ಬೆಂಗಳೂರು, ಅ.27: ರಾಜ್ಯದ ಕರಾವಳಿಯ ಬಹುತೇಕ ಕಡೆಗಳಲ್ಲಿ ಭಾನುವಾರ ಮಳೆಯಾಗಿದ್ದು, ಉತ್ತರ ಒಳನಾಡಿನ ಹಲವೆಡೆ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತಮ ಮಳೆ ಸುರಿದಿದೆ. ಹಾಗೆಯೇ ಅ.28ರಂದು ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಉಳಿದೆಲ್ಲಾ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (Karnataka Weather) ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ (Rain News) ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 25°C ಮತ್ತು 20°C ಇರುವ ಸಾಧ್ಯತೆ ಇದೆ.
ಮೀನುಗಾರರಿಗೆ ಎಚ್ಚರಿಕೆ
ಅಕ್ಟೋಬರ್ 28 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 40-50 ಕಿ.ಮೀ ನಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಮೇಲಿನ ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ಅ.28ರಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Cyclone Montha: ಕರ್ನಾಟಕಕ್ಕೂ ಮೋಂತಾ ಚಂಡಮಾರುತ ಎಫೆಕ್ಟ್: ಎಲ್ಲಿ ಎಷ್ಟು ದಿನ ಮಳೆ?
ಅ.29ರಂದು ಕೂಡ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಅ.30ರಂದು ಕರಾವಳಿ ಹಾಗೂ ಉತ್ತರ ಒಳನಾಡಿನ ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬಳ್ಳಾರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಒಂದು ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಅ.31ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Monsoon Fashion 2025: ಮಾನ್ಸೂನ್ ಸೀಸನ್‌ನಲ್ಲೂ ಮುಂದುವರಿದ ಫ್ಲೋರಲ್ ಸೀರೆಗಳು
ನ.1 ಮತ್ತು 2ರಂದು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.