Bengaluru Power Cut: ನ.15ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
BESCOM: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಗೋಕುಲ ಎಂಯುಎಸ್‌ಎಸ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.15 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸಾಂದರ್ಭಿಕ ಚಿತ್ರ. -
ಬೆಂಗಳೂರು, ನ.13: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಗೋಕುಲ ಎಂಯುಎಸ್‌ಎಸ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.15 ರಂದು ಭಾನುವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು
ಗೋಕುಲ ಎಂಯುಎಸ್‌ಎಸ್, ಡಿ.ಬಿ ಸಂದ್ರಾ 4ನೇ ಬ್ಲಾಕ್, ಜಿ.ಬಿ.ಕಾವಲ್ ಅರಣ್ಯ, ಗಂಗಮ್ಮ ವೃತ್ತ, ಡಿ.ಬಿ.ಸಂದ್ರ 2ನೇ ಬ್ಲಾಕ್, ಕಮ್ಮಗೊಂಡನಹಳ್ಳಿ, ಬಿಇಎಲ್ ಉತ್ತರ ಕಾಲೋನಿ ಮತ್ತು ಬಿಇಎಲ್ ಸೌತ್ ಕಾಲೋನಿ, ಬಾಹುಬಲಿ ನಗರ, ಡಿ.ಬಿ.ಸಂದ್ರ 4ನೇ ಬ್ಲಾಕ್, ಪಟೇಲ್ ಪಿಳ್ಳೇಗೌಡ ಲೇಔಟ್, ಬ್ಲೂಮ್ ಫೀಲ್ಡ್ ಗಾರ್ಡನ್, ರಾಮಚಂದ್ರಾಪುರ, ಜಾಲಹಳ್ಳಿ ಗ್ರಾಮ, ಶಾರದಾಂಬನಗರ, ಬಾಹುಬಲಿನಗರ, HMT ಇಂಡಸ್ಟ್ರಿಯಲ್ ಎಸ್ಟೇಟ್, ಪ್ರಜ್ ವಲ್ಲಿಂಗ್ಟನ್ ಮತ್ತು ಪ್ರೆಸ್ವೀಜ್ ಕೆನ್ಸಿಂಗ್ಟನ್ ಅಪಾರ್ಟ್ಮೆಂಟ್, ಮುತ್ಯಾಲನಗರ, ಚಾಮುಂಡೇಶ್ವರಿ ಲೇಔಟ್, ನಂಜಪ್ಪ ಲೇಔಟ್, ಸಿ.ರಾಮಯ್ಯ ಲೇಔಟ್, ಗೋಕುಲ ಎಕ್ಸ್ ಟಿಎನ್, HMR ಲೇಔಟ್ MRTDC. ಪ್ರೆಸ್ಪೇಜ್ ಅಪಾರ್ಟೆಂಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ನ.14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಬನಶಂಕರಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.14 ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಕತ್ರಿಗುಪ್ಪೆ, ಕತ್ರಿಗುಪ್ಪೆ ನೀರಿನ ಟ್ಯಾಂಕ್, ಸೀತಾ ವೃತ್ತ, ಬ್ಯಾಂಕ್ ಕಾಲೋನಿ, ಬಾಲಾಜಿ ಲೇಔಟ್, ಐಟಿ ಲೇಔಟ್, ದ್ವಾರಕಾ ನಗರ, ವೀರಭದ್ರ ನಗರ, ಗಿರಿನಗರ, ವಿಎಚ್‌ಬಿಸಿ ಲೇಔಟ್, ಗಿರಿನಗರ, ಕತ್ರಿಗುಪ್ಪೆ ಮುಖ್ಯ ರಸ್ತೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.