ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Power outage: ಜೂನ್‌ 23, 24ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

Power outage: ಬೆಂಗಳೂರಿನ ಎಲಿಟಾ ಪ್ರೊಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ಜೂನ್ 23 ಮತ್ತು ‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್‌ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ಕೈಗೊಂಡಿರುವ ಹಿನ್ನೆಲೆಯಲ್ಲಿ 24ರಂದು ಹಲವೆಡೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಜೂನ್‌ 23, 24ರಂದು ಬೆಂಗಳೂರಿನ ಹಲವೆಡೆ ವಿದ್ಯುತ್ ವ್ಯತ್ಯಯ

Profile Prabhakara R Jun 22, 2025 6:49 PM

ಬೆಂಗಳೂರು: ಬೆಸ್ಕಾಂನಿಂದ ತುರ್ತುನಿರ್ವಹಣಾ ಕೆಲಸ ಕೈಗೊಂಡಿರುವ ಹಿನ್ನೆಲೆಯಲ್ಲಿ ನಗರದ ಹಲವೆಡೆ ಜೂನ್ 23 ಮತ್ತು 24ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಎಲಿಟಾ ಪ್ರೊಮೆನೇಡ್ ಮತ್ತು ಅರೆಹಳ್ಳಿ ಉಪಕೇಂದ್ರ ನಿರ್ವಹಣಾ ಕಾಮಗಾರಿ ನಿಮಿತ್ತ ನಗರದ ವಿವಿಧೆಡೆ ಜೂನ್ 23ರ ಸೋಮವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ (Power outage) ವ್ಯತ್ಯಯವಾಗಲಿದೆ. ಅದೇ ರೀತಿ ‘66/11ಕೆ.ವಿ ಎಚ್.ಬಿ.ಆರ್’ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನಗರದ ಹಲವೆಡೆ ಜೂನ್ 24ರಂದು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಸೋಮವಾರ ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ?

ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್, ಕೆ.ಆರ್. ಲೇಔಟ್, ಶಾರದನಗರ, ಚುಂಚಗಟ್ಟ ಮತ್ತು ಸುತ್ತಮುತ್ತಲ ಪ್ರದೇಶಗಳು, ಅರೇಹಳ್ಳಿ, ಇಟ್ಟಮಡು, ಎಜಿಎಸ್ ಲೇಔಟ್, ಚಿಕ್ಕಲಸಂದ್ರ, ಟಿ.ಜಿ. ಲೇಔಟ್, ಭುವನೇಶ್ವರಿನಗರ ಇಸ್ರೋ ಲೇಔಟ್, ಇಸ್ರೋ ಲೇಔಟ್ ಇಂಡಸ್ರ್ಟಿಯಲ್ ಏರಿಯಾ, ಕುಮಾರಸ್ವಾಮಿ ಬಡಾವಣೆ, ವಿಠ್ಠಲ ನಗರ, ವಿಕ್ರಮ್ ನಗರ, ಯೆಲಚೇನಹಳ್ಳಿ, ಸುತ್ತಮುತ್ತಲ ಪ್ರದೇಶ, ಚಿಕ್ಕಲಸಂದ್ರ ವಿಲೇಜ್, ಕದಿರೇನಹಳ್ಳಿ, ಅಬ್ಬಯ್ಯ ನಾಯ್ಡು ಸ್ಟುಡಿಯೋ ಸುತ್ತಮುತ್ತಲ ಪ್ರದೇಶ, ನಾಯ್ಡು ಲೇಔಟ್, ಎಜಿಎಸ್ ಲೇಔಟ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ.

ಮಂಗಳವಾರ ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:

ಎಚ್.ಬಿ.ಆರ್. 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್‌ನಗರ, ಸುಭಾಶ್ ಲೇಔಟ್, ರಾಮ ದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಎಚ್.ಬಿ.ಆರ್. 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ. ಹಳ್ಳಿ ಗ್ರಾಮ, ಸಿ.ಎಂ.ಆರ್.ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್‌ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಅದೇ ರೀತಿ ಎಚ್.ಬಿ.ಆರ್. ಲೇಔಟ್ 4ನೇ ಬ್ಲಾಕ್, ಯಾಸಿನ್‌ನಗರ, 5ನೇ ಬ್ಲಾಕ್, ಎಚ್.ಬಿ.ಆರ್. ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ. ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಎಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಎಚ್.ಬಿ.ಆರ್. ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್. ಲೇಔಟ್, ಸೆಂಟ್ರಲ್ ಎಕ್ಸೈಸ್‌, ಕೆ.ಕೆ. ಹಳ್ಳಿ, ಹೆಣ್ಣೂರು ಮುಖ್ಯರಸ್ತೆ, ಹೆಚ್.ಆರ್.ಬಿ.ಆರ್. 3ನೇ ಬ್ಲಾಕ್,ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್‌ಸ್ಟ್ರೀಟ್, ಎ.ಕೆ.ಕಾಲೋನಿ, ಎಚ್.ಆರ್.ಬಿ.ಆರ್. 1ನೇ ಬ್ಲಾಕ್, 80 ಅಡಿರಸ್ತೆ, ಸಿ.ಎಂ.ಆರ್. ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾರ್ಟರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ. ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಮಾತ ಲೇಔಟ್, ಭಾರತ ಮಾತ ಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿ, ಬಿ.ಎಮ್.ಆರ್.ಸಿ.ಎಲ್, ಗಾಂಧಿನಗರ, ಕುಶಾಲನಗರ, ಶಾಂಪುರ ಮೇನ್ ರೋಡ್‌ ಭಾಗದಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.



ಈ ಸುದ್ದಿಯನ್ನೂ ಓದಿ | Bike Taxi Service: ಬೈಕ್ ಟ್ಯಾಕ್ಸಿ ಬೆಂಬಲಿಸಿದ ಉದ್ಯಮಿ ಮೋಹನ್ ದಾಸ್ ಪೈ ವಿರುದ್ಧ ದೂರು; 10 ಮಂದಿ ವಿರುದ್ಧ ಎಫ್‌ಐಆರ್‌