ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಮನಗರದ ಶಾಸಕ ಇಕ್ಬಾಲ್ ಹುಸೇನ್‌ಗೆ ಹೃದಯಾಘಾತ; ಬೆಂಗಳೂರು ಆಸ್ಪತ್ರೆಗೆ ದಾಖಲು

MLA Iqbal Hussain: ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಮನಗರದ ಶಾಸಕ ಇಕ್ಬಾಲ್ ಹುಸೇನ್ (MLA Iqbal Hussain) ಅವರಿಗೆ ಹೃದಯಾಘಾತ ಸಂಭವಿಸಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (CM DK Shivakumar) ಅವರು ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ಇಕ್ಬಾಲ್‌ ಅವರಿಗೆ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಕ್ಬಾಲ್‌ ರಾಮನಗರ ಕ್ಷೇತ್ರದ ಶಾಸಕರಾಗಿದ್ದು, 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಸ್ಪರ್ಧಿಸಿ, ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರನ್ನು ಸೋಲಿಸಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇವರಯ ಸಿಎಂ ಡಿಕೆಶಿವಕುಮಾರ್ ಆಪ್ತರಾಗಿದ್ದು, ಶಾಸಕರ ಆರೋಗ್ಯ ವಿಚಾರಿಸಲು ಸಿಎಂ ಡಿಕೆಶಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.

ಎರಡು ದಿನದ ಹಿಂದೆ ಇಕ್ಬಾಲ್‌ ಹುಸೇನ್ ಆಸ್ಪತ್ರೆಗೆ ಬಂದು ದಾಖಲಾಗಿದ್ದಾರೆ. ನಿನ್ನೆ ಇಕ್ಬಾಲ್ ಹುಸೇನ್ ಗೆ ಸ್ಟಂಟ್ ಹಾಕಲಾಗಿದೆ. ಎಲ್ಲ ಪರೀಕ್ಷೆಗಳನ್ನ ಮಾಡಿದ್ದಾಗ ಓಪನ್ ಹಾರ್ಟ್ ಸರ್ಜರಿ ಮಾಡಬೇಕಿದೆ. ನಾಳೆ ಅಥವಾ ನಾಡಿದ್ದು ಓಪನ್ ಹಾರ್ಟ್ ಸರ್ಜರಿ ಮಾಡುತ್ತೇವೆ ಎಂದು ಇಕ್ಬಾಲ್‌ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದಾರೆ

Vishakha Bhat Heggar

View all posts by this author