ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನಕಲಿ ಔಷಧ ಜಾಲದ ಕಿಂಗ್‌ಪಿನ್ ಪ್ರಶಾಂತ್ ರಂಜನ್​ ಬಾಬು ಬಂಧನ

ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾಗಿದ್ದ ನಕಲಿ ಔಷಧ ಜಾಲ ಪ್ರಕರಣದ ಕಿಂಗ್‌ಪಿನ್‌ ಎನಿಸಿಕೊಂಡಿದ್ದ ಪ್ರಶಾಂತ್ ರಂಜನ್ ಬಾಬುನನ್ನು ಅಜರ್‌ಬೈಜಾನ್‌ನಿಂದ ವಾಪಸಾದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ಔಷಧಿ ಪ್ರಕರಣದಲ್ಲಿ ಆರೋಪಿ ವೀರೇಶ್ ಜೈನ್ ನೀಡಿರುವ ಹೇಳಿಕೆಯ ಆಧಾರದ ಮೇಲೆ ಪ್ರಶಾಂತ್‌ನನ್ನ ಬಂಧಿಸಲಾಗಿದೆ.

ಸಂಗ್ರಹ ಚಿತ್ರ

ರಾಮನಗರ: ದೊಡ್ಡೇರಿ ಫಾರ್ಮ್‌ಹೌಸ್‌ನಲ್ಲಿ ಪತ್ತೆಯಾಗಿದ್ದ ನಕಲಿ ಔಷಧ ಜಾಲ ಪ್ರಕರಣದ ಕಿಂಗ್‌ಪಿನ್‌ ಎನಿಸಿಕೊಂಡಿದ್ದ ಪ್ರಶಾಂತ್ ರಂಜನ್ (fake medicine racket) ಬಾಬುನನ್ನು ಅಜರ್‌ಬೈಜಾನ್‌ನಿಂದ ವಾಪಸಾದ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಬೆಳಿಗ್ಗೆ ಅಧಿಕಾರಿಗಳು ಬಂಧಿಸಿದ್ದಾರೆ. ಮುಂಜಾನೆ ಅಜರ್‌ಬೈಜಾನ್‌ನಿಂದ ಬಂದಿದ್ದ ಪ್ರಶಾಂತ್​ನನ್ನು ಲುಕ್‌ಔಟ್ ನೋಟಿಸ್ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಅರೈವಲ್ ಗೇಟ್‌ನಲ್ಲಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು.

ನಕಲಿ ಔಷಧ ಪ್ರಕರಣದಲ್ಲಿ ಆರೋಪಿ ವೀರೇಶ್ ಜೈನ್ ನೀಡಿರುವ ಹೇಳಿಕೆಯ ಆಧಾರದ ಮೇಲೆ ಪ್ರಶಾಂತ್‌ನನ್ನ ಬಂಧಿಸಿ, ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಈ ಹಿಂದೆ ತನಿಖೆ ವೇಳೆ ಪ್ರಶಾಂತ್ ಅಜರ್‌ಬೈಜಾನ್‌ನಲ್ಲಿರುವುದು ಪತ್ತೆಯಾಗಿತ್ತು. ಸೆಪ್ಟೆಂಬರ್ 9ರಂದು ವೀಸಾ ಅವಧಿ ಮುಗಿದ ಹಿನ್ನೆಲೆಯಲ್ಲಿ ಅಲ್ಲಿನ ಕಸ್ಟಮ್ಸ್ ಅಧಿಕಾರಿಗಳ ವಶದಲ್ಲಿದ್ದ. ಈ ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ವೀರೇಶ್ ಜೈನ್, ನಕಲಿ ಔಷಧಗಳ ಉತ್ಪಾದನೆ ಮತ್ತು ಪೂರೈಕೆ ವ್ಯವಸ್ಥೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿತ್ತು. ವೀರೇಶ್ ಬೆಂಗಳೂರಿನ ಆಸ್ಪತ್ರೆಗಳು ಮತ್ತು ಮೆಡಿಕಲ್‌ಗಳಿಗೆ ನಕಲಿ ಔಷಧಗಳನ್ನು ಪೂರೈಸುತ್ತಿದ್ದ ಎಂದು ತಿಳಿದು ಬಂದಿದೆ.

ರಾಮನಗರ ಜಿಲ್ಲೆಯ ಬಿಡದಿ ಸಮೀಪದ ದೊಡ್ಡೇರಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ನಡೆಯುತ್ತಿದ್ದ ಅಂತರರಾಜ್ಯ ಮಟ್ಟದ ಬೃಹತ್ ನಕಲಿ ಔಷಧ ತಯಾರಿಕೆ ಹಾಗೂ ಮರುಪ್ಯಾಕಿಂಗ್ ಜಾಲವನ್ನು ಕರ್ನಾಟಕ ರಾಜ್ಯ ಔಷಧ ನಿಯಂತ್ರಣ ಇಲಾಖೆ (FDA) ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಯಶಸ್ವಿಯಾಗಿ ಬಯಲಿಗೆಳೆದಿವೆ.ದಾಳಿಯ ವೇಳೆ ಫಾರ್ಮ್‌ಹೌಸ್‌ನಲ್ಲಿದ್ದ ಸುಮಾರು ₹5 ಕೋಟಿಗೂ ಅಧಿಕ ಮೌಲ್ಯದ ಜೀವ ರಕ್ಷಕ ನಕಲಿ ಔಷಧಗಳು, ಇಂಜೆಕ್ಷನ್‌ಗಳು ಹಾಗೂ ನಕಲಿ ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ವಿಶೇಷ ತನಿಖಾ ತಂಡ (SIT) ತನಿಖೆಯನ್ನು ತೀವ್ರಗೊಳಿಸಿದೆ. ಬೆಂಗಳೂರಿನ 'ಕೃಪಾ ಹೆಲ್ತ್‌ಕೇರ್' (Krupa Healthcare) ಮಾಲೀಕ ವೀರೇಶ್ ಕುಮಾರ್ ಜೈನ್ ಸೇರಿದಂತೆ ಹಲವು ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಈ ದಂಧೆಯ ಬೇರುಗಳನ್ನು ಹುಡುಕಲು ಎಸ್‌ಐಟಿ ತಂಡವು ಕರ್ನಾಟಕ ಸೇರಿದಂತೆ ಹರಿಯಾಣ, ಹಿಮಾಚಲ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಮತ್ತು ತೆಲಂಗಾಣ ಸೇರಿದಂತೆ 6 ರಾಜ್ಯಗಳ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ಜಾಲದ ಜಾಲಾಡುತ್ತಿದೆ.

Vishakha Bhat Heggar

View all posts by this author