ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Exam scam: ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ್ರೆ ಜೈಲು ಶಿಕ್ಷೆ, ಭಾರಿ ದಂಡ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ

ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವುದು ಕಂಡುಬಂದರೆ ಅಂತಹ ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ಹೇಳಿದ್ದಾರೆ.

ಬೆಂಗಳೂರು: ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2ರಂದು ನಡೆಯಲಿರುವ ಲಿಖಿತ ಪರೀಕ್ಷೆಯಲ್ಲಿ ಯಾವುದೇ ಅಕ್ರಮ ಅಥವಾ ಲೋಪಗಳಿಗೆ ಆಸ್ಪದ ನೀಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾರಾದರೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದರೆ ಕಠಿಣ ಕ್ರಮ ಜರುಗಿಸಲಾಗುವುದು, ಅಕ್ರಮ (Exam scam) ಎಸಗಿದವರ ವಿರುದ್ಧ ಕರ್ನಾಟಕ ಸಾರ್ವಜನಿಕ ವಿಧೇಯಕದಡಿ ಜೈಲು ಶಿಕ್ಷ ಮತ್ತು ಭಾರಿ ದಂಡ ವಿಧಿಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಪರೀಕ್ಷೆಯನ್ನು ಸಂಪೂರ್ಣವಾಗಿ ಪಾರದರ್ಶಕವಾಗಿ ನಡೆಸಲು ಪ್ರಶ್ನೆಪತ್ರಿಕೆಯು ಪರೀಕ್ಷಾ ಕೇಂದ್ರವನ್ನು ತಲುಪಿದ ನಂತರ ಪ್ರಾಂಶುಪಾಲರ ನೇತೃತ್ವದಲ್ಲಿ ಹಾಗೂ ಐವರು ಅಭ್ಯರ್ಥಿಗಳ ಸಮ್ಮುಖದಲ್ಲಿಯೇ ಸೀಲ್ ತೆರೆಯುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಗೃಹಸಚಿವರು, ನಕಲು ಎಸಗಲು ಅವಕಾಶ ನೀಡದಂತೆ ವಿವಿಧ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವುದನ್ನು ನಿರ್ಬಂಧಿಸಲಾಗಿದೆ. ಆದರೆ ಧಾರ್ಮಿಕ ನಂಬಿಕೆಯನ್ನು ಗೌರವಿಸಲು ಶಿವದಾರ, ಜನಿವಾರ, ಮಾಂಗಲ್ಯಸರ ಮುಂತಾದವುಗಳನ್ನು ಧರಿಸಲು ಅನುಮತಿ ನೀಡಲಾಗಿದೆ.

ಈ ಹಿಂದೆ ವಿವಿಧ ನೇಮಕಾತಿಗಳಲ್ಲಿ ಪರೀಕ್ಷೆ ಮುಗಿದ ಬಳಿಕ ಉತ್ತರ ಪತ್ರಿಕೆಯನ್ನು ತಿದ್ದಿದ ಆರೋಪಗಳು ಕೇಳಿಬಂದಿದ್ದರಿಂದ, ಈ ಬಾರಿ ಒಎಂಆರ್ ಶೀಟ್‌ನಲ್ಲಿ ಐದನೇ ಆಯ್ಕೆಯನ್ನು ನೀಡಲಾಗಿದೆ. ಪ್ರಶ್ನೆಗೆ ಉತ್ತರ ಗೊತ್ತಿಲ್ಲದವರು ಒಎಂಆರ್ ಶೀಟ್‌ನಲ್ಲಿ ಖಾಲಿ ಬಿಡುವಂತಿಲ್ಲ. 5ನೇ ಕಾಲಂ ಅನ್ನು ಕಡ್ಡಾಯವಾಗಿ ಶೇಡ್ ಮಾಡಬೇಕು. ಯಾವುದೇ ಉತ್ತರ ಗುರುತಿಸದೆ ಇದ್ದಲ್ಲಿ ಅರ್ಧ ಅಂಕವನ್ನು ಕಡಿತಗೊಳಿಸಲಾಗುತ್ತದೆ. ಪರೀಕ್ಷೆ ಮುಗಿದ 30 ನಿಮಿಷದೊಳಗೆ ಒಎಂಆರ್ ಶೀಟ್ ಅನ್ನು ಕೆಇಎ ವೆಬ್‌ಸೈಟ್‌ಗೆ ಅಪ್ಲೋಡ್ ಮಾಡುವಂತೆ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಪರೀಕ್ಷಾ ಕೊಠಡಿಯಲ್ಲಿಯೂ ಹೈ ಡೆಫಿನಿಷನ್ ಕ್ಯಾಮೆರಾ, ಲೈವ್ ವೆಬ್‌ಕಾಸ್ಟಿಂಗ್, ನೆಟ್‌ವರ್ಕ್ ಜಾಮರ್, ಬೆರಳಚ್ಚು ಬಯೋಮೆಟ್ರಿಕ್ ಮತ್ತು ಮುಖಗುರುತು ಪತ್ತೆ ವ್ಯವಸ್ಥೆಯನ್ನು ಅಳವಡಿಸಲಾಗುವುದು. ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ 1 ಗಂಟೆ ಮುಂಚಿತವಾಗಿ ಆಗಮಿಸಿ, ಕಡ್ಡಾಯ ತಪಾಸಣೆಗೆ ಒಳಪಡಬೇಕು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಎಸಗುವುದು ಕಂಡುಬಂದರೆ ಅಂತಹ ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಲಾಗುತ್ತದೆ.

KAS Recruitment 2026: 319 ಕೆಎಎಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ; ನೇಮಕಾತಿಯ ಸಂಪೂರ್ಣ ವಿವರ ಇಲ್ಲಿದೆ

ಈ ನೇಮಕಾತಿಯು ಲಕ್ಷಾಂತರ ಅಭ್ಯರ್ಥಿಗಳ ಕನಸು. ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ, ನ್ಯಾಯಸಮ್ಮತವಾಗಿ ಮತ್ತು ಪಾರದರ್ಶಕವಾಗಿ ಪ್ರಕ್ರಿಯೆಯನ್ನು ನಡೆಸುವುದು ನಮ್ಮ ಸರ್ಕಾರದ ಧ್ಯೇಯವಾಗಿದೆ ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.