ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Prajwal Revanna: ಪ್ರಜ್ವಲ್ ರೇವಣ್ಣ ಪ್ರಕರಣ; ತನಿಖೆ ನಡೆಸಿದ SIT ಟೀಂಗೆ ಮುಖ್ಯಮಂತ್ರಿ ಪದಕ ಘೋಷಣೆ

ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ. ಗೃಹ ಸಚಿವ ಜಿ ಪರಮೇಶ್ವರ್ ಅವರು ತನಿಖೆ ನಡೆಸಿದ ಎಸ್ಐಟಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಎಸ್ಐಟಿ ತಂಡಕ್ಕೆ ಸಿಎಂ ಪದಕ ನೀಡಲಾಗುತ್ತದೆ ಎಂದು ಘೋಷಿಸಿದರು.

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿದೆ. ಸತತ ಒಂದು ವರ್ಷಗಳ ತನಿಖೆ ಬಳಿಕ ವಾದ ಪ್ರತಿವಾದಗಳನ್ನು ಆಲಿಸಿದ ಕೋರ್ಟ್‌ ಮಾಜಿ ಸಂಸದನನ್ನು ದೋಷಿ ಎಂದು ಘೋಷಿಸಿದೆ. ಇದೀಗ ತನಿಖೆ ಮಾಡಿದ SIT ಟೀಂ ಕುರಿತು ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗೃಹ ಸಚಿವ ಜಿ ಪರಮೇಶ್ವರ್ ಅವರು ತನಿಖೆ ನಡೆಸಿದ ಎಸ್ಐಟಿ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದು, ಎಸ್ಐಟಿ ತಂಡಕ್ಕೆ ಸಿಎಂ ಪದಕ ನೀಡಲಾಗುತ್ತದೆ ಎಂದು ಘೋಷಿಸಿದರು.

ಬೆಂಗಳೂರಲ್ಲಿ ಮಾತನಾಡಿದ ಅವರು, ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆ ನೀಡಿರುವ ವಿಚಾರವಾಗಿ ಪೊಲೀಸರು ಮೊದಲಿನಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎಸ್ಐಟಿಗೆ ಅಭಿನಂದನೆ ಹೇಳುತ್ತೇನೆ. ಇದು ಐತಿಹಾಸಿಕ ತೀರ್ಪು ನ್ಯಾಯಾಲಯಕ್ಕೆ ಎಲ್ಲಾ ದಾಖಲೆಗಳನ್ನು ನೀಡಿತ್ತು. ಪೊಲೀಸರು ತ್ವರಿತ ಹಾಗೂ ಸಮರ್ಪಕ ತನಿಖೆ ನಡೆಸಿದ್ದಾರೆ ಹಾಗಾಗಿ ಸರ್ಕಾರದ ಪರವಾಗಿ ನಾನು ಎಲ್ಲರಿಗೂ ಅಭಿನಂದನೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಎಷ್ಟೇ ರಾಜಕೀಯ ಒತ್ತಡವಿದ್ದರೂ ಮಣಿಯದೆ ಎಸ್‌ಐಟಿ ಕಾರ್ಯನಿರ್ವಹಿಸಿದೆ. ಅವರ ಈ ತನಿಖೆ ಮೆಚ್ಚುಗೆಗೆ ಅರ್ಹ. ನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ಅಲ್ಲದೇ ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ ಸುದ್ದಿ ತಿಳಿದು ಕಣ್ಣೀರಿಟ್ಟ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಮೈಸೂರಿನ ಕೆ.ಆರ್. ನಗರದ ಮನೆಗೆಲಸದ ಮಹಿಳೆಯ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ಸಾಬೀತಾಗಿತ್ತು. ಶನಿವಾರ ನ್ಯಾಯಾಲಯ ಜೀವಾವಧಿ ಶಿಕ್ಷೆ ಘೋಷಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಕಟಿಸಿದ್ದು, ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು ಐಪಿಸಿ ಸೆಕ್ಷನ್‌ 376(2)(ಕೆ) ಅಂದರೆ ಪ್ರಬಲವಾದ ಸ್ಥಾನದಲ್ಲಿರುವ ವ್ಯಕ್ತಿಯಿಂದ ಅತ್ಯಾಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆ ಘೋಷಣೆಯಾಗಿದ್ದು, ಐದು ಲಕ್ಷ ರೂ. ದಂಡ ವಿಧಿಸಲಾಗಿದೆ. ಅದೇ ರೀತಿ ಐಪಿಸಿ ಸೆಕ್ಷನ್‌ 376(2)(ಎನ್‌) ಅಂದರೆ ಪದೇ ಪದೇ ಅತ್ಯಾಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆ (ಜೀವನ ಪರ್ಯಂತ) ಹಾಗೂ ಐದು ಲಕ್ಷ ರೂ. ದಂಡ ವಿಧಿಸಿದ್ದಾರೆ. ಸದ್ಯ ಪ್ರಜ್ವಲ್‌ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.