು ಹೇಗೆ?
ಸ್ವಾಧೀನಾನುಭವ ಪ್ರಮಾಣ ಪತ್ರ / ಪೂರ್ಣತಾ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿರುವ / ಸಲ್ಲಿಸುವ ವಿವರಗಳನ್ನು ಪಡೆಯಲು ಬಿಬಿಎಂಪಿಯಿಂದ SMS ಮತ್ತು ದೂರವಾಣಿ ಕರೆ ಮುಖಾಂತರ ವಿದ್ಯುತ್ ಸಂಪರ್ಕಕ್ಕಾಗಿ ಬಾಕಿ ಇರುವ ಅರ್ಜಿದಾರರನ್ನು ಸಂಪರ್ಕಿಸಲಾಗುವುದು. ಅಲ್ಲದೇ ಬಿಬಿಎಂಪಿ ಕೋರುವ ಮಾಹಿತಿಯನ್ನು ಒದಗಿಸಲು ಹಾಗೂ ಈ ಕೆಳಕಂಡ ಆನ್ಲೈನ್ ಲಿಂಕ್ ನಲ್ಲಿ ನೊಂದಾಯಿತ Architect/ Engineer ಗಳ ಮುಖಾಂತರ ಸ್ವಾಧೀನಾನುಭವ ಪ್ರಮಾಣ ಪತ್ರಕ್ಕಾಗಿ ಅರ್ಜಿ ಸಲ್ಲಿಸುವಂತೆ ಬೆಂಗಳೂರು ಸಾರ್ವಜನಿಕರನ್ನು ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಕೋರಿದ್ದಾರೆ. ಇದಕ್ಕಾಗಿ ಕಟ್ಟಡ ಮಾಲೀಕರು https://bpas.bbmpgov.in/BPAMSClient4/Default.aspx ಗೆ ಭೇಟಿ ನೀಡಬಹುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.