ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

School Fees Hike: ಪೋಷಕರಿಗೆ ಮತ್ತೆ ಎದುರಾಯ್ತು ಶಾಕ್; ಖಾಸಗಿ ಶಾಲಾ ಶುಲ್ಕ ಶೇ. 15-20%ರಷ್ಟು ಏರಿಕೆ

ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಪೋಷಕರಿಗೆ ಈ ವರ್ಷದಿಂದ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಲಿದೆ. ರಾಜ್ಯದ ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಏಕಾಏಕಿ ಹೆಚ್ಚಳ ಮಾಡಲಾಗಿದೆ.

ಖಾಸಗಿ ಶಾಲಾ ಶುಲ್ಕ ಶೇ. 15-20%ರಷ್ಟು ಏರಿಕೆ

Profile Vishakha Bhat Apr 12, 2025 11:08 AM

ಬೆಂಗಳೂರು: ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಖಾಸಗಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವ ಪೋಷಕರಿಗೆ ಈ ವರ್ಷದಿಂದ ಆರ್ಥಿಕ ಹೊರೆ ಮತ್ತಷ್ಟು ಹೆಚ್ಚಲಿದೆ. ರಾಜ್ಯದ (School Fees Hike) ಹಲವು ಖಾಸಗಿ ಶಾಲೆಗಳಲ್ಲಿ ಶುಲ್ಕ ಏಕಾಏಕಿ ಹೆಚ್ಚಳ ಮಾಡಲಾಗಿದೆ. ಅನುದಾನ ರಹಿತ ಶಾಲೆಗಳಲ್ಲಿ ಶೇಕಡ 15 ರಿಂದ 20 ರಷ್ಟು ಪ್ರವೇಶ ಶುಲ್ಕ ಹೆಚ್ಚಳ ಮಾಡಲಾಗಿದ್ದು, ಪೋಷಕರಿಗೆ ಹೆಚ್ಚಿನ ಶುಲ್ಕದ ಹೊರೆ ಬಿದ್ದಿದೆ. ಪ್ರತಿವರ್ಷ ಶಾಲೆಗಳಲ್ಲಿ ನಿರ್ವಹಣಾ ವೆಚ್ಚ, ಸಿಬ್ಬಂದಿ ವೇತನ, ಡೀಸೆಲ್ ಬೆಲೆ ಏರಿಕೆ ಮೊದಲಾದ ಕಾರಣಗಳಿಂದ ಪ್ರವೇಶ ಶುಲ್ಕದಲ್ಲಿ 15 ರಿಂದ 20 ರಷ್ಟು ಹೆಚ್ಚಳ ಮಾಡುವುದಾಗಿ ಖಾಸಗಿ ಶಾಲೆಗಳು ಪ್ರಕಟಿಸಿವೆ.

ರಾಜ್ಯ ಸರ್ಕಾರ ಡೀಸೆಲ್ ಬೆಲೆ ಹೆಚ್ಚಿಸಿದೆ. ವಾಹನಗಳ ವಿಮಾ ಮೊತ್ತ ಹೆಚ್ಚಾಗಿದೆ. ಶಿಕ್ಷಣ ಸಂಸ್ಥೆಗಳಿಗೂ ಕಸದ ತೆರಿಗೆ ಹಾಕಲಾಗುತ್ತಿದ್ದು, ನೀರಿನ ದರ ಹೆಚ್ಚಳ ಮಾಡಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳಿಗೆ ವಾಣಿಜ್ಯ ಉದ್ಯಮಗಳಿಗೆ ಇರುವ ದರದಲ್ಲಿ ತೆರಿಗೆ ವಸೂಲಿ ಮಾಡುತ್ತಿದ್ದು, ಶಾಲೆಗಳ ನಿರ್ವಹಣೆ, ಸಿಬ್ಬಂದಿ, ಶಿಕ್ಷಕರು, ಚಾಲಕರ ವೇತನ ಹೆಚ್ಚಳ ಕಾರಣದಿಂದ ಶುಲ್ಕ ಹೆಚ್ಚಳ ಅನಿವಾರ್ಯ ಎಂದು ಖಾಸಗಿ ಶಾಲೆಗಳ ಸಂಘಟನೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ.

ಡಿಸೇಲ್ ಹೆಚ್ಚಳ ಹಿನ್ನಲೆ ಶಾಲಾ ವಾಹನದ ಶುಲ್ಕ ಹೆಚ್ಚಳಕ್ಕೆ ಖಾಸಗಿ ಶಾಲಾ ಬಸ್ ಸಂಘಟನೆ ಮುಂದಾಗಿದೆ. ರಾಜ್ಯ ಹಾಗೂ ಕೇಂದ್ರದಿಂದ ಲೀಟರ್​ಗೆ ತಲಾ 2 ಏರಿಕೆ ಇದರಿಂದ ಶಾಲಾ ವಾಹನದ ಶುಲ್ಕ ಹೆಚ್ಚಿಸಲು ಖಾಸಗಿ ಶಾಲಾ ವಾಹನ ಸಂಘ ಮುಂದಾಗಿದೆ. ಇದರಿಂದ ಪ್ರತೀ ಕುಟುಂಬಕ್ಕೆ ತಿಂಗಳಿಗೆ 500 ರಿಂದ 600 ರೂ ಹೆಚ್ಚುವರಿ ಹೊರೆಯಾಗುವ ಆತಂಕ ಎದುರಾಗಿದೆ. ಸದ್ಯ ತಿಂಗಳಿಗೆ 2000 ದಿಂದ 2100 ರೂ ಇರುವ ಶುಲ್ಕ 2500 ರಿಂದ 3000 ರೂ ಆಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ:Vidhana Soudha: ಇನ್ನು ಮುಂದೆ ವಿಧಾನಸೌಧ ಪ್ರವಾಸಿ ತಾಣ! ವೀಕ್ಷಣೆಗೆ ಶುಲ್ಕ, ಗೈಡೆಡ್‌ ಟೂರ್‌ ಸೌಲಭ್ಯ

ಶಾಲಾ ವಾಹನದ ಶುಲ್ಕ ಹೆಚ್ಚಳಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದು, ಶಾಲಾ ಶುಲ್ಕ ಆಯ್ತು, ಬುಕ್ಸ್ ದರ ಏರಿಕೆ ಆಯ್ತು, ಈಗ ಶಾಲಾ ವಾಹನದ ಶುಲ್ಕ ಏರಿಕೆ ಯಾಕೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಪೋಷಕರಿಗೆ ಇದು ಆರ್ಥಿಕ ಹೊರೆಯಾಗುತ್ತದೆ. ಈಗಾಗಲೇ ಸಾಕಷ್ಟು ಸಮಸ್ಯೆ ಇದೆ. ಈ ನಡುವೆ ಶಾಲಾ ವಾಹನಗಳ ಶುಲ್ಕ ಏರಿಕೆ ಸರಿಯಾದ ಕ್ರಮವಲ್ಲ ಎಂದು ಹೇಳಿದ್ದಾರೆ.