ಯುಬಿ ಸಿಟಿಯ ಹೋಟೆಲ್‌ಗಳ ಮೇಲೆ ದಾಳಿ; 45 ಕೆಜಿ ಕೊಳೆತ ಮಾಂಸ ಪತ್ತೆ, ಕಿಚನ್ ಸೀಜ್
ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಐಷಾರಾಮಿ ಹೊಟೆಲ್‌ಗಳ ಬಂಡವಾಳ ಬಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಯಿತು.
ಆಹಾರ ಇಲಾಖೆಯ ಅಧಿಕಾರಿಗಳು ಐಷಾರಾಮಿ ಹೊಟೇಲ್‌ಗಳ ಮೇಲೆ ದಾಳಿ ನಡೆಸಿದ್ದಾರೆ -
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಧಿಕಾರಿಗಳು ಕಳೆದ ಮೂರು ದಿನಗಳಿಂದ ನಡೆಸುತ್ತಿರುವ ಕಾರ್ಯಾಚರಣೆಯಲ್ಲಿ ಐಷಾರಾಮಿ ಹೊಟೆಲ್‌ಗಳ ಬಂಡವಾಳ ಬಯಲಾಗಿದೆ. ಆಹಾರ ಸುರಕ್ಷತಾ ಇಲಾಖೆ ಆಯುಕ್ತ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಗರದ ಹಲವೆಡೆ ಏಕಕಾಲಕ್ಕೆ ದಾಳಿ ನಡೆಸಲಾಯಿತು. ಯುಬಿ ಸಿಟಿಯ ಸ್ಕೈ ಹೋಟೆಲ್‌ನಲ್ಲಿ (Raids on UB City hotels) ತಂಡವು ದಾಳಿ ನಡೆಸಿದಾಗ ಕೊಳೆತ ಮಾಂಸ ಹಾಗೂ ಹುಳ ಹಿಡಿದಿರುವ ಆಹಾರ ಸಾಮಾಗ್ರಿಗಳು ಪತ್ತೆಯಾಗಿವೆ. ಪ್ರತಿಷ್ಠಿತ ಹೋಟೆಲ್‌ನಲ್ಲಿ ಬೂಸ್ಟ್ ಬಂದಿರುವ ಮಾಂಸವನ್ನು ವಶಪಡಿಸಿಕೊಳ್ಳಲಾಗಿದೆ.
ಆಹಾರ ಇಲಾಖೆ ಆಯುಕ್ತರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹತ್ತಕ್ಕೂ ಹೆಚ್ಚು ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಂಡಗಳಾಗಿ ದಾಳಿ ನಡೆಸಿದ್ದಾರೆ. ಯುಬಿ ಸಿಟಿ ಸ್ಕೈ ಹೋಟೆಲ್ ಸೇರಿದಂತೆ ಅದರ ಸುತ್ತಮುತ್ತಲಿನ ಪ್ರತಿಷ್ಠಿತ ಹೋಟೆಲ್‌ಗಳ ಅಡುಗೆಮನೆ ಹಾಗೂ ಆಹಾರ ಸಂಗ್ರಹಣಾ ಸ್ಥಳಗಳನ್ನು ಪರಿಶೀಲಿಸಲಾಗಿದೆ.
ಅಧಿಕಾರಿಗಳ ಪರಿಶೀಲನೆ ವೇಳೆ ಕೆಲವು ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಸೇರಿದಂತೆ ವಿವಿಧ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಕೆಲವು ಕಡೆ ಅವಧಿ ಮೀರಿದ ಆಹಾರ ಹಾಗೂ ಸರಿಯಾದ ಲೇಬಲ್ ಇಲ್ಲದ ಆಹಾರ ಪದಾರ್ಥಗಳನ್ನ ಸಂಗ್ರಹಿಸಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದೆ. ದಾಳಿಯ ವೇಳೆ ಸುಮಾರು 51 ಕೆಜಿ ಆಹಾರ ಪದಾರ್ಥಗಳನ್ನ ವಶಕ್ಕೆ ಪಡೆಯಲಾಗಿದೆ. ಇದರಲ್ಲಿ ಮಾಂಸ, ಮೀನು ಹಾಗೂ ತರಕಾರಿ ಸೇರಿದಂತೆ ವಿವಿಧ ಆಹಾರ ಪದಾರ್ಥಗಳು ಸೇರಿವೆ.
ಭಾರತೀಯ ಆಹಾರ ನಿಗಮದಿಂದ ಕರ್ನಾಟಕಕ್ಕೆ 11.80 ಲಕ್ಷ ಟನ್ ಆಹಾರಧಾನ್ಯ ಪೂರೈಕೆ
ಯುಬಿ ಸಿಟಿಯ ಸ್ಕೈ ಲೌಂಜ್ ಹೋಟೆಲ್‌ನ ಅಡುಗೆಮನೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅಡುಗೆಮನೆಯ ನಿರ್ವಹಣೆಯಲ್ಲಿ ಅನೈರ್ಮಲ್ಯ ಕಂಡುಬಂದ ಹಿನ್ನೆಲೆ ಹಾಗೂ 45 ಕೆಜಿ ಕೊಳೆ ಮಾಂಸ (ಚಿಕನ್ ಹಾಗೂ ದನಸ ಮಾಂಸ) ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ಕಿಚನ್‌ನ್ನು ಸೀಜ್ ಮಾಡಿ ಲಾಕ್ ಮಾಡಿದ್ದಾರೆ. ಅಧಿಕಾರಿಗಳ ಪರಿಶೀಲನೆ ವೇಳೆ ಮಾಂಸ ಹಾಗೂ ಗೋಮಾಂಸ ಸೇರಿದಂತೆ ಕೆಲವು ಆಹಾರ ಪದಾರ್ಥಗಳು ಕೊಳೆತು ಫಂಗಸ್ ಆದ ಸ್ಥಿತಿಯಲ್ಲಿ ಮಾಂಸ ಪತ್ತೆಯಾಗಿರುವುದು ಕಂಡುಬಂದಿದೆ. ಅಲ್ಲದೇ, ಸುಮಾರು 10 ದಿನಗಳ ಅವಧಿ ಮೀರಿದ ಹಾಲು ಮತ್ತು ಮೊಸರು ಕೂಡ ಪತ್ತೆಯಾಗಿದೆ.