ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: ಬಸವಣ್ಣನವರಂತೆ ಸಮಾನತೆಗಾಗಿ ಹೋರಾಡಿದ ಪ್ರವಾದಿ ಮಹಮ್ಮದರು: ಸಿಎಂ ಸಿದ್ದರಾಮಯ್ಯ

Prophet Muhammad: ಪ್ರವಾದಿಯವರ ಬೋಧನೆಗಳು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದವು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

ಬೆಂಗಳೂರು: ಇಸ್ಲಾಂ ಎಂದರೆ ಶಾಂತಿ, ಪ್ರವಾದಿ ಮೊಹಮದ್‌ (prophet muhammad) ಎಂದರೆ ಶಾಂತಿಯ ದೂತ. ಪ್ರವಾದಿ ಅವರು, ಬಸವಣ್ಣ (Basavanna) ಅವರಂತೆ ಶಾಂತಿ, ಸಮಾನತೆ, ಬಡತನ ಹೋಗಬೇಕು ಅಂತಾ ಹೇಳಿ ಹೋರಾಟ ಮಾಡಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು. ಅರಮನೆ ಮೈದಾನದಲ್ಲಿ ಮಿಲಾದ್ ಸಮಿತಿ ಆಯೋಜಿಸಿದ್ದ ʼಅಂತಾರಾಷ್ಟ್ರೀಯ ಮಿಲಾದುನ್ನಬೀ ಸಮಾವೇಶʼದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪರಧರ್ಮ ಸಹಿಷ್ಣುತೆ ಸಂವಿಧಾನದ ಮೂಲ‌ ಆಶಯವಾಗಿದ್ದು ಸಂವಿಧಾನದ ಪಾಲನೆಯೇ ನಮ್ಮೆಲ್ಲರ ಗುರಿಯಾಗಲಿ. ಪ್ರವಾದಿಯವರ ಬೋಧನೆಗಳು ಮಾನವ ಇತಿಹಾಸದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದವು. ಅವರು ಸಮಸ್ತ ಮಾನವಕೋಟಿಗೆ ನ್ಯಾಯ, ಸಮಾನತೆ ಮತ್ತು ಧಾರ್ಮಿಕ ಸೌಹಾರ್ದದ ಮಾರ್ಗಗಳನ್ನು ತೋರಿಸಿದರು. ಬಸವಣ್ಣನವರ ನೇತೃತ್ವದ ಶರಣ ಚಳವಳಿಯೂ ಕೂಡ ಮಾನವ ಕುಲ ಒಂದೇ ಎನ್ನುವ ಮೌಲ್ಯವನ್ನೇ ಸಾರಿತ್ತು ಎಂದು ಹೇಳಿದರು.

ಪ್ರವಾದಿಗಳು ಶಾಂತಿಯ ದೂತರು. ಇಡೀ ಮಾನವ ಕುಲ ಶಾಂತಿಗಾಗಿ, ಪರಸ್ಪರತೆ, ಸಹೋದರತ್ವಕ್ಕಾಗಿ ಕೆಲಸ ಮಾಡಬೇಕು ಎನ್ನುವುದು ಪ್ರವಾದಿಗಳ ಬೋಧನೆಯಾಗಿದೆ. ನಮ್ಮ ಸಂವಿಧಾನದ ಮೂಲ ಆಶಯ ಕೂಡ ಭ್ರಾತೃತ್ವ ಮತ್ತು ಪರಧರ್ಮ ಸಹಿಷ್ಣುತೆಯೇ ಆಗಿದೆ. ಆದ್ದರಿಂದ ಸಂವಿಧಾನವನ್ನು ಆಚರಿಸುವುದು, ಪಾಲಿಸುವುದು ನಮ್ಮೆಲ್ಲರ ಗುರಿಯಾಗಲಿ ಎಂದು ತಿಳಿಸಿದರು.

ಇದನ್ನೂ ಓದಿ: CM Siddaramaiah: ಸಿಎಂ ಕಾರಿನ ಮೇಲೆ 2,000 ರೂ. ದಂಡ, ಫೈನ್ ಕಟ್ಟಿ ಮಾದರಿಯಾದ ಸಿದ್ದರಾಮಯ್ಯ

ಹರೀಶ್‌ ಕೇರ

View all posts by this author