R Ashok: ಕಾಂಗ್ರೆಸ್‌ ಸರ್ಕಾರದಿಂದ ರೌಡಿಗಳಿಗೆ ಕೈ ತುಂಬಾ ಉದ್ಯೋಗ: ಆರ್‌.ಅಶೋಕ್‌

ಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಸಾಲ ನೀಡುತ್ತಿತ್ತು. ಈಗ ಕಾಂಗ್ರೆಸ್‌ ಸರ್ಕಾರ ನಿಗಮಗಳ ಮೂಲಕ ಸಾಲ ನೀಡದೆ, ಜನರು ಅನಿವಾರ್ಯವಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

R Ashok
Profile Siddalinga Swamy Jan 27, 2025 5:49 PM

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ‌ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ (R Ashok) ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ʼʼಡಾ.ಬಿ.ಆರ್. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25ರಲ್ಲಿ ಕಾಂಗ್ರೆಸ್‌ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 45 ಕೋಟಿ ರೂ. ಒದಗಿಸಿದೆ. ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್‌ 60 ಕೋಟಿ ರೂ. ನೀಡಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 50 ಕೋಟಿ ರೂ. ನೀಡಿದೆ. ಜತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ. ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ನೀಡಲಾಗಿದೆ. ಅಂದರೆ ಎಲ್ಲ‌ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆʼʼ ಎಂದರು.

ʼʼಪ್ರತಿ ಬಜೆಟ್‌ನಲ್ಲೂ ಅನುದಾನ ಶೇ. 20ರಷ್ಟು ಹೆಚ್ಚಾಗಬೇಕು. 2022-23ರಲ್ಲಿ ಬಿಜೆಪಿ ಸರ್ಕಾರ ಕೃಷಿ ಇಲಾಖೆಗೆ 7,288 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ ಸರ್ಕಾರ 5,035 ಕೋಟಿ ರೂ. ನೀಡಿದೆ. ಅಂದರೆ 2,253 ಕೋಟಿ ರೂ. ಕೊರತೆಯಾಗಿದೆ. ಇದು ರೈತರ ಬದುಕಿನ ಮೇಲೆ ಪರಿಣಾಮ ಬೀರಿದೆ. ತೋಟಗಾರಿಕಾ ಇಲಾಖೆಗೆ ಬಿಜೆಪಿ 1,374 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 1,207 ಕೋಟಿ ರೂ. ಒದಗಿಸಿದೆ. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಸಹಕಾರಿ ಎಲ್ಲ ಸೇರಿ ಬಿಜೆಪಿ 15,383 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 14,768 ಕೋಟಿ ರೂ. ನೀಡಿದೆ. ಇದರಿಂದ 614 ಕೋಟಿ ರೂ. ಕೊರತೆಯಾಗಿದೆ. ಕಂದಾಯ ಇಲಾಖೆಗೆ ಬಿಜೆಪಿ 1534 ಕೋಟಿ ರೂ.ನೀಡಿದರೆ, ಕಾಂಗ್ರೆಸ್‌ನಿಂದ 940 ಕೋಟಿ ರೂ. ನೀಡಲಾಗಿದೆ. 594 ಕೋಟಿ ರೂ. ಕೊರತೆಯಾಗಿದೆ. ಲೋಕೋಪಯೋಗಿ ಇಲಾಖೆಗೆ ಬಿಜೆಪಿ 12,410 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ನಿಂದ 9,699 ಕೋಟಿ ರೂ. ನೀಡಲಾಗಿದೆ. 2,710 ಕೋಟಿ ರೂ. ಕೊರತೆಯಾಗಿದೆ. ನೀರಾವರಿಗೆ ಬಿಜೆಪಿ 19,610 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ 16,834 ಕೋಟಿ ರೂ. ನೀಡಿದೆ. ಇದರಿಂದ 2755 ಕೋಟಿ ರೂ. ಕೊರತೆಯಾಗಿದೆʼʼ ಎಂದು ತಿಳಿಸಿದರು.

ʼʼಮೈಕ್ರೋ ಫೈನಾನ್ಸ್‌ನ ಮೀಟರ್‌ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್‌ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಸಾಲ ನೀಡುತ್ತಿತ್ತು. ಈಗ ಕಾಂಗ್ರೆಸ್‌ ಸರ್ಕಾರ ನಿಗಮಗಳ ಮೂಲಕ ಸಾಲ ನೀಡದೆ, ಜನರು ಅನಿವಾರ್ಯವಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆʼʼ ಎಂದು ದೂರಿದರು.

ವಲಸೆ ಹೋಗಿದ್ದಾರೆ

ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದ ಅಶೋಕ್‌, ʼʼಮೈಕ್ರೋ ಫೈನಾನ್ಸ್‌ನಲ್ಲಿ 10 ಜನರ ಗುಂಪು ರಚಿಸಿ, ಪ್ರತಿಯೊಬ್ಬರಿಗೂ 50 ಸಾವಿರ ರೂ. ಸಾಲ ನೀಡುತ್ತಾರೆ. ಒಬ್ಬರಿಗೆ ಉಳಿದವರು ಶೂರಿಟಿ ಕೊಡಬೇಕಾಗುತ್ತದೆ. ಪ್ರತಿ ತಿಂಗಳು ಅಧಿಕ ಬಡ್ಡಿ ಕಟ್ಟಬೇಕಾಗುತ್ತದೆ. 50 ಸಾವಿರ ರೂ. ಸಾಲ ಪಡೆದರೆ 67 ಸಾವಿರ ರೂ. ವಾಪಸ್‌ ನೀಡಬೇಕು. ಎರಡು ತಿಂಗಳು ಕಟ್ಟಲಿಲ್ಲವೆಂದರೆ ರೌಡಿಗಳು ಮನೆಗೆ ಹೋಗಿ ಗಲಾಟೆ ಮಾಡುತ್ತಾರೆ. ಅನೇಕ ಹಳ್ಳಿಗಳಲ್ಲಿ ಜನರು ಮನೆ ಬಿಟ್ಟು ವಲಸೆ ಹೋಗಿದ್ದಾರೆʼʼ ಎಂದು ಆರೋಪಿಸಿದರು.

