Pulse Polio Campaign 2025: ಡಿಸೆಂಬರ್ 21ರಿಂದ 24ರವರೆಗೆ ರಾಜ್ಯದಲ್ಲಿ ಪಲ್ಸ್ ಪೋಲಿಯೋ ಅಭಿಯಾನ
ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಬೆಂಗಳೂರಿನಲ್ಲಿ ಡಿಸೆಂಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ಬೂತ್‌ಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಡಿ. 22 ರಿಂದ 24ರವರೆಗೆ ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ನಡೆಯುತ್ತದೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಡಿ.11: ಆರೋಗ್ಯ ಇಲಾಖೆಯಿಂದ ಬೆಂಗಳೂರು ಸೇರಿ ರಾಜ್ಯಾದ್ಯಂತ ಡಿಸೆಂಬರ್ 21ರಿಂದ 24ರವರೆಗೆ ʼಪಲ್ಸ್ ಪೋಲಿಯೋ ಅಭಿಯಾನʼ (Pulse Polio Campaign 2025) ಹಮ್ಮಿಕೊಂಡಿದ್ದು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಪ್ರತಿಯೊಂದು ಮಗುವಿಗೂ 2 ಜೀವ ರಕ್ಷಕ ಪೋಲಿಯೋ ಹನಿಗಳನ್ನು ಹಾಕಿಸಲು ರಾಜ್ಯ ಸರ್ಕಾರ ಮನವಿ ಮಾಡಿದೆ.
ಬೆಂಗಳೂರಿನಲ್ಲಿ ನಾಲ್ಕು ದಿನಗಳ ಕಾಲ ನಡೆಯುವ ಅಭಿಯಾನದಲ್ಲಿ ಡಿಸೆಂಬರ್ 21ರಂದು ಬೆಳಗ್ಗೆ 8 ರಿಂದ ಸಂಜೆ 5 ಗಂಟೆ ಬೂತ್‌ಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಡಿ. 22 ರಿಂದ 24ರವರೆಗೆ ಮನೆಮನೆಗೆ ಭೇಟಿ ನೀಡಿ ಲಸಿಕೆ ನೀಡುವ ಕಾರ್ಯ ನಡೆಯುತ್ತದೆ. ಎಲ್ಲಾ 4 ದಿನಗಳಲ್ಲಿ ಸಂಚಾರ ಕೇಂದ್ರಗಳು ಹಾಗೂ ಹೆಚ್ಚಿನ ಅಪಾಯ ಪ್ರದೇಶಗಳಲ್ಲಿ ವಿಶೇಷ ಅಭಿಯಾನ ಕೈಗೊಳ್ಳಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಮಾಹಿತಿ ನೀಡಿದೆ.
ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಆರೋಗ್ಯ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಈ ಅಭಿಯಾನದಲ್ಲಿ ಆರೋಗ್ಯಾಧಿಕಾರಿಗಳ ನೇತೃತ್ವದ ತಂಡದ ಜತೆಗೆ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳು, ಖಾಸಗಿ ಆಸ್ಪತ್ರೆಗಳು, ರೋಟರಿ–ಲಯನ್ಸ್ ಕ್ಲಬ್‌ಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಅನೇಕ ಸಂಘ–ಸಂಸ್ಥೆಗಳು ಸಹಭಾಗಿಯಾಗಲಿವೆ.
ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ
— Greater Bengaluru Authority (@GBA_office) December 11, 2025
ಡಿಸೆಂಬರ್ 21 ರಿಂದ 24 ರವರೆಗೆ
"ಪ್ರತಿ ಹನಿ ಅವಶ್ಯ- ಪ್ರತಿ ಮಗು ಅಮೂಲ್ಯ"#GreaterBengaluruAuthority #eastcitycorporation #DKShivakumar #gbachiefcommissioner pic.twitter.com/u7B0PKqjme
ಪೋಲಿಯೋ ಲಸಿಕೆ ಏಕೆ ಅಗತ್ಯ?
ಪೋಲಿಯೋ, ಪೋಲಿಯೊಮೈಲಿಟಿಸ್‌ಗೆ ಸಂಕ್ಷಿಪ್ತ ರೂಪವಾಗಿದ್ದು, ಇದು ಹೆಚ್ಚು ಸಾಂಕ್ರಾಮಿಕ ಮತ್ತು ಮಾರಕ ವೈರಲ್ ಕಾಯಿಲೆಯಾಗಿದೆ. ಇದು ಪ್ರಾಥಮಿಕವಾಗಿ ಐದು ವರ್ಷದೊಳಗಿನ ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ, ಪಾರ್ಶ್ವವಾಯು ಮತ್ತು ಕೆಲವೊಮ್ಮೆ ಸಾವಿಗೆ ಕಾರಣವಾಗುತ್ತದೆ. ವೈರಸ್‌ನಿಂದ ಉಂಟಾಗುವ ಈ ಕಾಯಿಲೆ, ಮಲ-ಮೌಖಿಕ ಮಾರ್ಗದ ಮೂಲಕ ಹರಡುತ್ತದೆ. ಲಸಿಕೆ ಹಾಕುವುದರಿಂದ ಮಕ್ಕಳನ್ನು ವ್ಯಾಪಕ ಶ್ರೇಣಿಯ ಸಾಂಕ್ರಾಮಿಕ ರೋಗಗಳಿಂದ ರಕ್ಷಿಸುತ್ತದೆ.
Dental Problem: ಚಳಿಗಾಲದಲ್ಲಿ ಹಲ್ಲಿನ ಸಮಸ್ಯೆ ನಿಭಾಯಿಸುವುದು ಹೇಗೆ?
ಪೋಲಿಯೋ ಲಸಿಕೆಯು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಪೋಲಿಯೋ ವೈರಸ್ ವಿರುದ್ಧ ಪ್ರತಿಕಾಯಗಳನ್ನು ಉತ್ಪಾದಿಸಲು ಉತ್ತೇಜಿಸುತ್ತದೆ, ಲಸಿಕೆ ಹಾಕಿದ ವ್ಯಕ್ತಿಯನ್ನು ರೋಗದಿಂದ ರಕ್ಷಿಸುತ್ತದೆ. ಹೀಗಾಗಿ ಪೋಲಿಯೋ ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದ್ದು, ಲಸಿಕೆ ಅಭಿಯಾನಗಳಿಂದ ಪ್ರಪಂಚದ ಅನೇಕ ದೇಶಗಳು ಪೋಲಿಯೋ ಮುಕ್ತವಾಗಿವೆ.
ನಮ್ಮ ದೇಶದಲ್ಲಿ 2011ರಲ್ಲಿ ಕೊನೆಯದಾಗಿ ಪೋಲಿಯೋ ಪ್ರಕರಣ ವರದಿಯಾಗಿತ್ತು. ತದನಂತರ 2014ರ ಮಾರ್ಚ್ 27 ರಂದು ಪೋಲಿಯೋ ಮುಕ್ತ ಭಾರತ ಎಂದು ವಿಶ್ವ ಆರೋಗ್ಯ ಸಂಸ್ಥೆ ಘೋಷಣೆ ಮಾಡಿದೆ.