ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Power Cut: ನ.27ರಂದು ಬೆಂಗಳೂರಿನ ವಿಲ್ಸನ್ ಗಾರ್ಡನ್, ಶಾಂತಿನಗರ ಸೇರಿ ಹಲವೆಡೆ ವಿದ್ಯುತ್ ವ್ಯತ್ಯಯ

66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ನವೆಂಬರ್‌ 27ರಂದು ಬೆಳಗ್ಗೆ 10ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Bengaluru Power Cut: ನ.27ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

ಹೈಟೆನ್ಶನ್ ವಿದ್ಯುತ್ ಗೋಪುರ (ಸಾಂದರ್ಭಿಕ ಚಿತ್ರ) -

Prabhakara R
Prabhakara R Nov 25, 2025 5:59 PM

ಬೆಂಗಳೂರು, ನ.25: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ 66/11ಕೆವಿ ಬಿ.ಎಂ.ಟಿ.ಸಿ ಉಪಕೇಂದ್ರ ವ್ಯಾಪ್ತಿಯಲ್ಲಿ ನವೆಂಬರ್‌ 27ರಂದು ಬೆಳಗ್ಗೆ 10ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿಲ್ಸನ್ ಗಾರ್ಡನ್, ಹೊಂಬೆಗೌಡ ನಗರ, ಸಂಪಂಗಿರಾಮ ನಗರ, ಜೆ.ಸಿ. ರಸ್ತೆ, ಶಾಂತಿನಗರ, ಬಿಟಿಎಸ್ ರಸ್ತೆ, ರಿಚ್ ಮಂಡ್ ಸರ್ಕಲ್, ರೆಸಿಡೆನ್ಸಿ ರೋಡ್, ಸುದಾಮನಗರ, ಕೆ.ಎಚ್. ರಸ್ತೆ, ಶಾಂತಿನಗರ, ವಿಲ್ಸನ್ ಗಾರ್ಡನ್, ಡಬಲ್ ರೋಡ್, ಸುಬ್ಬಯ್ಯ ಸರ್ಕಲ್ ಸಿದ್ದಯ್ಯ ರಸ್ತೆ, ಲಾಲ್ ಬಾಗ್ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ನ.26ರಂದು ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಆರ್.ಬಿ.ಐ., ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.26ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.

ಆರ್. ಬಿ.ಐ. ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೆ, ಅರಬ್ ಲೈನ್, ವೆಲ್ಲಿಂಗ್ಟನ್ ಸ್ಟ್ರೀಟ್, ಕರ್ಲಿ ಸ್ಟ್ರೀಟ್, ಲಿಯೋನಾರ್ಡ್ ಸ್ಟ್ರೀಟ್, ರಿನಿಯಸ್ ಸ್ಟ್ರೀಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.