ʼʼಕೋಟೆ ಲೂಟಿಯಾದ ನಂತರ ಬಾಗಿಲು ಹಾಕಿದರು ಎಂಬಂತೆ, ಸಿಎಂ ಸಿದ್ದರಾಮಯ್ಯ ಈಗ ಹೊಸ ಕಾನೂನು ತರಲು ಮುಂದಾಗಿದ್ದಾರೆ. ನೋಟಿಸ್‌ ಕೊಡದೆ ಜನರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಇಂತಹ ಸಮಯದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಪೊಲೀಸರು ಕೂಡ ಇದಕ್ಕೆ ಸಹಕಾರ ನೀಡಿದ್ದಾರೆ. ಕಂಟ್ರೋಲ್‌ ರೂಮ್‌ ರೂಪಿಸಿದರೂ ಅದರಿಂದ ಜನರಿಗೆ ಪ್ರಯೋಜನವಾಗಿಲ್ಲʼʼ ಎಂದು ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ʼʼಸಿಎಂ ಸಿದ್ದರಾಮಯ್ಯ ಸಾಲ ಮನ್ನಾ ಬಗ್ಗೆ ಹೇಳಿದ್ದರಿಂದ ಡಿಸಿಸಿ ಬ್ಯಾಂಕ್‌ಗಳಿಗೆ ನಷ್ಟವಾಗಿದೆ. ಸಾಲ ಪಡೆದವರು ಕಾಂಗ್ರೆಸ್‌ ಸರ್ಕಾರವನ್ನು ನಂಬಿಕೊಂಡು ಕೂತಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳುತ್ತಾರೆಂದು ಪ್ರಧಾನಿ ಮೋದಿ ಹೇಳಿದ್ದು ಈಗ ನಿಜವಾಗಿದೆ. ಗೃಹಲಕ್ಷ್ಮಿಯ ಹಣ ಮಹಿಳೆಯರಿಗೆ ನಿಜವಾಗಿಯೂ ಸಿಕ್ಕಿದ್ದರೆ ಏಕೆ ಮೈಕ್ರೋ ಫೈನಾನ್ಸ್‌ಗೆ ಹೋಗುತ್ತಾರೆʼʼ ಎಂದು ಪ್ರಶ್ನೆ ಮಾಡಿದರು.

ಸಿದ್ದರಾಮಯ್ಯ ಬಜೆಟ್‌ ಮಂಡಿಸಲು ಕೇಂದ್ರ ಸರ್ಕಾರ ಹಣ ಕೊಡಬೇಕಿದೆ

ʼʼಸಿಎಂ ಸಿದ್ದರಾಮಯ್ಯ ಬಜೆಟ್‌ ಮಂಡಿಸಲು ಕೇಂದ್ರ ಸರ್ಕಾರ ಹಣ ಕೊಡಬೇಕಿದೆ. ಇದರ ಜತೆಗೆ ಬೆಂಗಳೂರಿಗೆ ಅನುದಾನ ನೀಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಕೇಳಿದ್ದಾರೆ. ಈಗ ಮೈಕ್ರೋ ಫೈನಾನ್ಸ್‌ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕಂತೆ. ಎಲ್ಲವನ್ನೂ ಪ್ರಧಾನಿ ನರೇಂದ್ರ ಮೋದಿ ಮಾಡುವುದಾದರೆ ಇಲ್ಲಿ ಕಾಂಗ್ರೆಸ್‌ ಏಕೆ ಅಧಿಕಾರದಲ್ಲಿದೆ?ʼʼ ಎಂದು ಅಶೋಕ್‌ ಪ್ರಶ್ನಿಸಿದರು.

ಈ ಸುದ್ದಿಯನ್ನೂ ಓದಿ | Bomb Threat: ಮುಂಬೈ, ಬೆಂಗಳೂರು ಬಳಿಕ ಇದೀಗ ಉಡುಪಿಯ ಶಾಲೆಗೆ ಬಾಂಬ್‌ ಬೆದರಿಕೆ

ಏಕರೂಪ ನಾಗರಿಕ ಸಂಹಿತೆ

ʼʼಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಎಲ್ಲರೂ ಸಮಾನ ಎಂಬ ಭಾವನೆ ಬೆಳೆಯುತ್ತದೆ. ಬೇರೆ ದೇಶಗಳಲ್ಲಿ ಎಲ್ಲ ನಾಗರಿಕರು ಒಂದೇ ಎಂದು ಪರಿಗಣಿಸಲಾಗುತ್ತದೆ. ಅದೇ ರೀತಿ ಭಾರತದಲ್ಲೂ ಹಿಂದೂಗಳಿಗೆ ಇರುವ ಕಾನೂನು ಎಲ್ಲ ಧರ್ಮೀಯರಿಗೆ ಅನ್ವಯವಾಗಬೇಕುʼʼ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ತಿಳಿಸಿದರು.

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?