ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

DK Shivakumar: ಟನಲ್ ರಸ್ತೆ ಯೋಜನೆ ಮುಂದುವರಿಸಿ; ಡಿಸಿಎಂಗೆ ಸಾರ್ವಜನಿಕರ ಬೆಂಬಲ

Tunnel Road: ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್‌ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು. ಜತೆಗೆ ಟನಲ್ ರಸ್ತೆ ಯೋಜನೆಗೆ ಬೆಂಬಲ ವ್ಯಕ್ತಪಡಿಸಿದರು.

ಬೆಂಗಳೂರು, ಅ. 26: "ಟನಲ್ ರಸ್ತೆ (Tunnel Road) ಯೋಜನೆ ಅತ್ಯುತ್ತಮ ಆಲೋಚನೆ, ನಾವು ನಿಮ್ಮ ಬೆಂಬಲಿಕ್ಕಿದ್ದೇವೆ, ನೀವು ಮುಂದುವರಿಯಿರಿ", "ಡಿ.ಕೆ. ಶಿವಕುಮಾರ್ (DK Shivakumar) ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ"-ಬೆಂಗಳೂರು ಸಮಗ್ರ ಅಭಿವೃದ್ಧಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿ, ದೂರದೃಷ್ಟಿ ಯೋಜನೆಗಳಿಗೆ ಸಾರ್ವಜನಿಕರು ಮುಕ್ತ ಕಂಠದಿಂದ ಹೊಗಳಿದ ಪರಿ ಇದು.

ಬೆಂಗಳೂರು ನಡಿಗೆ ಅಂಗವಾಗಿ ಕಬ್ಬನ್ ಪಾರ್ಕ್‌ನಲ್ಲಿ ಭಾನುವಾರ ನಡೆದ ನಾಗರಿಕರ ಜತೆ ಸಂವಾದದ ವೇಳೆ ಹಲವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯನ್ನು ಕೊಂಡಾಡಿದರು.

ಈ ಸುದ್ದಿಯನ್ನೂ ಓದಿ:Bengaluru Tunnel Road: ಎಸ್ಟೀಮ್ ಮಾಲ್‌ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿ.ಮೀ. ಉದ್ದದ ನೂತನ ಸುರಂಗ ರಸ್ತೆ: ಡಿಕೆಶಿ

ನಾಗರಿಕರೊಬ್ಬರು, "ಸಾರ್, ನೀವು ಕೈಗೆತ್ತಿಕೊಂಡಿರುವ ಟನಲ್ ರಸ್ತೆ ಯೋಜನೆ ಚೆನ್ನಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹೊಸ ರಸ್ತೆಗಳು ಬೇಕು. ಟನಲ್ ಯೋಜನೆ ಸಾಕಾರಗೊಳಿಸಿ. ಇದೊಂದು ಅತ್ಯುತ್ತಮ ಯೋಜನೆ" ಎಂದು ಬೆಂಬಲ ವ್ಯಕ್ತಪಡಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ಡಿಸಿಎಂ ಶಿವಕುಮಾರ್, "ನಾನು ಸಹ ಸಾಕಷ್ಟು ‌ಆಲೋಚನೆ ಮಾಡಿದೆ. ರಸ್ತೆ ಅಗಲೀಕರಣಕ್ಕಾಗಿ ಮನೆಗಳನ್ನು ಒಡೆಯಲು ಆಗುವುದಿಲ್ಲ. ಇದಕ್ಕೆ ದುಪ್ಪಟ್ಟು ಪರಿಹಾರ ನೀಡಬೇಕು. ಅದರ‌ ಬದಲು ಸುರಂಗ ಮಾರ್ಗ ರಸ್ತೆಯೇ ಸರಿ ಎಂದು ಯೋಜನೆಗೆ ಮುಂದಾಗಿದ್ದೇನೆ" ಎಂದರು.

"ನಿಮ್ಮ ಆಲೋಚನೆ ಚೆನ್ನಾಗಿದೆ. ಕಳೆದ 30 ವರ್ಷಗಳಿಂದ ನಗರದಲ್ಲಿ ಹೊಸ ರಸ್ತೆಗಳು ಆಗಿಲ್ಲ. ಮುಂಬೈಯಲ್ಲಿ ಟನಲ್‌ ರಸ್ತೆ ಮಾಡುತ್ತಿದ್ದಾರೆ. ಅದಕ್ಕೆ ಯಾರೂ ಸಹ ವಿರೋಧ ಮಾಡುವುದಿಲ್ಲ. ‌ಆದರೆ ಇಲ್ಲಿ ಮಾಡುತ್ತಿದ್ದಾರೆ" ಎಂದು ಮತ್ತೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದರು.

ಹಿರಿಯ ನಾಗರಿಕರೊಬ್ಬರು, "ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿ ಸಚಿವರಾಗಿರುವುದು ಪುಣ್ಯ ಎಂದು ಹೇಳಬಹುದು. ಏಕೆಂದರೆ ಈ ನಗರದ ಬಗ್ಗೆ ಇವರು ಅಪಾರ ಕಾಳಜಿ ಹೊಂದಿದ್ದಾರೆ. ವಿದೇಶಿಯರು ಬೆಂಗಳೂರಿಗೆ ಬಂದರೆ ಇಲ್ಲಿನ ಸ್ವಚ್ಛತೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಕೆಲಸ ಮಾಡುತ್ತಿದ್ದಾರೆ. ಶಿವಕುಮಾರ್ ಗ್ರಾಮೀಣ ಭಾಗದಿಂದ ಬಂದವರಾದರೂ ಬೆಂಗಳೂರಿನ ಬಗ್ಗೆ ಪ್ರೀತಿ ಹೊಂದಿದ್ದಾರೆ" ಎಂದು ಹೇಳಿದರು.

ರಸ್ತೆ ವಿನ್ಯಾಸ ಸ್ಪರ್ಧೆ ಏರ್ಪಡಿಸಲು ಸಲಹೆ

ಬೆಂಗಳೂರಿನ ರಸ್ತೆಗಳು ಹೇಗಿರಬೇಕು ಎಂದು 'ವಿನ್ಯಾಸ ಸ್ಪರ್ಧೆ' ಏರ್ಪಡಿಸಿದರೆ ಜನರಿಗೆ ಬೇಕಾದಂತಹ ರಸ್ತೆ ಜನರಿಂದಲೇ ದೊರೆಯಲಿದೆ.‌ ಈ ಕಲ್ಪನೆಯಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ನೆಹೇಶ್ ಎಂಬವರು ತಮ್ಮ ಆಲೋಚನೆ ಹಂಚಿಕೊಂಡರು.‌ ಇದನ್ನು ಶ್ಲಾಘಿಸಿದ ಡಿಸಿಎಂ "ಆಲೋಚನೆ ತುಂಬಾ ಚೆನ್ನಾಗಿದೆ. ಇವರ ದೂರವಾಣಿ ಸಂಖ್ಯೆಯನ್ನು ‌ಪಡೆಯಿರಿ.‌ ಇವರ ಬಳಿ ಚರ್ಚೆ ಮಾಡೋಣ" ಎಂದು ಅಧಿಕಾರಿಗಳಿಗೆ ಸೂಚಿಸಿದರು.

Ramesh Ballamoole

View all posts by this author