#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Pralhad Joshi: ಮೆಟ್ರೋ ದರ ಏರಿಕೆ: ಜನರ ಎದಿರೇಟಿಗೆ ಮಣಿದ ಸಿಎಂ; ಪ್ರಲ್ಹಾದ್‌ ಜೋಶಿ ವಾಗ್ದಾಳಿ

ಬೆಂಗಳೂರಿನಲ್ಲಿ ಜನ ಮೆಟ್ರೋ ರೈಲು ಸಂಚಾರ ತಿರಸ್ಕರಿಸುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಯುಟರ್ನ್ ಹೊಡೆದಿದ್ದಾರೆ. ಈಗ ಟಿಕೆಟ್ ದರ ಕಡಿಮೆ ಮಾಡುವಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಟೀಕಿಸಿದ್ದಾರೆ.

ಮೆಟ್ರೋ ದರ; ಜನರ ಎದಿರೇಟಿಗೆ ಮಣಿದ ಸಿಎಂ: ಪ್ರಲ್ಹಾದ್‌ ಜೋಶಿ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ.

Profile Siddalinga Swamy Feb 13, 2025 10:21 PM

ನವದೆಹಲಿ: ಮೆಟ್ರೋ (Namma Metro) ದರ ಏರಿಸಿ ಕೇಂದ್ರಕ್ಕೆ ಅದರ ಹಣೆಪಟ್ಟಿ ಕಟ್ಟಲು ಹೊರಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಜನರೇ ಎದಿರೇಟು ಕೊಟ್ಟಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi ) ಪ್ರತಿಕ್ರಿಯಿಸಿದ್ದಾರೆ. ಬಿಎಂಆರ್‌ಸಿಎಲ್ (BMRCL) ಮೆಟ್ರೋ ದರ ಪರಿಷ್ಕರಣೆ ಮಾಡಿದ ಬಳಿಕ ಕೇಂದ್ರ ಸರ್ಕಾರದತ್ತ (Central Government) ಬೆರಳು ತೋರಿ ಆರೋಪ ಹೊರಿಸಿದ್ದ ಸಿಎಂ, ಈಗ ಜನರ ವಿರೋಧ ತಾರಕಕ್ಕೇರುತ್ತಲೇ ಮಣಿದು ಬೆಲೆ ಇಳಿಸಲು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಿಎಂ ಯುಟರ್ನ್

ಬೆಂಗಳೂರಿನಲ್ಲಿ ಜನ ಮೆಟ್ರೋ ರೈಲು ಸಂಚಾರ ತಿರಸ್ಕರಿಸುತ್ತಿದ್ದಂತೆ ಸಿಎಂ ಯೂಟರ್ನ್ ಹೊಡೆದಿದ್ದಾರೆ. ಈಗ ಟಿಕೆಟ್ ದರ ಕಡಿಮೆ ಮಾಡುವಂತೆ ಬಿಎಂಆರ್‌ಸಿಎಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವ ಜೋಶಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ಜನ ಸಹಿಸದೇ ಇರುವುದನ್ನು ತಾನೇನೇ ಮಾಡಿದರೂ ಅದನ್ನು ಕೇಂದ್ರ ಸರ್ಕಾರದ ಹಣೆಗೆ ಕಟ್ಟಲು ನೋಡುತ್ತದೆ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ಅವರು ಆರೋಪಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | PMSGMBY: ʼಪ್ರಧಾನ ಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆʼ: 2027ಕ್ಕೆ 1 ಕೋಟಿ ಮನೆಗಳಿಗೆ ಸೌರ ಶಕ್ತಿ ವಿದ್ಯುತ್ ಪೂರೈಕೆ ಗುರಿ

ಅಗತ್ಯತೆಗಳ ಬೆಲೆ ಏರಿಕೆ ಕೈ ಬಿಡಲಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಹೇಳುವುದನ್ನು ಬಿಟ್ಟು ‌ಜನಾಭಿಪ್ರಾಯಕ್ಕೆ ಗೌರವ ನೀಡಲಿ. ಇನ್ನಾದರೂ ಜನರ ಅಗತ್ಯತೆಗಳ ಬೆಲೆ ಏರಿಕೆ ನೀತಿಯನ್ನು ಕೈಬಿಡಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರು ಸಾಮಾಜಿಕ ಜಾಲತಾಣ ʼಎಕ್ಸ್‌ʼ ಖಾತೆಯಲ್ಲಿ ಆಗ್ರಹಿಸಿದ್ದಾರೆ.