Bengaluru Power Cut: ಡಿ.23ರಿಂದ ಜ.11ವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ
ಬೆಂಗಳೂರಿನ 220/66/11ಕೆ.ವಿ ಇ.ಪಿ.ಐ.ಪಿ ಸ್ಟೇಷನ್‌ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -3 ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಹಿನ್ನೆಲೆಯಲ್ಲಿ ಡಿಸೆಂಬರ್ 23ರಂದು ಬೆಳಗ್ಗೆ 10 ಗಂಟೆಯಿಂದ ಜನವರಿ 11ರಂದು ಸಂಜೆ 5 ಗಂಟೆಯವರೆಗೆ ಹಲವು ಸ್ಥಳಗಳಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯವಾಗಲಿದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.21: ನಗರದ 220/66/11ಕೆ.ವಿ ಇ.ಪಿ.ಐ.ಪಿ ಸ್ಟೇಷನ್‌ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -3 ರ ರಿಟ್ರೋಫಿಲ್ಲಿಂಗ್ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಡಿಸೆಂಬರ್ 23ರಂದು ಬೆಳಗ್ಗೆ 10 ಗಂಟೆಯಿಂದ ಜನವರಿ 11ರಂದು ಸಂಜೆ 5 ಗಂಟೆಯವರೆಗೆ ವಿವಿಧ ಸ್ಥಳಗಳಲ್ಲಿ ಮಧ್ಯಂತರವಾಗಿ ವಿದ್ಯುತ್ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
“ಎಲ್&ಟಿ , ಆರ್‌ಎಂಝಡ್ ನೆಕ್ಸ್ಟ್ (RMZ Next), ರಾಗಿಹಳ್ಳಿ–ಸಿದ್ದಾಪುರ ಗೇಟ್, ಇಪಿಐಪಿ ಲೇಔಟ್, ಟಿಸಿಎಸ್ ಸಾಫ್ಟ್‌ವೇರ್, ಎಸ್ಜೆಆರ್ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಎಂ/ಎಸ್ ವಿಎಸ್ಎನ್ಎಲ್ ಫೀಡರ್, ರಿಲಯನ್ಸ್ (ಬಿಗ್ ಬಜಾರ್), ಓರಿಯಂಟಲ್ ಹೋಟೆಲ್, ಏರ್ಟೆಲ್, ಬುಷ್ರಾ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಗೋಪಾಲನ್ ಎಂಟರ್ಪ್ರೈಸಸ್, ಸದಾ ಟೆಕ್ ಪಾರ್ಕ್ (ಇಪಿಐಪಿ ಲೇಔಟ್), ಕ್ವಾಲ್ಕಾಮ್, ಕ್ವಾಲ್ಕಾಮ್–2, ಜಿಇ ಬಿಇ ಕಂಪನಿ, ಬ್ಯಾಗ್ಮನೆ ನೀಯಾನ್ ಬ್ಲಾಕ್, ಇಪಿಐಪಿ ಇಂಡಸ್ಟ್ರಿಯಲ್ ಏರಿಯಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಡಿಸೆಂಬರ್ 24ರವರೆಗೆ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ
ಬೆಂಗಳೂರು: ಡಿಸೆಂಬರ್ 21ರಿಂದ 24ರವರೆಗೆ ಬೆಂಗಳೂರು ಸೇರಿ ರಾಜ್ಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – 2025 (Pulse Polio Campaign 2025) ಹಮ್ಮಿಕೊಂಡಿದ್ದು, ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವಂತೆ ಪೋಷಕರಿಗೆ ರಾಜ್ಯ ಸರ್ಕಾರ ಮನವಿ ಮಾಡಿದ್ದು, ಎರಡು ಹನಿಗಳಿಂದ ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ ಎಂದು ಕರೆ ನೀಡಿದೆ.
ಡಿಸೆಂಬರ್ 21ರಂದು ಭಾನುವಾರ ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ಬೂತ್‌ಗಳು, ಆಸ್ಪತ್ರೆಗಳಲ್ಲಿ ಲಸಿಕೆ ನೀಡುವ ಕಾರ್ಯ ನಡೆದಿದೆ. ಡಿ. 22 ರಿಂದ 24ರವರೆಗೆ ಆರೋಗ್ಯ ಸಿಬ್ಬಂದಿ, ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ಮಾಡಲಿದ್ದಾರೆ.
ಭಾರತವು ಪೋಲಿಯೋ ಮುಕ್ತ ದೇಶವಾಗಿದೆ. ಆದರೆ ಕೆಲವು ದೇಶಗಳಲ್ಲಿ ಪೋಲಿಯೋ ಇನ್ನೂ ಭೀತಿಯನ್ನುಂಟುಮಾಡುತ್ತಿದ್ದು, ನಮ್ಮ ದೇಶದಲ್ಲೂ ಮರುಕಳಿಸುವ ಸಾಧ್ಯತೆಯಿದೆ. ಹೀಗಾಗಿ ನಿಮ್ಮ ಐದು ವರ್ಷದೊಳಗಿನ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕಿಸಿ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ. ಪೋಲಿಯೋ ವಿರುದ್ಧ ಭಾರತ ಸಾಧಿಸಿರುವ ಗೆಲುವನ್ನು ಮುಂದುವರಿಸಲು ನಮ್ಮ ಜೊತೆ ಕೈ ಜೋಡಿಸಿ ಎಂದು ಮನವಿ ಮಾಡಿರುವ ಆರೋಗ್ಯ ಇಲಾಖೆ, ಶಾಶ್ವತ ಅಂಗವಿಕಲತೆಯನ್ನು ತರಬಲ್ಲ ಪೋಲಿಯೋವನ್ನು ಲಸಿಕೆಯ ಮೂಲಕ ಪ್ರತಿರೋಧಿಸೋಣ ಕರೆ ನೀಡಿದೆ.