Draupadi Murmu: ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ನಿಮ್ಹಾನ್ಸ್ ಸುತ್ತಮುತ್ತ ಏರ್‌ಕ್ರಾಫ್ಟ್ ಹಾರಾಟ ನಿರ್ಬಂಧ
Draupadi Murmu: ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ, ನಿಮ್ಹಾನ್ಸ್ ಸುತ್ತಮುತ್ತ ಏರ್‌ಕ್ರಾಫ್ಟ್ ಹಾರಾಟ ನಿರ್ಬಂಧ
ಹರೀಶ್ ಕೇರ
January 3, 2025
ಬೆಂಗಳೂರು: ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿಗೆ (Bengaluru news) ಆಗಮಿಸಲಿದ್ದಾರೆ. ನಿಮ್ಹಾನ್ಸ್ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ, ಮಧ್ಯಾಹ್ನ 3 ಗಂಟೆಗೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಬೆಳಗಾವಿಯಿಂದ ದೆಹಲಿಗೆ ವಾಪಸ್ಸಾಗಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ.ನಂತರ ರಾಷ್ಟ್ರಪತಿ ದ್ರೌಪದಿ ಮುರ್ಮು, ಬೆಳಗಾವಿಗೆ ಭೇಟಿ ನೀಡಲಿದ್ದು, ಅಲ್ಲಿ ಕೆ.ಎಲ್.ಇ. ಸಂಸ್ಥೆಯ ಜಾಗತಿಕ ಗುಣಮಟ್ಟದ ಸಮಗ್ರ ಚಿಕಿತ್ಸೆಯನ್ನು ಒಳಗೊಂಡ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯೊಂದಿಗೆ ನಿರ್ಮಿಸಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕ ಸೇವೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ ಜೋಶಿ, ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಜಗದೀಶ ಶೆಟ್ಟರ್, ಮತ್ತಿತರರು ಭಾಗವಹಿಸಲಿದ್ದಾರೆ.
ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರಿನ ನಿಮ್ಹಾನ್ಸ್ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ನಿಮ್ಹಾನ್ಸ್ ಸುತ್ತಮುತ್ತಲು ನೋ ಪ್ಲೇಯಿಂಗ್ ಜೋನ್ ಎಂದು ಘೋಷಣೆ ಮಾಡಲಾಗಿದೆ. ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಏರ್ಕ್ರಾಫ್ಟ್ ಹಾರಾಟ ನಡೆಸದಂತೆ ನಿಷೇಧ ಮಾಡಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಗಂಟೆಯಿಂದ ಮಧ್ಯಾಹ್ನ 3 ರವರೆಗೆ ಹಾರಾಟ ನಿರ್ಬಂಧಿಸಲಾಗಿದೆ. ಈ ಕುರಿತು ಬೆಂಗಳೂರು ಪೊಲೀಸ್ ಕಮಿಷನರ್ ಬಗ್ಗೆ ದಯಾನಂದ ಆದೇಶ ಹೊರಡಿಸಿದ್ದಾರೆ.