ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Karnataka Weather: ಇಂದು ರಾಜ್ಯದ 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ / ರಾತ್ರಿಯ ವೇಳೆಗೆ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಗುಡುಗು ಸಹಿತ ಮಳೆ ಅಥವಾ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

ಬುಧವಾರ ಸುರಿದ ಮಳೆಯಿಂದ ಬೆಂಗಳೂರಿನ ಬಿಜಿಎಸ್ ಫ್ಲೈಓವರ್‌ನಲ್ಲಿ ನೀರು ನಿಂತಿರುವುದು.

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಭಾರಿ ಮಳೆಯಾಗಿದೆ (Heavy Rain). ಅದೇ ರೀತಿ ಇಂದು (ಏ.30) ಕೂಡ ಮಳೆ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಳಗಾವಿ, ಬೀದರ್‌ ಹೊರತುಪಡಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು (Karnataka Weather) ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ / ರಾತ್ರಿಯ ವೇಳೆಗೆ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಗುಡುಗು ಸಹಿತ ಮಳೆ ಅಥವಾ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 36°C ಮತ್ತು 24°C ಇರುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2°C ಹೆಚ್ಚಾಗುವ ಸಾಧ್ಯತೆಯಿದೆ.

ಏಪ್ರಿಲ್‌ 30ರಂದು ಬೆಂಗಳೂರು, ಮೈಸೂರು, ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ, ವಿಜಯನಗರ ಸೇರಿ ರಾಜ್ಯದ 29 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ನೀಡಿರುವ ಹಿನ್ನೆಲೆಯಲ್ಲಿ ಭಾರಿ ಮಳೆಯಾಗುವ ಸಂಭವವಿದೆ.

ಮೇ 1ರಂದು ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ.

ಮೇ 2ರಂದು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ಕೊಡಗು ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮೇ 3ರಂದು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು, ಕೊಡಗು, ಮೈಸೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.